ಬೆಂಗಳೂರು:ವಲಸೆ ಕಾರ್ಮಿಕರ ವರ್ತನೆಯಿಂದ ಬೇಸತ್ತು ಅವರ ಮೇಲೆ ಹಲ್ಲೆಗೆ ಮುಂದಾದ ಎಎಸ್‌ಐ ಒಬ್ಬರು ಈಗ ಅಮಾನತು ಶಿಕ್ಷೆ ಎದುರಿಸುವಂತಾಗಿದೆ. ಕಾಡುಗೊಂಡನಹಳ್ಳಿ ಪೊಲೀಸ್ ಠಾಣೆಯ ಎಎಸ್‌ಐ ರಾಜಾಸಾಬ್ ಅಮಾನತಗೊಂಡವರು. ಪೂರ್ವ ವಿಭಾಗ ಡಿಸಿಪಿ ಡಾ. ಎಸ್.ಡಿ ಶರಣಪ್ಪ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿಕನಕಪುರದಲ್ಲಿ ಸ್ಫೋಟಕ ಪತ್ತೆ
ತಮ್ಮ ಊರಿಗೆ ತೆರಳುವುದಕ್ಕಾಗಿ ನೋಂದಣಿ ಮಾಡಿಸಿಕೊಳ್ಳಲು ಪೊಲೀಸ್ ಠಾಣೆಗೆ ಉತ್ತರ ಪ್ರದೇಶ ಮೂಲದ ಕಾರ್ಮಿಕರು ಸೋಮವಾರ ಬಂದಿದ್ದರು. ಅವರಲ್ಲಿ ಕೆಲವರು ಪದೇಪದೆ ಕೇಳಿದ್ದನ್ನೇ ಕೇಳುತ್ತಿದ್ದರು. ಮತ್ತು ಪೊಲೀಸರು ನೀಡಿದ ನಿರ್ದೇಶನಗಳನ್ನು ಪಾಲಿಸದೇ ಇದ್ದುದರಿಂದ ರಾಜಾಸಾಬ್ ಕೆರಳಿದ್ದರು.
ಸಿಟ್ಟಿನ ಭರದಲ್ಲಿ ಅವಾಚ್ಯವಾಗಿ ನಿಂದಿಸಿದ್ದಲ್ಲದೆ, ಕೈಯಿಂದ ಹೊಡೆಯಲು ಮುಂದಾಗಿದ್ದರು. ಕಾಲಿನಿಂದ ಒದೆಯಲು ಹೋದ ದೃಶ್ಯ ಕೂಡ ವಿಡಿಯೋದಲ್ಲಿ ಸೆರೆಯಾಗಿತ್ತು. ಉತ್ತರ ಪ್ರದೇಶದ ವಲಸೆ ಕಾರ್ಮಿಕರ ಜತೆಗಿನ ಈ ಅಸಭ್ಯ ವರ್ತನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಟೆಲಿವಿಷನ್ ಮಾಧ್ಯಮಗಳಲ್ಲೂ ಪ್ರಸಾರವಾಗಿತ್ತು.
ಇದನ್ನೂ ಓದಿರವಿ ಚನ್ನಣ್ಣನವರ್​​ ತಮ್ಮ ತಾಯಿಯ ಫೋಟೋ ಹಾಕಿ ಏನು ಹೇಳಿದ್ರು…?
ಕೆಲವರು ಇದನ್ನು ಟ್ವಿಟರ್‌ನಲ್ಲಿ ಹಾಕಿ ಇದಕ್ಕೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಟ್ಯಾಗ್ ಮಾಡಿದ್ದರು. ಈ ಕಾರ್ಮಿಕರ ನೆರವಿಗೆ ಧಾವಿಸುವಂತೆ ಮನವಿಯನ್ನೂ ಮಾಡಿದ್ದರು. ಇದಾಗಿ ಕೆಲವೇ ಗಂಟೆಗಳಲ್ಲಿ ಎಎಸ್‌ಐ ರಾಜಾಸಾಬ್ ಅಮಾನತು ಆದೇಶ ಹೊರಬಿದ್ದಿದೆ.
https://www.instagram.com/p/CADLZ2KHWH4/?igshid=ohx5k9g3yywo
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + sixteen =
Remember me
