ಬೆಂಗಳೂರು:ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ-ಮಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್‌ನ  ಕಾಡುಗೋಡಿಯಲ್ಲಿ ನಡೆದಿದೆ.
ತಾಯಿ ಸೌಂದರ್ಯ, ಮಗಳು ಲೀಲಾ ಮೃತರು. ಇಂದು ಬೆಳಗಿನ ಜಾವ 5 ಗಂಟೆ ವೇಳೆಗೆ ದುರ್ಘಟನೆ ನಡೆದಿದೆ. ನೆಲದಲ್ಲಿ ಬಿದ್ದಿದ್ದ ವಿದ್ಯುತ್ ತಂತಿ ಕಾಣಿಸದೇ ಅದನ್ನು ತುಳಿದ ಕಾರಣ ವಿದ್ಯುತ್ ಪ್ರವಹಿಸಿ ಇಬ್ಬರು ಸಾವನ್ನಪ್ಪಿದ್ದಾರೆ.
ಈ ದಿನ ಬೆಳಿಗ್ಗೆ 6:00 ಘಂಟೆಗೆ ತಾಯಿ ಹಾಗೂ ಮಗಳು ತಮಿಳುನಾಡಿನಿಂದ ಬೆಂಗಳೂರಿನ ಮನೆಗೆ ಬರುತ್ತಿದ್ದ ವೇಳೆ ವಿದ್ಯುತ್ ತಂತಿ ತುಳಿದಿದ್ದಾರೆ. ರಸ್ತೆ ಬದಿ ತಂತಿ ತುಂಡಾಗಿ ನೆಲದಲ್ಲಿ ಬಿದ್ದಿತ್ತು. ಕತ್ತಲಲ್ಲಿ ತಂತಿ ಕಾಣಿಸದೇ ಹೋಗಿದ್ದರಿಂದ ಅದನ್ನು ತುಳಿದಿದ್ದ ತಾಯಿ ಹಾಗೂ ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಸಂಬಂಧಿಸಿದ ಬೆಸ್ಕಾಂ ಅಧಿಕಾರಿಗಳನ್ನು ಮತ್ತು ಸಿಬ್ಬಂದಿಗಳನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × one =
Remember me
