ಬೆಂಗಳೂರು:ಕಗ್ಗಂಟಾಗುತ್ತಲೇ ಬಂದಿರುವ ರೈತರ ಪ್ರತಿಭಟನೆ ಭಾರತ್ ಬಂದ್ ಆಗುವ ಮಟ್ಟಕ್ಕೆ ಬಂದಿದ್ದು, ಮಂಗಳವಾರ(ಡಿ.8) ದೇಶಾದ್ಯಂತ ಬಂದ್ ನಡೆಸಲು ರೈತ ಸಂಘಟನೆಗಳು ಕರೆ ನೀಡಿವೆ. ರೈತರ ಹೋರಾಟಕ್ಕೆ ವಕೀಲರೂ ಬೆಂಬಲ ಸೂಚಿಸಿದ್ದಾರೆ.
ಡಿಸೆಂಬರ್​ 8ರ ಭಾರತ ಬಂದ್​ಗೆ ಬೆಂಗಳೂರು ವಕೀಲರ ಸಂಘವು ನೈತಿಕ ಬೆಂಬಲ ಸೂಚಿಸಿದ್ದು, ಮಂಗಳವಾರ ಬೆಳಗ್ಗೆ 11 ಗಂಟೆಗೆ ಸಿಟಿ ಸಿವಿಲ್ ಕೋರ್ಟಿನ ಎಕ್ಸಿಟ್​ ಗೇಟ್​ನ ಮುಂಭಾಗ ವಕೀಲರು ಸಾಂಕೇತಿಕ ಪ್ರತಿಭಟನೆ ನಡೆಸಲಿದ್ದಾರೆ.
ರೈತರಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕಾಯ್ದೆಗಳನ್ನು ವಾಪಸ್ ಪಡೆದುಕೊಳ್ಳುವಂತೆ ಆಗ್ರಹಿಸಿ ದೇಶದ ಸುಮಾರು 40 ರೈತ ಸಂಘಟನೆಗಳು ಬಂದ್​ಗೆ ಕರೆನೀಡಿದೆ.
ಕೇಂದ್ರ ಸರ್ಕಾರವು ರೈತರ ಎಲ್ಲ ಬೇಡಿಕೆಗಳನ್ನು ತುರ್ತಾಗಿ ಈಡೇರಿಸಬೇಕು. ಹಾಗೂ ರೈತರಿಗೆ ಮಾರಕವಾಗಿರುವ ವಿಧೇಯಕಗಳನ್ನು ಹಿಂಪಡೆಯಬೇಕು ಎಂದು ಬೆಂಗಳೂರು ವಕೀಲರ ಸಂಘ ಆಗ್ರಹಿಸಿದೆ. ಸಾಂಕೇತಿಕ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಮೂಲಕ ರೈತರ ಹೋರಾಟಕ್ಕೆ ಬೆಂಬಲ ನೀಡುವಂತೆ ಸಂಘದ ಅಧ್ಯಕ್ಷ ಎ.ಪಿ.ರಂಗನಾಥ​ ಅವರು ಸದಸ್ಯರನ್ನು ಸೂಚಿಸಿದ್ದಾರೆ.
ಗ್ರಾಪಂ ಚುನಾವಣೆ: ಅವಿರೋಧ ಆಯ್ಕೆಗೆ 25 ಲಕ್ಷ ರೂ. ಆಫರ್​! ಸ್ಥಳಕ್ಕೆ ದೌಡಾಯಿಸಿದ ಪೊಲೀಸ್​

ನನ್ನನ್ನು ಮಂತ್ರಿ ಮಾಡಿ, ಇಲ್ಲವೇ ವಿಷ ಕೊಡಿ… ಈ ಮಾತು ಕೇಳಿ ಕಕ್ಕಾಬಿಕ್ಕಿಯಾದ ಸಿಎಂ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − nine =
Remember me
