ಬೆಂಗಳೂರು:ಟಿ. ಸುನಂದಮ್ಮ ಸ್ಮಾರಕ ಪ್ರತಿಷ್ಠಾನ ನೀಡುವ 2022ನೇ ಸಾಲಿನ ‘ಟಿ.ಸುನಂದಮ್ಮ ಪ್ರಶಸ್ತಿ’ಗೆ ಹಾಸ್ಯ ಸಾಹಿತಿ ಭುವನೇಶ್ವರಿ ಹೆಗಡೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರತಿಷ್ಠಾನದ ಉಪಾಧ್ಯಕ್ಷೆ ಡಾ.ವಸುಂಧರಾ ಭೂಪತಿ ತಿಳಿಸಿದ್ದಾರೆ.
ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ಮಾ. 18ರ ಶನಿವಾರ ಸಂಜೆ 5ಕ್ಕೆ ನಡೆಯಲಿರುವ ಸಮಾರಂಭದಲ್ಲಿ ಪ್ರಸಿದ್ಧ ಹಾಸ್ಯ ಸಾಹಿತಿ ಎಂ.ಎಸ್. ನರಸಿಂಹಮೂರ್ತಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಇದನ್ನೂ ಓದಿ:ಸಲಿಂಗ ಕಾಮಕ್ಕಾಗಿ ಹತ್ಯೆ: ಮರ್ಯಾದೆಗೆ ಅಂಜಿ ಸಂಗಾತಿಯನ್ನೇ ಕೊಂದ!
ಅಲ್ಲದೆ ಖ್ಯಾತ ಹಾಸ್ಯ ಸಾಹಿತಿ ಡುಂಡಿರಾಜ್ ಅಂದು “ಟಿ. ಸುನಂದಮ್ಮ ಸಾಹಿತ್ಯ ಸಂಪುಟ 3” ಮತ್ತು ಹಿರಿಯ ಲೇಖಕಿ ಎಲ್.ವಿ. ಶಾಂತಕುಮಾರಿ “ನಾನು ಕಂಡಂತೆ ಟಿ. ಸುನಂದಮ್ಮ” ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಪ್ರತಿಷ್ಠಾನದ ಅಧ್ಯಕ್ಷ ಎಂ. ನರಸಿಂಹಮೂರ್ತಿ ಕಾಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಶಸ್ತಿ 30 ಸಾವಿರ ರೂಪಾಯಿ ನಗದು ಮತ್ತು ಸ್ಮರಣ ಫಲಕವನ್ನು ಒಳಗೊಂಡಿದೆ ಎಂದು ಅವರು ತಿಳಿಸಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:13 − 5 =
Remember me
