ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಭಜರಂಗದಳ ಮುಖಂಡರೊಬ್ಬರ ಶವ ಪತ್ತೆಯಾಗಿದ್ದು, ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದೆ.
ಭಜರಂಗದಳ ಕಲ್ಲಡ್ಕ ಪ್ರಖಂಡದ ಗೋ ರಕ್ಷಾ ಪ್ರಮುಖ್ ರಾಜೇಶ್ ಪೂಜಾರಿ(26) ಮೃತ. ಪಾಣೆಮಂಗಳೂರು ಹಳೆಯ ಸೇತುವೆಯ ಬಳಿ ನೇತ್ರಾವತಿ ನದಿಯಲ್ಲಿ ರಾಜೇಶ್​ ಪೂಜಾರಿ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ. ಸೇತುವೆಯಲ್ಲಿ ದ್ವಿಚಕ್ರ ವಾಹನ ಪತ್ತೆಯಾದ ಹಿನ್ನೆಲೆ ಸಂಶಯಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಮುಳುಗು ತಜ್ಞರ ತಂಡ ಶೋಧಕಾರ್ಯಾಚರಣೆ ನಡೆಸಿದಾಗ ರಾಜೇಶ್ ಪೂಜಾರಿ ಶವ ಪತ್ತೆಯಾಗಿದೆ.
ರಾಜೇಶ್ ಪೂಜಾರಿ ಸಾವು ಆತ್ಮಹತ್ಯೆಯೋ, ಅಪಘಾತವೋ ಅಥವಾ ಕೊಲೆಯೋ ಎಂಬ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಸತ್ಯಾಸತ್ಯತೆ ತಿಳಿಯಲಿದೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಡಿ.ಕೆ. ಶಿವಕುಮಾರ್​ ವಿರುದ್ಧ ಗಂಭೀರ ಆರೋಪ ಮಾಡಿದ ಸಂಸದೆ ಸುಮಲತಾ ಅಂಬರೀಷ್​!

ಬೆಂಗಳೂರಿನ ರೈಲ್ವೆ ನಿಲ್ದಾಣದಲ್ಲೇ ಹೃದಯಾಘಾತ: ಶ್ರೀ ವೀರಮಹಾಂತ ಸ್ವಾಮೀಜಿ ನಿಧನ

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:7 − 3 =
Remember me
