ಬೆಂಗಳೂರು:ಡೆಂಘೀ‌ ನಿಯಂತ್ರಣ ಕ್ರಮಗಳ ಜೊತೆಗೆ ಝೀಕಾ ವೈರಸ್ ಬಗ್ಗೆಯೂ ಅಲರ್ಟ್ ಆಗಿರುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಸಿಇಒ ಅವರಿಗೆ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ:ಪೋಕ್ಸೋ ಪ್ರಕರಣ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಮತ್ತೆ ಸಮನ್ಸ್
ಬೆಂಗಳೂರಿನಲ್ಲಿ ಇಂದು ಡಿಸಿ, ಸಿಇಒ ಹಾಗೂ ಸ್ಥಳೀಯ ಪಾಲಿಕೆಯ ಅಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಸಚಿವರು, ಡೆಂಘೀ ಹಾಟ್ ಸ್ಪಾಟ್ ಗಳನ್ನ ಪತ್ತೆ ಹಚ್ಚಿ ಮುಂಜಾಗೃತ ಕ್ರಮಗಳನ್ನ ಕೈಗೊಳ್ಳುವಂತೆ ಸೂಚಿಸಿದರು.‌
ರಾಜ್ಯದಲ್ಲಿ ಡೆಂಗಿ ನಿಯಂತ್ರಣ ಕುರಿತಂತೆ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಒಗಳು ಮತ್ತು ಜಿಲ್ಲಾ ಆರೋಗ್ಯಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದೆ.
ಜಿಲ್ಲೆಗಳಲ್ಲಿ ಎಲ್ಲಾ ಆರೋಗ್ಯ ಕೇಂದ್ರಗಳು, ಆಸ್ಪತ್ರೆಗಳು ಮತ್ತು ಆರೋಗ್ಯ ಸಿಬ್ಬಂದಿ ಡೆಂಗಿ ಪ್ರಕರಣಗಳನ್ನು ನಿರ್ವಹಿಸಲು…pic.twitter.com/aIPEnSmdv7
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao)July 4, 2024

ಫೀವರ್ ಕ್ಲಿನಿಕ್ ತೆರೆಯಿರಿ:ಎಲ್ಲಿ ಹೆಚ್ಚು ಡೆಂಘೀ ಪ್ರಕರಣಗಳು ಕಂಡುಬರುತ್ತವೆ, ಅಂತಹ ಸ್ಥಳಗಳಲ್ಲಿ ಫೀವರ್ ಕ್ಲಿನಿಕ್ ತೆರೆಯಲು ಸಲಹೆ ನೀಡಿದರು. ಇಂಥಹ ಪ್ರದೇಶಗಳಲ್ಲಿ ಯಾರಿಗೆ ಜ್ವರ ಕಂಡುಬಂದರು, ಕಡ್ಡಾಯವಾಗಿ ಡೆಂಘೀ ಟೆಸ್ಟಿಂಗ್ ಗೆ ಒಳಪಡಿಸಿ. ಆರಂಭದಲ್ಲೇ ಡೆಂಘೀ ಪತ್ತೆ ಆದರೆ ಚಿಕಿತ್ಸೆ ನೀಡಿ ಗುಣಪಡಿಸಬಹುದು. ವಿಳಂಬವಾದಾಗ ಸಾವುಗಳು ಸಂಭವಿಸುತ್ತವೆ. ಸಾವುಗಳಾಗದಂತೆ ಮುನ್ನೆಚ್ಚರಿಕೆ ವಹಿಸುವುದು ಆದ್ಯತೆಯಾಗಬೇಕು ಎಂದು ಅಧಿಕಾರಿಗಳಿಗೆ ಹೇಳಿದರು.
ಜಾಗೃತಿ ಮೂಡಿಸಿ:ಜನರಿಗೆ ಜಾಗೃತಿ ಮೂಡಿಸಲು ಜಿಲ್ಲಾಡಳಿತ ಮುಂದಾಗಬೇಕು.‌ ಮನೆ ಮನೆಗೆ ಆಶಾ ಕಾರ್ಯಕರ್ತರ ಭೇಟಿ ಮಾಡಬೇಕು. ಮೆಡಿಕಲ್ ಆಫಿಸರ್ಸ್ ಸ್ಕೂಲ್ ಗಳಿಗೆ ಭೇಟಿ ನೀಡಿ ವಿಜ್ಞಾನ ಶಿಕ್ಷಕರ ಮೂಲಕ ಮಕ್ಕಳಲ್ಲಿ ಡೆಂಘೀ ಕುರಿತು ತಿಳಿಹೇಳಬೇಕು. ಪ್ರಮುಖವಾಗಿ ಲಾರ್ವಾ ಉತ್ಪತ್ತಿ ಕಂಡುಬಂದಲ್ಲಿ, ಅದನ್ನ ನಾಶ ಪಡಿಸುವ ಕೆಲಸ ಆದ್ಯತೆಯ ಮೇಲೆ ಕೈಗೊಳ್ಳಿ ಎಂದು ಸಿಇಒ ಹಾಗೂ ಸ್ಥಳೀಯ ಸಂಸ್ಥೆಯ ಅಧಿಕಾರಿಗಳಿಗೆ ಆರೋಗ್ಯ ಸಚಿವರು ಸೂಚನೆ ನೀಡಿದರು.‌
ಜಿಲ್ಲಾವಾರು ಡೆಂಘೀ ಕೇಸ್ ಗಳನ್ನು ಪ್ರಕಟಿಸಲು ಹೇಳಿದ ಸಚಿವರು, ಶಿಕ್ಷಣ ಇಲಾಖೆ ಸೇರಿ ಎಲ್ಲಾ ಇಲಾಖೆಯವರು ಕೂಡ ವಾರಕ್ಕೆ ಒಂದು ದಿನ ಶುಕ್ರವಾರ ಫೀಲ್ಡ್ ಗಿಳಿದು ಕೆಲಸ ಮಾಡ್ಬೇಕು ಎಂದರು.‌ ಒಂದು‌ ಗಂಟೆಯ ಕಾಲವಾದರು ಡೆಂಘೀ ನಿವಾರಣೆಗೆ ಮೀಸಲಿಡಲು ಜಿಲ್ಲಾ ಮಟ್ಟದ ಅಧಿಕಾರಿಗಳು ಮುಂದಾಗಬೇಕು.‌ ಡೆಂಘೀ ಟೆಸ್ಟ್ ಗೆ ನಿಗದಿ ಮಾಡಿರುವ ದರವನ್ನ ಕಡ್ಡಾಯವಾಗಿ ಪಾಲಿಸಲು ಕ್ರಮ‌ ವಹಿಸುವಂತೆಯೂ ಆರೋಗ್ಯ ಸಚಿವ ದಿನೇಶ್ ಗೂಂಡೂರಾವ್ ಅಧಿಕಾರಿಗಳಿಗೆ ಸೂಚಿಸಿದರು.
ಈಡಿಸ್ ಸೊಳ್ಳೆಯಿಂದಲೇ ಝೀಕಾ ವೈರಸ್ ಕೂಡ ಕಂಡು ಬರುತ್ತದೆ. ಪಕ್ಕದ ರಾಜ್ಯದಲ್ಲಿ ಝೀಕಾ ವೈರಸ್ ಕಂಡುಬಂದಿರುವುದರಿಂದ ರಾಜ್ಯದಲ್ಲೂ ಎಚ್ವರಿಕೆ ವಹಿಸುವುದು ಅಗತ್ಯವಾಗಿದೆ. ಶಿವಮೊಗ್ಗದಲ್ಲಿ ಒಂದು ಶಂಕಿತ ಝೀಕಾ ಕೇಸ್ ಪತ್ತೆಯಾಗಿದೆ. ‌ಆದರೆ ಇನ್ನೂ ಕನ್ಪರ್ಮ್ ಆಗಿಲ್ಲ‌. ಝೀಕಾ ಅಷ್ಟೇನು ಅಪಾಯಕಾರಿ ಅಲ್ಲದಿದ್ದರೂ ಅಲರ್ಟ್ ಆಗಿರುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸಚಿವರು ಹೇಳಿದರು.
ಪ್ರಧಾನಿ ಮೋದಿ ಭೇಟಿ ಮಾಡಿದ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:14 − nine =
Remember me
