ಬೆಂಗಳೂರು:ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ‌ ಕೇಂದ್ರ ಸರ್ಕಾರ‌ ‘ಭಾರತ್ ಬ್ರ್ಯಾಂಡ್’ ಅಕ್ಕಿ ವಿತರಣೆ ಬಂದ್ ಮಾಡಿದೆ. ನಾವು ಅನ್ನಭಾಗ್ಯ ಯೋಜನೆಗೆ ಕೇಳಿದಾಗ ದುರುದ್ದೇಶಪೂರ್ವಕವಾಗಿ ಕೊಡಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.
ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ ರಾಂ ಪುಣ್ಯತಿಥಿ ಅಂಗವಾಗಿ ವಿಧಾನಸೌಧ ಪಶ್ಚಿಮ ದ್ವಾರದ ಬಳಿ ಅವರ ಪ್ರತಿಮೆಗೆ ಶನಿವಾರ ಪುಷ್ಪ ನಮನ ಸಲ್ಲಿಸಿದ ಬಳಿಕ ಸುದ್ದಿಗಾರರ ಜತೆಗೆ ಅವರು ಮಾತನಾಡಿದರು.
ನಾವು ಅನ್ನಭಾಗ್ಯ ಯೋಜನೆಗೆ ಅಕ್ಕಿಯನ್ನು ಕೇಳಿದಾಗ, ಭಾರತೀಯ ಆಹಾರ ನಿಗಮದಲ್ಲಿ ದಾಸ್ತಾನಿದ್ದರೂ ನೀಡಲಿಲ್ಲ. ಕೇಂದ್ರ ಸರ್ಕಾರ ಉದ್ದೇಶಪೂರ್ವಕವಾಗಿ ಅಕ್ಕಿ ನೀಡದ ಕಾರಣ ನಾವು ಜನರಿಗೆ ಹೆಚ್ವುವರಿಯಾಗಿ ಹಣ ನೀಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು ಎಂದರು.
ಕೇಂದ್ರ ಸರ್ಕಾರ ಆರಂಭಿಸಿದ್ದ ʻಭಾರತ್‌ ಅಕ್ಕಿʼ ಯೋಜನೆ ಸ್ಥಗಿತಗೊಳಿಸಿದೆ, ಚುನಾವಣೆಗೋಸ್ಕರ ಈ ಯೋಜನೆ ಆರಂಭಿಸಿರುವುದು ಇದರಿಂದ ಸ್ಪಷ್ಟವಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಛೇಡಿಸಿದರು.
ಹಸಿರು ಕ್ರಾಂತಿಯ ಹರಿಕಾರ ಎಂದೇ ಹೆಸರಾಗಿರುವ ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನರಾಂ ಅವರು ದೇಶದ ಜನರಿಗೆ ಆಹಾರ ಭದ್ರತೆಯನ್ನು ಒದಗಿಸಿದ ಮಹಾನ್‌ ವ್ಯಕ್ತಿ ಎಂದು ಗುಣಗಾನ ಮಾಡಿದರು.
ಸ್ವಾತಂತ್ರ್ಯ ದೊರೆತ ಸಂದರ್ಭದಲ್ಲಿ ದೇಶದಲ್ಲಿ ತೀವ್ರ ಆಹಾರದ ಕೊರತೆಯುಂಟಾಗಿ, ಬೇರೆ ದೇಶಗಳ ಮುಂದೆ ಬೇಡಬೇಕಾದ ಪರಿಸ್ಥಿತಿ ಇತ್ತು. ಹೊಸ ತಳಿಗಳ ಅಭಿವೃದ್ದಿ ಸೇರಿದಂತೆ ಹಲವು ಕ್ರಮಗಳ ಮೂಲಕ ಜಗಜೀವನರಾಂ ಅವರು ಆಹಾರ ಭದ್ರತೆಯನ್ನು ಒದಗಿಸಿದರು.
ಜಗಜೀವನರಾಂ ಅವರು ರಕ್ಷಣಾ ಇಲಾಖೆ ಸೇರಿದಂತೆ ಯಾವುದೇ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದರೂ, ದಕ್ಷ ಆಡಳಿತ ನೀಡಿದ್ದಾರೆ. ಕಾರ್ಮಿಕರ ಪರವಾಗಿ ಅನೇಕ ಕಾಯ್ದೆಗಳನ್ನು ರಚಿಸಿದ ಕೀರ್ತಿ ಅವರದು. ಬಡವರು, ರೈತರು, ಕೂಲಿ ಕಾರ್ಮಿಕರ ಪರವಾಗಿ ನಿರಂತರವಾಗಿ ಅವರು ಹೋರಾಟ ನಡೆಸಿದ್ದಾರೆ. ಅವರು ತೋರಿದ ಹಾದಿಯಲ್ಲಿ ನಡೆಯುವ ಸಂಕಲ್ಪವನ್ನು ಈ ದಿನ ನಾವು ಮಾಡಬೇಕಾಗಿದೆ ಎಂದರು.
ಸುಮಾರು 3ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಡಾ.ಬಾಬು ಜಗಜೀವನರಾಂ ಭವನವನ್ನು ಜುಲೈ 13ರಂದು ಲೋಕಾರ್ಪಣೆ ಮಾಡಲಾಗುವುದು. ಈ ಹಿಂದೆ ನಮ್ಮ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಈ ಭವನದ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಲಾಗಿತ್ತು. ಅರ್ಹ ಅಭ್ಯರ್ಥಿಗಳಿಗೆ ವಿಜ್ಞಾನ, ಕೌಶಲ್ಯ ಅಭಿವೃದ್ಧಿ ತರಬೇತಿಯನ್ನು ಸಹ ಈ ಭವನದಲ್ಲಿ ಒದಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + 15 =
Remember me
