ಬೆಂಗಳೂರು: ಭ್ರಷ್ಟಾಚಾರಕ್ಕೆ ಪೂರ್ತಿ ಕಡಿವಾಣ ಬೀಳಬೇಕು, ಇದರ ಬಗ್ಗೆ ಎಲ್ಲರೂ ಜಾಗರೂಕತೆಯಿಂದ ವರ್ತಿಸಿ ಎಂದು ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಸಂಪುಟ ಸದಸ್ಯರನ್ನು ಎಚ್ಚರಿಸಿದ್ದಾರೆ.ಹೊಸ ಸರ್ಕಾರ ರಚನೆಯಾದ ಬಳಿಕ ವರ್ಗಾವಣೆ ಕುರಿತು ಸರ್ಕಾರ ಗುರುತರ ಆರೋಪ ಎದುರಿಸಿತ್ತು. ಈ ಹಿನ್ನೆಲೆಯಲ್ಲಿ ಪ್ರತಿಪಕ್ಷ ಸಾಕಷ್ಟು ಟೀಕೆ ಟಿಪ್ಪಣಿ ಮಾಡಿತ್ತು. ಇದರ ಬಗ್ಗೆ ಮಾಹಿತಿ ಕಲೆ ಹಾಕಿದ್ದ ಹೈಕಮಾಂಡ್, ಬುಧವಾರ ದೆಹಲಿಯಲ್ಲಿ ನಡೆದ ಸಭೆಯಲ್ಲಿ ಭ್ರಷ್ಟಾಚಾರ ಕುರಿತು ಎಚ್ಚರಿಕೆಯಿಂದ ಇರುವಂತೆ ಪಾಠ ಮಾಡಿದೆ.ಅಧಿಕಾರ ಕೈಯಲ್ಲಿ ಇದ್ದಾಗ ಭ್ರಷ್ಟಾಚಾರದ ಆರೋಪ ಬಂದೆ ಬರುತ್ತದೆ. ಈ ರೀತಿಯ ಆರೋಪದಿಂದ ದೂರ ಇರಿ. ನೀವೆಲ್ಲ ಈಗ ಭ್ರಷ್ಟಾಚಾರ ಮಾಡಿದ್ದೀರಿ ಎಂದು ನಾವು ಹೇಳುತ್ತಿಲ್ಲ. ಆದರೆ ಭ್ರಷ್ಟಾಚಾರದ ಬಗ್ಗೆ ಎಚ್ಚರ ವಹಿಸಿ. ಭ್ರಷ್ಟಾಚಾರ ಮುಕ್ತ ಸರ್ಕಾರ ಎಂಬಂತೆ ಅಧಿಕಾರ ಮಾಡಬೇಕು ಎಂದು ದೆಹಲಿ ನಾಯಕರು ಸಚಿವರಿಗೆ ತಿಳಿಹೇಳಿದ್ದಾರೆ.ರಾಜ್ಯದ ಬಿಜೆಪಿ ಬಗ್ಗೆ ಜನರಿಗೆ ಒಳ್ಳೆ ಅಭಿಪ್ರಾಯವಿಲ್ಲ. ಇದನ್ನ ನಾವು ಸದುಪಯೋಗಪಡಿಸಿಕೊಳ್ಳಬೇಕು. ಅವರ ಬಗೆಗಿನ ನಕಾರಾತ್ಮಕ ಅಂಶ ನಮಗೆ ಧನಾತ್ಮಕ ಅಂಶವಾಗಿ ಪರಿವರ್ತನೆಯಾಗಬೇಕು ಎಂದು ಹಿತವಚನ ಹೇಳಿಕಳಿಸಿದ್ದಾರೆ ಎಂದು ಕಾಂಗ್ರೆಸ್‌ನ ಉನ್ನತ ಮೂಲಗಳು ತಿಳಿಸಿವೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:5 × three =
Remember me
