ಬೆಂಗಳೂರು:ನೇಣು ಬಿಗಿದುಕೊಂಡು ಮಹಿಳಾ ಸಾಫ್ಟ್​ವೇರ್​ ಉದ್ಯೋಗಿಯೊಬ್ಬರು ಸಾವಿಗೆ ಶರಣಾಗಿರುವ ಘಟನೆ ನಗರದ ಜೋಗುಪಾಳ್ಯದಲ್ಲಿ ನಡೆದಿದೆ.
ದಿವ್ಯಾ (30) ಆತ್ಮಹತ್ಯೆಗೆ ಶರಣಾದ ಟೆಕ್ಕಿ. 2014 ರಲ್ಲಿ ಅರವಿಂದ್ ಎಂಬ ಟೆಕ್ಕಿಯನ್ನು ದಿವ್ಯಾ ವಿವಾಹವಾಗಿದ್ದಳು. ಮದುವೆಯ ನಂತರ ಹಲವು ವರ್ಷಗಳಿಂದ ಗಂಡನ ಮನೆಯವರು ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಇದನ್ನೂ ಓದಿ:ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ; ಲಕ್ಷಾಂತರ ರೂಪಾಯಿ ಮೌಲ್ಯದ ಬಟ್ಟೆ, ವಸ್ತುಗಳು ಬೆಂಕಿಗಾಹುತಿ
ದಿವ್ಯಾ ಬಾಗಿಲು ಲಾಕ್ ಮಾಡಿಕೊಂಡಿದ್ದಾಳೆಂದು ಅತ್ತೆ ಮನೆಯವರಿಗೆ ಪತಿ ಅರವಿಂದ್​ ಕರೆ ಮಾಡಿದ್ದ. ಬಳಿಕ ದಿವ್ಯಾ ಕುಟುಂಬಸ್ಥರು ಬಂದು ನೋಡಿದಾಗ ಆಕೆ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಕೋಣೆಯ ಫ್ಯಾನಿಗೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾಳೆ.
ಆತ್ಮಹತ್ಯೆಗೆ ಪತಿ ಹಾಗೂ ಆತನ ಕುಟುಂಬಸ್ಥರು ಕಾರಣ. ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ದಿವ್ಯಾ ಪೊಷಕರು ಆರೋಪ ಮಾಡಿದ್ದಾರೆ. ಅಲ್ಲದೆ, ದೂರು ಸಹ ದಾಖಲಾಗಿದ್ದು, ಇದರ ಬೆನ್ನಲ್ಲೇ ಹಲಸೂರು ಪೊಲೀಸರು ಆರೋಪಿ ಅರವಿಂದ್​ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಸಂಬಂಧ ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಚಾರಣೆ ಮುಂದುವರಿದಿದೆ.(ದಿಗ್ವಿಜಯ ನ್ಯೂಸ್​)
https://www.vijayavani.net/complaint-against-ias-officer-akash-shankar-by-his-wife-vandana
ಆಸ್ಟ್ರೇಲಿಯಾ ಕಡಲ ತೀರದಲ್ಲಿ ನಿಗೂಢ ವಸ್ತು ಪತ್ತೆ: ಹತ್ತಿರ ಹೋಗದಂತೆ ಪೊಲೀಸ್​ ಇಲಾಖೆಯಿಂದ ಎಚ್ಚರಿಕೆ

ಹೆಂಡತಿ ಸೋತಿದ್ದಕ್ಕೆ, ಅಪ್ಪನ ಪ್ರಾಣವನ್ನೇ ತೆಗೆದ ಮಗ..!?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × three =
Remember me
