ಮಂಡ್ಯ:ಕಾಂಗ್ರೆಸ್ ಯುವನಾಯಕ ರಾಹುಲ್‌ಗಾಂಧಿ ಅವರು ಜಿಲ್ಲೆಯಲ್ಲಿ ನಡೆಸಿದ ಭಾರತ್ ಜೋಡೋ ಪಾದಯಾತ್ರೆ ಶುಕ್ರವಾರ ಮುಕ್ತಾಯವಾಯಿತು. ಮೂರು ದಿನದ ಯಾತ್ರೆಯಲ್ಲಿ ನಿರೀಕ್ಷೆಗೂ ಮೀರಿ ಲಕ್ಷಾಂತರ ಜನರು ಪಾಲ್ಗೊಂಡರು. ಇದರೊಂದಿಗೆ ಮಾಜಿ ಸಚಿವರಾದ ಎನ್.ಚಲುವರಾಯಸ್ವಾಮಿ ಹಾಗೂ ಪಿ.ಎಂ.ನರೇಂದ್ರಸ್ವಾಮಿ ವಿಪಕ್ಷಗಳಿಗೆ ತಮ್ಮ ಶಕ್ತಿ ಪ್ರದರ್ಶನ ಮಾಡಿದರು.ಕಳೆದ ವಿಧಾನಸಭಾ ಚುನಾವಣೆಯಲ್ಲಿ ಏಳು ಕ್ಷೇತ್ರವನ್ನು ಕಳೆದುಕೊಂಡಿದ್ದ ಕಾಂಗ್ರೆಸ್ ಸಿಆರ್‌ಎಸ್, ಪಿಎಂಎನ್ ನೇತೃತ್ವದಲ್ಲಿ ಬಲಿಷ್ಠವಾಗುತ್ತಿದೆ. ಇದಕ್ಕೆ ಎರಡು ಎಂಎಲ್‌ಸಿ ಚುನಾವಣೆಗಳ ಗೆಲುವು ಸಾಕ್ಷಿ. ಅದರಂತೆಯೇ ಮುಂಬರುವ ಚುನಾವಣೆಗೆ ಸಜ್ಜಾಗುತ್ತಿರುವ ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ ಮೂಲಕ ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ಹುಮ್ಮಸ್ಸಿನ ಜತೆಗೆ ಹೊಸ ಚೈತನ್ಯವನ್ನು ಮೂಡಿಸಿದೆ. ನಿರೀಕ್ಷೆಗೂ ಮೀರಿದ ಯಶಸ್ಸು ಪಕ್ಷದ ಖದರ್ ತೋರಿಸಿದೆ.ರಾಜ್ಯದಲ್ಲಿ ಸಂಚಲನ: ಭಾರತ್ ಜೋಡೋ ಯಾತ್ರೆ ಜಿಲ್ಲೆಯಲ್ಲಷ್ಟೇ ಅಲ್ಲದೆ ರಾಜ್ಯ ಕಾಂಗ್ರೆಸ್‌ನಲ್ಲೇ ಸಂಚಲನ ಮೂಡಿಸಿದೆ. ಮಾತ್ರವಲ್ಲದೆ ವಿಪಕ್ಷಗಳಿಗೂ ತಲೆನೋವು ತರುವಂತೆ ಮಾಡಿದೆ. ಯಾತ್ರೆಗೆ ಶ್ರೀರಂಗಪಟ್ಟಣ, ಮೇಲುಕೋಟೆ, ನಾಗಮಂಗಲ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳಲಾಗಿತ್ತು. ಮೊದಲ ದಿನ ಅಷ್ಟೊಂದು ಪ್ರಮಾಣದಲ್ಲಿ ಜನಸಂಖ್ಯೆ ಸೇರಿರಲಿಲ್ಲ. ಆದರೆ ಉಳಿದೆರೆಡು ದಿನ 50 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ರಾಗಾ ಅವರೊಂದಿಗೆ ಹೆಜ್ಜೆ ಹಾಕಿದರು. ರಾಹುಲ್‌ಗಾಂಧಿ ನೇತೃತ್ವದಲ್ಲಿ ನಡೆಸಿದ ಯಾತ್ರೆಯಿಂದಾಗಿ ಕಾಂಗ್ರೆಸ್‌ಗೆ ಹೊಸ ಚೈತನ್ಯ ಬಂದಂತಾಗಿದೆ. ಜತೆಗೆ ಪಕ್ಷದ ಸಂಘಟನೆಯನ್ನು ಚುರುಕುಗೊಳಿಸಿದೆ. ಆದರೆ, ಇದು ಮುಂದಿನ ಚುನಾವಣೆಯಲ್ಲಿ ಎಷ್ಟರ ಮಟ್ಟಿಗೆ ಯಶಸ್ಸು ಕಾಣಲಿದೆ ಎನ್ನುವುದನ್ನು ಕಾದುನೋಡಬೇಕಿದೆ.ಜೋಡೆತ್ತುಗಳಿಗೆ ರಾಗಾ ಫುಲ್‌ಮಾರ್ಕ್ಸ್: ಜಿಲ್ಲೆಯಲ್ಲಿ ಭಾರತ್ ಜೋಡೋ ಯಾತ್ರೆಯನ್ನು ಅದ್ಭುತವಾಗಿ ಯಶಸ್ಸುಗೊಳಿಸಲು ಶ್ರಮಿಸಿದ ಜೋಡೆತ್ತುಗಳಾದ ಮಾಜಿ ಸಚಿವರಾದ ಎನ್.ಚಲುವರಾಯಸ್ವಾಮಿ, ಪಿ.ಎಂ.ನರೇಂದ್ರಸ್ವಾಮಿ ಮತ್ತು ಎಂಎಲ್‌ಸಿ ದಿನೇಶ್ ಗೂಳೀಗೌಡ ಅವರಿಗೆ ಯುವನಾಯಕ ರಾಹುಲ್‌ಗಾಂಧಿ ಅವರು ಫುಲ್ ಮಾರ್ಕ್ಸ್ ನೀಡಿದ್ದಾರೆ. ಹಲವು ದಿನದಿಂದ ರೂಪು ರೇಷೆ ಸಿದ್ಧಪಡಿಸಿಕೊಂಡು ನಿರಂತರವಾಗಿ ಸಭೆ ಮಾಡಿದರು. ಮಾತ್ರವಲ್ಲದೆ ಜಿಲ್ಲಾ ನಾಯಕರು, ಮುಖಂಡರು, ಕಾರ್ಯಕರ್ತರೊಂದಿಗೆ ಸೇರಿ ಜೆಡಿಎಸ್ ಭದ್ರಕೋಟೆಯಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × four =
Remember me
