ಬೆಂಗಳೂರು:ನಗರದ ಎರಡು ಖಾಸಗಿ ಕಂಪನಿಗಳ ನೌಕರರಿಬ್ಬರ ಹೊಸ ಸಾರಿಗೇತರ ವಾಹನಗಳನ್ನು ಭಾರತ್ (ಬಿಎಚ್) ಸರಣಿಯಡಿ ನೋಂದಣಿ ಮಾಡುವಂತೆ ಸಾರಿಗೆ ಆಯುಕ್ತರಿಗೆ ನಿರ್ದೇಶಿಸಿ ಹೈಕೋರ್ಟ್ ಏಕಸದಸ್ಯ ಪೀಠ ಹೊರಡಿಸಿದ್ದ ಆದೇಶವನ್ನು ವಿಭಾಗೀಯ ಪೀಠ ಎತ್ತಿಹಿಡಿದಿದೆ.
ಪ್ರಕರಣದ ಹಿನ್ನೆಲೆ:ಖಾಸಗಿ ವಲಯದ ನೌಕರರ ಸಾರಿಗೇತರ ವಾಹನಗಳಿಗೆ ಬಿಎಚ್ ಸರಣಿ ನೋಂದಣಿ ಮಾಡದಂತೆ ರಾಜ್ಯ ಸಾರಿಗೆ ಮತ್ತು ರಸ್ತೆ ಸುರಕ್ಷತಾ ಆಯುಕ್ತರು 2021ರ ಡಿ.20ರಂದು ಹೊರಡಿಸಿದ್ದ ಅಧಿಸೂಚನೆ ರದ್ದುಪಡಿಸುವಂತೆ ಕೋರಿ ಬೆಂಗಳೂರಿನ 2 ಸಾಫ್ಟ್​ವೇರ್ ಕಂಪನಿಗಳ ಉದ್ಯೋಗಿಗಳಾದ ಟಿ.ಶಾಲಿನಿ ಹಾಗೂ ಕೆ.ಪಿ. ರಂಜಿತ್ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.
ಕೇಂದ್ರ ಸರ್ಕಾರ 2021ರ ಆ.26ರಂದು ಹೊರಡಿಸಿರುವ ಅಧಿಸೂಚನೆಯಂತೆ ಅಖಿಲ ಭಾರತ ಸೇವೆಗಳು, ಕೇಂದ್ರ ಸರ್ಕಾರಿ ನೌಕರರು, ಬ್ಯಾಂಕ್ ಅಧಿಕಾರಿಗಳು ಸೇರಿ ಅಂತಾರಾಜ್ಯ ವರ್ಗಾವಣೆ ಹೊಂದಿರುವವರ ವಾಹನಗಳಿಗೆ ಬಿಎಚ್ ಸರಣಿ ನೋಂದಣಿಗೆ ಅವಕಾಶವಿದೆ. ಬೇರೆ ಬೇರೆ ರಾಜ್ಯಗಳಲ್ಲಿ ಕಚೇರಿ-ವ್ಯವಹಾರ ಹೊಂದಿರುವ ಖಾಸಗಿ ವಲಯದ ನೌಕರರಿಗೂ ಬಿಎಚ್ ಸರಣಿಯಡಿ ವಾಹನಗಳ ನೋಂದಣಿ ಮಾಡಬೇಕು. ಆದರೆ, ಬಿಎಚ್ ಸರಣಿಯಡಿ ನೋಂದಣಿಗೆ ಸಾರಿಗೆ ಇಲಾಖೆ ನಿರಾಕರಿಸಿದೆ. ಆದ್ದರಿಂದ, ಈ ಸಂಬಂಧ ಸಾರಿಗೆ ಆಯುಕ್ತರು ಹೊರಡಿಸಿರುವ ಅಧಿಸೂಚನೆ ರದ್ದುಪಡಿಸಬೇಕು ಹಾಗೂ ತಮ್ಮ ವಾಹನಗಳಿಗೆ ಬಿಎಚ್ ಸರಣಿ ನೋಂದಣಿ ಮಾಡುವಂತೆ ನಿರ್ದೇಶಿಸಬೇಕು ಎಂದು ಕೋರಿದ್ದರು. ಇದನ್ನು ಆಕ್ಷೇಪಿಸಿದ್ದ ಸರ್ಕಾರ, ಖಾಸಗಿ ಕಂಪನಿಗಳ ಬಹುತೇಕರು ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಾರೆ. ಜತೆಗೆ, ಅವರು ಆಗಾಗ ಸಂಸ್ಥೆಗಳನ್ನು ಬದಲಿಸುತ್ತಿರುತ್ತಾರೆ. ಇದರಿಂದ, ತೆರಿಗೆ ಅವಧಿ ಮುಗಿದ ನಂತರ ಅವರಿಂದ ತೆರಿಗೆ ಸಂಗ್ರಹಿಸಲು ಮೊದಲಿದ್ದ ಸಂಸ್ಥೆಯಲ್ಲೇ ಇರುತ್ತಾರೆ ಎನ್ನುವುದಕ್ಕೆ ಯಾವುದೇ ಖಾತ್ರಿ ಇಲ್ಲ. ಆದ್ದರಿಂದ, ಅರ್ಜಿದಾರರ ಮನವಿ ಪುರಸ್ಕರಿಸಬಾರದು ಎಂದು ಕೋರಿತ್ತು.
ಅರ್ಜಿಯನ್ನು 2022ರ ಡಿ.16ರಂದು ಮಾನ್ಯ ಮಾಡಿದ್ದ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ಪೀಠ, 2021ರ ಡಿ.20ರಂದು ಸಾರಿಗೆ ಆಯುಕ್ತರು ಹೊರಡಿಸಿದ್ದ ಅಧಿಸೂಚನೆ ರದ್ದುಪಡಿಸಿತ್ತಲ್ಲದೆ, ಕೇಂದ್ರ ಸರ್ಕಾರಿ ನೌಕರರು ಸೇರಿ ಕೆಲ ವರ್ಗದ ಸಿಬ್ಬಂದಿಗೆ ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಸಾರಿಗೇತರ ವಾಹನಗಳ ಸುಗಮ ಸಂಚಾರಕ್ಕೆ ಬಿಎಚ್ ಸರಣಿಯಡಿ ನೋಂದಣಿಗೆ ಅವಕಾಶ ಕಲ್ಪಿಸಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ 2021ರ ಆ.26ರಂದು ತಿದ್ದುಪಡಿ ನಿಯಮಗಳ ಅಧಿಸೂಚನೆ ಹೊರಡಿಸಿದೆ. ಇದು ಬೇರೆ ರಾಜ್ಯಗಳಿಗೆ ವರ್ಗಾವಣೆಯಾಗುವ ಖಾಸಗಿ ವಲಯದ ಕಂಪನಿಗಳ ಸಿಬ್ಬಂದಿಗೂ ಅನ್ವಯಿಸಲಿದೆ. ಆದ್ದರಿಂದ, ಸಾರಿಗೆ ಆಯುಕ್ತರು ಅರ್ಜಿದಾರರ ಸಾರಿಗೇತರ ವಾಹನಗಳನ್ನು ಕೇಂದ್ರದ ಅಧಿಸೂಚನೆಯಂತೆ ಬಿಎಚ್ ಸರಣಿಯಡಿ ನೋಂದಣಿ ಮಾಡಬೇಕು. ಜತೆಗೆ, ಕೇಂದ್ರ ಮೋಟಾರು ವಾಹನಗಳ (20ನೇ ತಿದ್ದುಪಡಿ) ನಿಯಮ-2021 ಅನ್ನು ರಾಜ್ಯ ಸರ್ಕಾರ ಜಾರಿಗೊಳಿಸಬೇಕು ಎಂದು ಆದೇಶಿಸಿತ್ತು.
35 ವರ್ಷಗಳ ಬಳಿಕ ಅಮ್ಮ-ಮಗನನ್ನು ಒಂದುಗೂಡಿಸಿದ ಪ್ರವಾಹ!

ಹೆಂಡತಿಗೆ ಹೆದರಿ ಮನೆ ಬಿಟ್ಟು ಒಂದೂವರೆ ವರ್ಷ ನಾಪತ್ತೆಯಾಗಿದ್ದ ಗಂಡ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 2 =
Remember me
