ಬೆಂಗಳೂರು:ರೈಲ್ವೆ ವಿಭಾಗದ ಎಡಿಜಿಪಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೇಂದ್ರ ಸರ್ಕಾರ ಅಂಗೀಕರಿಸಿದೆ. 2021 ಸೆಪ್ಟೆಂಬರ್‌ನಲ್ಲಿ ಸ್ವಯಂನಿವೃತ್ತಿಗೆ ಅರ್ಜಿ ಸಲ್ಲಿಸಿದ್ದ ಭಾಸ್ಕರ್ ರಾವ್, ಅದನ್ನು ಕೂಡಲೇ ಪರಿಗಣಿಸಬೇಕು ಎಂದು ಮನವಿ ಮಾಡಿದ್ದರು. ಕಳೆದ 7 ತಿಂಗಳಿಂದ ಕೇಂದ್ರ ಅದಕ್ಕೆ ಸಮ್ಮತಿ ನೀಡಿರಲಿಲ್ಲ. ಇದೀಗ ಅನುಮೋದನೆ ನೀಡಿದೆ.
1954ರಲ್ಲಿ ಜನಿಸಿದ ಭಾಸ್ಕರ್ ರಾವ್ 1990ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದರು. 2019-20ರ ಅವಧಿಯಲ್ಲಿ ಬೆಂಗಳೂರು ನಗರದ ಪೊಲೀಸ್ ಆಯಕ್ತರಾಗಿದ್ದರು. ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆ, ಆಂತರಿಕ ಭದ್ರತಾ ವಿಭಾಗ ಸೇರಿ ವಿವಿಧೆಡೆ ಕಾರ್ಯ ನಿರ್ವಹಿಸಿದ್ದರು. ಪೊಲೀಸ್ ಆಯುಕ್ತರಾಗಿದ್ದ ಸಂದರ್ಭದಲ್ಲಿ ಜನಸ್ನೇಹಿ ಆಯುಕ್ತರೆನಿಸಿದ್ದರು. ಹಲವಾರು ಅಪರಾಧ ಪ್ರಕರಣಗಳನ್ನು ಭೇದಿಸಿ ಆರೋಪಿಗಳಿಗೆ ಶಿಕ್ಷೆಯಾಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಭಾಸ್ಕರ್ ರಾವ್ ರಾಜಕೀಯಕ್ಕೆ ಬರುತ್ತಾರೆ ಎಂಬ ಮಾತುಗಳು ಸಾರ್ವಜನಿಕ ವಲಯಗಳಲ್ಲಿ ಹರಿದಾಡುತ್ತಿವೆ. ಆದರೆ, ಈ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಅವರು ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಕರೊನಾ..; ಅಮಿತ್​ ಷಾ ಅಭಿಪ್ರಾಯವಿದು..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × one =
Remember me
