ಬೆಂಗಳೂರು:ಮನೆಯ ಆವರಣದಲ್ಲಿದ್ದ ವಿದ್ಯುತ್ ಕಂಬ ತೆರವು ಮಾಡುವ ಸಲುವಾಗಿ 25 ಸಾವಿರ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದ ಕಸ್ತೂರಿನಗರ ಕಾರ್ಯಾಚರಣೆ ಮತ್ತು ನಿರ್ವಹಣೆ ಉಪ‌ವಿಭಾಗದ ಸಹಾಯಕ ಎಂಜಿನಿಯರ್ ವಿದ್ಯಾ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.
ಬೆಸ್ಕಾಂ ಕಸ್ತೂರಿನಗರ ಕಚೇರಿ ವ್ಯಾಪ್ತಿಯಲ್ಲಿ ಮನೆಯೊಂದರ ಆವರಣದಲ್ಲಿದ್ದ ವಿದ್ಯುತ್ ಕಂಬ ಸ್ಥಳಾಂತರ ಕಾಮಗಾರಿ ನಡೆಯುತ್ತಿತ್ತು. ನಾರಾಯಣಪುರ ನಿವಾಸಿ ಅರವಿಂದ್ ಎಂಬ ಎಲೆಕ್ಟ್ರಿಕಲ್ ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡಬೇಕಿತ್ತು. ಅವರು ಕಚೇರಿಯನ್ನು ಸಂಪರ್ಕಿಸಿದ್ದಾಗ ಕಾರ್ಯಾದೇಶ ನೀಡಲು 25,000 ಲಂಚ ಕೊಡುವಂತೆ ಬೇಡಿಕೆ ಇಟ್ಟಿದ್ದರು.
ಇದನ್ನೂ ಓದಿ:ಬೇರೊಬ್ಬಳೊಂದಿಗೆ ಓಡಿ ಹೋದ ಪತಿ; ಗಂಡನ ಜತೆಗೆ ಹೋದವಳ ಪತಿಯನ್ನೇ ವಿವಾಹವಾದ ಮಹಿಳೆ
ಸಹಾಯಕ ಎಂಜಿನಿಯರ್ ಲಂಚಕ್ಕೆ ಬೇಡಿಕೆ ಇಟ್ಟಿರುವ ಕುರಿತು ಲೋಕಾಯುಕ್ತದ ಬೆಂಗಳೂರು ನಗರ‌ ಪೊಲೀಸ್ ಘಟಕಕ್ಕೆ ಅರವಿಂದ್ ದೂರು ನೀಡಿದ್ದರು. ಬುಧವಾರ ಕಸ್ತೂರಿನಗರದ ಬೆಸ್ಕಾಂ ಕಚೇರಿಯಲ್ಲೇ ಲಂಚ ಪಡೆಯುತ್ತಿದ್ದಾಗ ದಾಳಿ ಮಾಡಿದ ಲೋಕಾಯುಕ್ತ ಡಿವೈಎಸ್​​ಪಿ ಉಮಾದೇವಿ ಆರ್. ಮತ್ತು ತಂಡ ಆರೋಪಿ ವಿದ್ಯಾ ಅವರನ್ನು ವಶಕ್ಕೆ ಪಡೆದಿದ್ದಾರೆ.
VIDEO| ಬ್ಯಾಡ್ಮಿಂಟನ್ ಆಡುತ್ತಿದ್ದಾಗ ಹೃದಯಾಘಾತದಿಂದ ಕುಸಿದು ಬಿದ್ದು ಪ್ರಾಣ ಬಿಟ್ಟ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + eleven =
Remember me
