ವಿಜಯಪುರ: ಭೀಮಾತೀರದ ರೌಡಿ ಶೀಟರ್ ಮಹಾದೇವ ಸಾಹುಕಾರ್ ಭೈರಗೊಂಡ ಮೇಲಿನ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ.
ಅತಾಲಟ್ಟಿ ಗ್ರಾಮದ ಯಾಶೀನ್ ರಮಜಾನಸಾಬ ದಂದರಗಿ (25), ಕರೆಪ್ಪ ಊರ್ಫ್ ಗೂಳಿ ಮಹಾದೇವ ಸೊನ್ನದ (25), ಸಿದ್ದು ಊರ್ಫ್ ಸಿದರಾಯ ಬಸಪ್ಪ ಬೊಮ್ಮನಜೋಗಿ (34), ಅಲಿಯಾಬಾದ ಗ್ರಾಮದ ಸಂಜು ಊರ್ಫ್ ಸಚಿನ ತುಕಾರಾಮ ಮಾನವರ (28) ಹಾಗೂ ಚಡಚಣದ ರವಿ ಧರೆಪ್ಪ ಬಂಡಿ (20) ಬಂಧಿತ ಆರೋಪಿಗಳು.
ಇವರಿಂದ 2 ಕಂಟ್ರಿ ಪಿಸ್ತೂಲ್, 5 ಜೀವಂತ ಗುಂಡು, 4 ಮೊಬೈಲ್, 1 ಆಟೋ ರಿಕ್ಷಾ, 1 ಮಚ್ಚು ವಶಕ್ಕೆ ಪಡೆಯಲಾಗಿದೆ ಎಂದು ಎಸ್ ಪಿ ಅನುಪಮ್ ಅಗರವಾಲ್ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಈವರೆಗೆ ಒಟ್ಟು 7 ಆರೋಪಿಗಳನ್ನು ಬಂಧಿಸಲಾಗಿದ್ದು ತನಿಖೆ ಮುಂದುವರಿದಿದೆ. ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಎಎಸ್ ಪಿ ಡಾ.ರಾಮ ಅರಸಿದ್ದಿ,ಡಿವೈಎಸ್ ಪಿ ಲಕ್ಷ್ಮಿನಾರಾಯಣ, ಸಿಪಿಐಗಳಾದ ಎಂ.ಕೆ. ದ್ಯಾಮಣ್ಣವರ, ರವೀಂದ್ರ‌ ನಾಯ್ಕೋಡಿ, ಸುನೀಲ‌ ಕಾಂಬಳೆ, ಸುರೇಶ ಬಂಡೆಗುಂಬಳ, ಬಸವರಾಜ ಮೂಕರ್ತಿಹಾಳ ಹಾಗೂ ಪಿಎಸ್ ಐ ತಂಡ ಯಶಸ್ವಿಯಾಗಿದ್ದಕ್ಕೆ ಎಸ್ ಪಿ ಶ್ಲಾಘಿಸಿದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:7 + 5 =
Remember me
