ಬೆಂಗಳೂರು:ಭಾರತದ ಮಾಜಿ ಉಪಪ್ರಧಾನಿ ಮತ್ತು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ, ಬಿಜೆಪಿ ಭೀಷ್ಮ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಇದರ ಬೆನ್ನಲ್ಲೇ ಎಲ್‌ಕೆ ಅಡ್ವಾಣಿ ಅವರಿಗೆ ಪ್ರಶಂಸೆ ಮಹಾಪೂರ ಹರಿದು ಬರುತ್ತಿದೆ.
ಇದನ್ನೂ ಓದಿ:ನಟ ದರ್ಶನ್ ಹುಟ್ಟು ಹಬ್ಬಕ್ಕೆ ದಿನಗಣನೆ; ದವಸ-ಧಾನ್ಯ ತರಲು ಮನವಿ ಮಾಡಿದ್ದೇಕೆ ?
“ರಾಮ ರಥದ ಸಾರಥಿಗೆ ಭಾರತ ರತ್ನ”ಭಾರತದ ಸಂಸತ್ ನ ಗೌರವಕ್ಕೆ ಬಹುದೊಡ್ಡ ಘನತೆ ತಂದು ಪ್ರಜಾಪ್ರಭುತ್ವದ ಮೌಲ್ಯವನ್ನು ಎತ್ತಿ ಹಿಡಿದ ದೇಶ ಕಂಡ ಶ್ರೇಷ್ಠ ರಾಜಕಾರಣಿ ಮಾಜಿ ಉಪ ಪ್ರಧಾನಿ ಶ್ರೀ ಲಾಲ್ ಕೃಷ್ಣ ಅಡ್ವಾಣಿಯವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ “ಭಾರತ ರತ್ನ” ಲಭಿಸಿರುವುದು ಕೋಟ್ಯಾಂತರ ಭಾರತೀಯರಿಗೆ ಅತೀವ ಹರ್ಷವನ್ನುಂಟು ಮಾಡಿದೆ,…pic.twitter.com/lD7rgx49mt
— Vijayendra Yediyurappa (@BYVijayendra)February 3, 2024

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಅವರು ಎಲ್‌ಕೆ ಅಡ್ವಾಣಿ ಅವರಿಗೆ ಭಾರತರತ್ನ ಸಿಕ್ಕಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದು, ಅಡ್ವಾಣಿಯವರಿಗೆ ಭಾರತ ರತ್ನ ಗೌರವ ಸಿಕ್ಕಿರೋದು ದೇಶದ ಜನರಿಗೆ ತುಂಬಾ ಸಂತಸವನ್ನು ತಂದು ಕೊಟ್ಟಿದೆ. ರಾಜ್ಯದ ಪರವಾಗಿ ನಾನು ಅಡ್ವಾಣಿಯವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಪ್ರತಿಯೊಬ್ಬರಿಗೆ ನೆನಪು ಆಗೋದು ಎಲ್ ಕೆ ಅಡ್ವಾಣಿಯವರ ಹೋರಾಟಗಳು. ಅಡ್ವಾಣಿ ಎಂದರೆ ಉತ್ತಮ ಸಂಘಟನಕಾರರು ಎಂದರು.
ಲಾಲ್‌ಕೃಷ್ಣ ಅಡ್ವಾಣಿಯವರು ಮಾಡಿದ್ದ ರಥಯಾತ್ರೆಯನ್ನು ಯಾರೂ ಕೂಡ ಮರೆಯೋಕೆ ಸಾಧ್ಯವಿಲ್ಲ ಎಂದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ, ಇಂತಹ ಉತ್ತಮ ತೀರ್ಮಾನ ಕೈಗೊಂಡ ಪ್ರಧಾನಿಗಳಿಗೂ ನಾನು ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದರು.
ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯ ರಕ್ಷಣೆಗಾಗಿ ತಮ್ಮ ಇಡೀ ಜೀವನವನ್ನು ಸಮರ್ಪಿಸಿಕೊಂಡ ತಪಸ್ವೀ ರಾಜಕಾರಣಿ, ಬಿಜೆಪಿ ಕಂಡ ಶ್ರೇಷ್ಠ ನೇತಾರ ಶ್ರೀ ಲಾಲ್ ಕೃಷ್ಣ ಅಡ್ವಾಣಿ ಜೀ ಅವರು ತಮ್ಮ ಸಾಧನೆ ಹಾಗೂ ಹೋರಾಟಕ್ಕೆ ಅವರ ಜೀವತಾವಧಿಯಲ್ಲೇ ‘ಭಾರತರತ್ನ’ ಪಡೆಯುತ್ತಿರುವುದು ವಿಶೇಷವಾಗಿದೆ ಎಂದು ಹೇಳಿದರು.
ವಿವಾದದ ನಡುವೆ ಮತ್ತೆರಡು ಫೋಟೊ ಹಂಚಿಕೊಂಡ ಪವಿತ್ರಾಗೌಡ! ನಟ ದರ್ಶನ್​ ಫ್ಯಾನ್ಸ್​ ಹೇಳಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 4 =
Remember me
