ಬೆಂಗಳೂರು:ವಿದ್ಯುತ್ ಶುಲ್ಕ ಪಾವತಿಗೆ ಬಿಲ್ ನೀಡಿದ ದಿನದಿಂದ 6 ತಿಂಗಳು ಕಾಲಾವಕಾಶ ಇರಲಿದೆ ಎಂಬ ಸುಳ್ಳು ವದಂತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗುತ್ತಿದ್ದು, ಇದನ್ನು ಯಾರು ನಂಬಬಾರದು ಎಂದು ಗ್ರಾಹಕರಿಗೆ ಬೆಸ್ಕಾಂ ಮನವಿ ಮಾಡಿದೆ.
ಸುಳ್ಳು ಸುದ್ದಿ ಹರಡುವುದರ ಜತೆಗೆ ಗ್ರಾಹಕರನ್ನು ವಂಚಕರು ಆನ್‌ಲೈನ್‌ನಲ್ಲಿ ಯಾಮಾರಿಸುವ ಕೆಲಸ ಮಾಡುತ್ತದ್ದಾರೆ. ನಿಮ್ಮ ವಿದ್ಯುತ್ ಬಿಲ್ ಪಾವತಿಸದಿದ್ದರೆ ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತೇವೆ ಎಂದು ಸಂದೇಶ ಕಳುಹಿಸಿ ವಂಚಿಸುವ ಜಾಲದ ಬಗ್ಗೆ ಎಚ್ಚರದಿಂದಿರಬೇಕು. ಇಂಥ ಅಪಪ್ರಚಾರ ಮಾಡುತ್ತಿರುವವರ ಬಗ್ಗೆ ಮಾಹಿತಿ ಇದ್ದಲ್ಲಿ ದೂ: 9448042375, 9448094802ಕ್ಕೆ ಕರೆ ಮಾಡುವಂತೆ ಬೆಸ್ಕಾಂ ಸಲಹೆ ನೀಡಿದೆ.
ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಕಾಲಕಾಲಕ್ಕೆ ಅನುಮೋದಿಸುವ ದರದಲ್ಲಿ ಗ್ರಾಹಕರು ಬಳಸುವ ವಿದ್ಯುತ್‌ಗೆ ಬೆಸ್ಕಾಂ ವಿದ್ಯುತ್ ಶುಲ್ಕವನ್ನು ಸಂಗ್ರಹಿಸುತ್ತಿದ್ದು, ಬಿಲ್ ವಿತರಿಸಿದ ದಿನದಿಂದ 15 ದಿನಗಳು ಪಾವತಿಗೆ ಅವಕಾಶ ಇರುತ್ತದೆ. ಗ್ರಾಹಕರಿಗೆ ನೀಡುವ ಮಾಸಿಕ ಬಿಲ್‌ನ ಹಿಂಬದಿಯಲ್ಲಿ ಬಿಲ್ ಪಾವತಿಸಲು ಅಂತಿಮ ಗಡುವು ಸೇರಿ ಇತರೆ ಮಾಹಿತಿ ನಮೂದಿಸಲಾಗುತ್ತದೆ. ಗ್ರಾಹಕರು ನಿಗದಿತ ಅವಧಿಯೊಳಗೆ ಹಣ ಪಾವತಿ ಮಾಡದಿದ್ದಲ್ಲಿ ಗಡುವು ದಿನಾಂಕದ ನಂತರ 15 ದಿನಗಳ ಕಾಲಾವಧಿಯ ನೋಟಿಸ್ ಜಾರಿ ಮಾಡಿ ಬಾಕಿ ಪಾವತಿಸದ ಪ್ರಯುಕ್ತ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸುವುದಾಗಿ ಬೆಸ್ಕಾಂ ಹೇಳಿದೆ.
ವಾಡಿಕೆಗಿಂತ ಹೆಚ್ಚು ಮಳೆ: ಕರಾವಳಿಯಲ್ಲಿ ಮುಂದುವರಿಯಲಿದೆ ವರುಣನ ಆರ್ಭಟ- ರೆಡ್ ಅಲರ್ಟ್ ಘೋಷಣೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + 1 =
Remember me
