ಹಾಸನ:ರಾಜ್ಯ ರಾಜಕಾರಣದಲ್ಲಿ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿತ್ತು, ಹಲವು ಹಿರಿಯ ನಾಯಕರು ರಾಜ್ಯದ ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿದ್ದಾರೆ. ಇದಲ್ಲದೆ ಹಾಸನ ವಿಧಾನಸಭಾ ಕ್ಷೇತ್ರ ಸದ್ಯ ಹಲವು ಕಾರಣಗಳಿಂದ ರಾಜಕೀಯ ವಲಯದಲ್ಲಿ ಸದ್ದು ಮಾಡುತ್ತಿದೆ. ಇದಕ್ಕೆ ಕಾರಣ ಭವಾನಿ ರೇವಣ್ಣ. ಈ ಹಿಂದೆ ವೇದಿಕೆಯೊಂದರಲ್ಲಿ ಭವಾನಿ ರೇವಣ್ಣ ಮಾತನಾಡುತ್ತಾ, ಹಾಸನದಿಂದ ಈ ಬಾರಿ ಸ್ಪರ್ಧಿಸುವುದಾಗಿ ಹೇಳಿದ್ದರು. ಇದು ಜೆಡಿಎಸ್ ಪಾಳಯದಲ್ಲಿ ದೊಡ್ಡ ಸಂಚಲನದ ಹುಟ್ಟಿಗೆ ಕಾರಣವಾಗಿತ್ತು.
ಬಳಿಕ ಮಾಜಿ ಸಿಎಂ ಕುಮಾರಸ್ವಾಮಿ ಸಾಕಷ್ಟು ಬಾರಿ ಸ್ಪಷ್ಟನೆ ನೀಡಿದರೂ, ಬಹುತೇಕ ಮಂದಿ ಭವಾನಿ ರೇವಣ್ಣ ಅವರಿಗೆ ಹಾಸನದಿಂದ ಟಿಕೆಟ್ ನೀಡಬೇಕೆಂದು ಆಗ್ರಹಿಸಿದ್ದರು. ಇದರ ಬೆನ್ನಲ್ಲೇ ಇದೀಗ ನಿಟ್ಟೂರಿನಲ್ಲಿ ಭವಾನಿ ರೇವಣ್ಣ ಮಾತನಾಡುತ್ತಾ, ‌ಕುಮಾರಸ್ವಾಮಿ ಅವರನ್ನು ‌ಹಾಡಿ ಹೊಗಳಿದ್ದಾರೆ.
ಇದನ್ನೂ ಓದಿ:VIDEO | ಹೃದಯಾಘಾತದಿಂದ ಜಿಮ್​ನಲ್ಲಿ ಮೃತಪಟ್ಟ ಕಾನ್​ಸ್ಟೇಬಲ್!
2023ರಲ್ಲಿ ಎಚ್.ಡಿ.ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿ ಆಗುತ್ತಾರೆ. ಕುಮಾರಣ್ಣ ಬಿಸಿಲನ್ನು ಲೆಕ್ಕಿಸದೆ ರಾಜ್ಯಾದ್ಯಂತ ಓಡಾಡುತ್ತಿದ್ದಾರೆ. ಕಳೆದ ಬಾರಿ ಪೂರ್ಣವಧಿ ಅವಕಾಶ ನೀಡಿದ್ದರೆ ಇನ್ನಷ್ಟು ಅಭಿವೃದ್ಧಿ ಕೆಲಸ ಮಾಡುತ್ತಿದ್ದರು. ಈ ಬಾರಿ ಅವರೇ ಮುಖ್ಯಮಂತ್ರಿ ಆಗುತ್ತಾರೆ. ಹೀಗಾಗಿ ಅವರಿಗೆ ಇನ್ನಷ್ಟು ಬಲ ತುಂಬಬೇಕು ಎಂದು ಹೇಳಿದರು.
ಸದ್ಯ ಹಾಸನದಲ್ಲಿ ಮಾಜಿ ಸಚಿವ ಎಚ್. ಡಿ. ರೇವಣ್ಣ ಕುಟುಂಬ ಪ್ರಚಾರಕಾರ್ಯ ಆರಂಭಿಸಿದ್ದಾರೆ. ಹೀಗಾಗಿ ಹಾಸನ ವಿಧಾನಭಾ ಕ್ಷೇತ್ರದಿಂದ ಭವಾನಿ ರೇವಣ್ಣ ಸ್ಪರ್ಧಿಸುವುದು ಬಹುತೇಕ ಖಚಿತ ಎಂಬ ಮಾತುಗಳು ಕ್ಷೇತ್ರದಾದ್ಯಂತ ಕೇಳಿ ಬರುತ್ತಿವೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − five =
Remember me
