ಕಾರವಾರ:ದೇಶದಲ್ಲಿ ತಲ್ಲಣ ಮೂಡಿಸಿರುವ ಕರೋನಾ ಸೋಂಕು ಉತ್ತರ ಕನ್ನಡ ಜಿಲ್ಲೆಯಲ್ಲಿ ಕಡಿವಾಣಕ್ಕೆ ಬರುತ್ತಿದೆ ಎಂದು ನಿಟ್ಟುಸಿರು ಬಿಡುತ್ತಿದ್ದಂತೆ ಭಟ್ಕಳದಲ್ಲಿ ಗರ್ಭಿಣಿ ಮಹಿಳೆಯಲ್ಲಿ ಕೊರೋನಾ ಸೋಂಕು ಕಾಣಿಸಿಕೊಳ್ಳುವ ಮೂಲಕ ಸೊಂಕಿತರ ಸಂಖ್ಯೆ ಒಂಬತ್ತಕ್ಕೆ ಏರಿಕೆಯಾಗಿದೆ.
26 ವರ್ಷದ ಐದು ತಿಂಗಳ ಗರ್ಭಿಣಿ ಮಹಿಳೆಗೆ ಸೋಂಕು ಇರುವುದು ದೃಢಪಟ್ಟಿದೆ. ಈಕೆಗೆ ಇಬ್ಬರು ಮಕ್ಕಳಿದ್ದಾರೆ. ಈಕೆಯ ಪತಿ ದುಬೈನಿಂದ ಮಾರ್ಚ್ 17ರಂದು ವಾಪಸ್ಸಾಗಿದ್ದ. ಆದರೆ, ಪತಿಯ ವರದಿ ನೆಗೆಟಿವ್ ಬಂದಿದೆ.
ಪತಿ ದುಬೈನಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ. ಮಾರ್ಚ್ 17ರಂದು ಮುಂಬೈಗೆ ವಿಮಾನದ ಮೂಲಕ ಬಂದಿಳಿದಿದ್ದ. ಮುಂಬೈನಲ್ಲಿ ಸುಮಾರು ನಾಲ್ಕು ದಿನ ಉಳಿದಿದ್ದ ಈತ, ಆನಂತರ ರೈಲಿನಲ್ಲಿ ಭಟ್ಕಳಕ್ಕೆ ಬಂದಿದ್ದ. ಭಟ್ಕಳ ರೈಲು ನಿಲ್ದಾಣದಿಂದ ಸ್ನೇಹಿತನ ಬೈಕ್​ನಲ್ಲಿ ಮನೆಗೆ ತೆರಳಿದ್ದ.
ದುಬೈನಿಂದ ಬಂದವನಾಗಿದ್ದರಿಂದ ಆರೋಗ್ಯ ಇಲಾಖೆ ಸಿಬ್ಬಂದಿ ಈತನ ಕೈಗೆ ಹೋಂ ಕ್ವಾರಂಟೈನ್ ಮುದ್ರೆ ಹಾಕಿದ್ದರು. ಮಾ.31ರಂದು ಗರ್ಭಿಣಿ ಪತ್ನಿಯ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದರಿಂದ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದ. ಆದರೆ, ಆಸ್ಪತ್ರೆಯ ಸಿಬ್ಬಂದಿ ಪತಿಯ ಕೈ ಮೇಲೆ ಕ್ವಾರಂಟೈನ್ ಮುದ್ರೆ ಇರುವುದನ್ನು ಗಮನಿಸಿ ವೈದ್ಯರ ಗಮನಕ್ಕೆ ತಂದಿದ್ದಾರೆ. ನಂತರ ಇಬ್ಬರನ್ನು ಭಟ್ಕಳ ತಾಲೂಕು ಆಸ್ಪತ್ರೆಗೆ ದಾಖಲಿಸಿ, ಇಬ್ಬರ ಗಂಟಲಿನ ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು.
ಈ ವೇಳೆ ಪತ್ನಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಪತಿಯ ವರದಿ ನೆಗೆಟಿವ್ ಬಂದಿದೆ. ಇದೀಗ ಪತಿಯ ಗಂಟಲಿನ ದ್ರವವನ್ನು ಮತ್ತೊಮ್ಮೆ ಪರೀಕ್ಷೆಗೆ ಕಳುಹಿಸಲಾಗಿದೆ.
ಸೋಂಕಿತ ಗರ್ಭಿಣಿ ಮಹಿಳೆಯನ್ನು ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನೊಮ್ಮೆ ಕಳುಹಿಸಲಾದ ಪತಿಯ ಗಂಟಲಿನ ದ್ರವದ ಮಾದರಿಯ ವರದಿ ಬರಬೇಕಿದ್ದು, ಅಲ್ಲಿಯವರೆಗೆ ಆಸ್ಪತ್ರೆಯಲ್ಲಿ ಕ್ವಾರಂಟೈನ್​ನಲ್ಲಿ ಇಡಲಾಗಿದೆ.
ಮಹಾಮಾರಿ ಕರೊನಾ ಸೋಂಕಿತರ ಸೇವೆಗೆ ನಿಂತ ಭಾರತ ಮೂಲದ ಇಂಗ್ಲೆಂಡ್‌ ಸುಂದರಿ

ಐಎಲ್ಒ ನೀಡಿದೆ ಆತಂಕದ ವರದಿ: ಕರೊನಾದಿಂದಾಗಿ ಭಾರತದಲ್ಲಿ 40 ಕೋಟಿ ಜನರು ಬಡತನದ ಕೂಪಕ್ಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 − 2 =
Remember me
