ಬೆಂಗಳೂರು:ಬಾಡಿಗೆ ಮನೆ ಕೇಳುವ ನೆಪದಲ್ಲಿ ಮನೆಯ ಮಾಲೀಕರಿಗೆ ದೊಣ್ಣೆಯಿಂದ ಹೊಡೆದ ಮಹಿಳೆ, 80 ಸಾವಿರ ರೂ. ಮೌಲ್ಯದ ಚಿನ್ನದ ಸರ ಕಳ್ಳತನ ಮಾಡಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾಳೆ. ಸಿಸಿಟಿವಿ ದೃಶ್ಯವನ್ನು ಆಧರಿಸಿ ಆರೋಪಿ ಲಕ್ಷ್ಮಿಯನ್ನು(38) ಬಂಧಿಸಿದ ನಂದಿನಿ ಲೇಔಟ್ ಪೊಲೀಸರು, ಈ ಕುರಿತು ಹೆಚ್ಚಿನ ವಿಚಾರಣೆಯನ್ನು ನಡೆಸುತ್ತಿದ್ದಾರೆ.
ಇದನ್ನೂ ಓದಿ:ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಮತಾಂತರ ನಿಷೇಧ, ಎಪಿಎಂಸಿ ಕಾಯ್ದೆ ರದ್ದು: ಎಚ್​.ಕೆ. ಪಾಟೀಲ್​
ಘಟನೆಯ ವಿವರ: ಮೇ 25 ರಂದು ಶಾಂತಮ್ಮ ಎಂಬುವವರ ಬಳಿ ಮನೆ ಬಾಡಿಗೆಗೆ ಇದೆಯಾ ಎಂದು ಕೇಳಿದ ಲಕ್ಷ್ಮೀ, ಶಾಂತಮ್ಮ ಅವರಿಗೆ ದೊಣ್ಣೆಯಿಂದ ಹೊಡೆದು ಅವರಿಂದ 20 ಗ್ರಾಂ ಚಿನ್ನದ ಸರವನ್ನು ಕದ್ದು ಪರಾರಿಯಾಗಿದ್ದಾಳೆ. ಈ ಪ್ರಕರಣ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಬೆನ್ನಲ್ಲೇ ಪೊಲೀಸರು ಆರೋಪಿ ಲಕ್ಷ್ಮೀಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ:ಸ್ನೇಹಿತನನ್ನ ನಗ್ನಗೊಳಿಸಿ ರಸ್ತೆ ತುಂಬಾ ಅಟ್ಟಾಡಿಸಿದ ಮೂವರು ಯುವಕರು ಅರೆಸ್ಟ್​​!
ಆರೋಪಿ ಲಕ್ಷ್ಮಿ ಬಳಿಯಿದ್ದ 80 ಸಾವಿರ ಮೌಲ್ಯದ 20 ಗ್ರಾಂ ಚಿನ್ನದ ಸರವನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಹೆಚ್ಚಿನ ವಿಚಾರಣೆ ನಡೆಸಿದಾಗ ಈ ಹಿಂದೆಯೂ ಕೂಡ ಇದೇ ರೀತಿಯಲ್ಲಿ ಕೃತ್ಯ ಎಸಗಿರೋದು ಬೆಳಕಿಗೆ ಬಂದಿದೆ.
‘ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸ್ವೀಕಾರ 4-5 ದಿನ ವಿಳಂಬವಾಗಲಿದೆ’: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + nine =
Remember me
