ಬೆಂಗಳೂರು:ಹೊಸ ಕೃಷಿ ಕಾನೂನು ಹಿಂಪಡೆಯುವಂತೆ ಆಗ್ರಹಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತಪರ ಸಂಘಟನೆಗಳು ಕರೆ ನೀಡಿರುವ ಡಿಸೆಂಬರ್ 8ರ ಭಾರತ ಬಂದ್​ಗೆ ಕರ್ನಾಟಕದಲ್ಲೂ ಕಾಂಗ್ರೆಸ್​ ಮತ್ತು ಜೆಡಿಎಸ್​ ಬೆಂಬಲ ಸೂಚಿಸಿವೆ.
ವಿಧಾನಸೌಧದಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರೈತರ ಬಂದ್ ಕರೆಗೆ ಕಾಂಗ್ರೆಸ್ ಸಂಪೂರ್ಣ ಬೆಂಬಲ ಕೊಡಲಿದೆ. ನಮ್ಮ ಪಕ್ಷದ ಎಲ್ಲ ನಾಯಕರು ಮತ್ತು ಕಾರ್ಯಕರ್ತರಿಗೆ ಬೆಂಬಲ ಕೊಡುವಂತೆ ಸೂಚನೆ ಕಳಿಸಲಾಗಿದೆ. ಕಾಂಗ್ರೆಸ್ ರೈತರ ಪರ. ವಿವಾದಿತ ಮೂರೂ ಕಾಯ್ದೆಗಳನ್ನೂ ಕೇಂದ್ರ ಸರ್ಕಾರ ವಾಪಸ್ ಪಡೆಯಲಿ ಎಂದು ಆಗ್ರಹಿಸಿದರು.
ಸರ್ಕಾರ ಗೋಹತ್ಯೆ ತಡೆ ಕಾಯ್ದೆಯನ್ನು ಜಾರಿಗೆ ತರುವ ಅಗತ್ಯ ಇಲ್ಲ. ಗೋಹತ್ಯೆ ತಡೆ ಕಾಯ್ದೆಗೆ ನಮ್ಮ ವಿರೋಧ ಇದೆ. ಇದು ರೈತರಿಗೆ ಮಾರಕವಾಗುವ ಕಾಯ್ದೆ. ರೈತರ ಪರ ನಮ್ಮ ಬೆಂಬಲ ಇದೆ. ನಾವು ವಿದಾನಸೌಧ ಆವರಣದಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತೇವೆ ಎಂದರು.
ಇನ್ನು ರೈತರ ಪ್ರತಿಭಟನೆಗೆ ಜೆಡಿಎಸ್ ಬೆಂಬಲ ಇದೆ ಎಂದು ಅರಸೀಕೆರೆ ಶಾಸಕ ಶಿವಲಿಂಗೇಗೌಡ ಹೇಳಿದ್ದಾರೆ. ಬಿಜೆಪಿ ಸರ್ಕಾರ ರೈತ ವಿರೋಧಿ ಕಾನೂನನ್ನು ಜಾರಿ ಮಾಡ್ತಿದೆ. ರೈತರ ಪ್ರತಿಭಟನೆಗೆ ಮನ್ನಣೆ ಇಲ್ಲ. ರೈತರನ್ನು ನಿರ್ಲಕ್ಷಿಸಿದ ಸರ್ಕಾರಗಳು ಉಳಿದಿಲ್ಲ. ರೈತರ ಹೋರಾಟಕ್ಕೆ ನೈತಿಕ ಬೆಂಬಲ ಕೊಡುವ ಸಲುವಾಗಿ ಜೆಡಿಎಸ್ ಸದನ ಬಹಿಷ್ಕಾರ ಮಾಡುವುದು ಒಳ್ಳೆಯದು. ಈ ಬಗ್ಗೆ ಸಂಜೆ ಎಚ್​.ಡಿ. ದೇವೇಗೌಡರ ಜತೆ ಚರ್ಚೆ ಮಾಡಿ ನಿರ್ಧಾರ ಮಾಡ್ತೀವಿ ಎಂದಿದ್ದಾರೆ.
ಮಂಗಳವಾರ ಭಾರತ್ ಬಂದ್​; ಆದರೆ ಇವರಿಗೆ ಮಾತ್ರ ವಿನಾಯಿತಿ…

ನನ್ನನ್ನು ಮಂತ್ರಿ ಮಾಡಿ, ಇಲ್ಲವೇ ವಿಷ ಕೊಡಿ… ಈ ಮಾತು ಕೇಳಿ ಕಕ್ಕಾಬಿಕ್ಕಿಯಾದ ಸಿಎಂ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 7 =
Remember me
