ಬೀದರ:“ನನ್ನ ಸಾವಿಗೆ ಯಾರು ಕಾರಣರಲ್ಲ, ನಾನು ಝರ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ” ಎಂದು ಮಹಿಳಾ ದಿನಾಚರಣೆಯಂದೇ ಡೆತ್ ನೋಟ್ ಬರೆದಿಟ್ಟ ಪ್ರಾಧ್ಯಾಪಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೀದರನ ಭಾಲ್ಕಿ ಪಟ್ಟಣದ ಕೋಟೆ ಆವರಣದಲ್ಲಿರುವ ಝರಬಾವಿಗೆ ಪ್ರಾಧ್ಯಾಪಕಿ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೂಜಾ ಸಂಗಪ್ಪ ಹುಲಸೂರೆ (26) ಆತ್ಮಹತ್ಯೆ ಮಾಡಿಕೊಂಡ ಪ್ರಾಧ್ಯಾಪಕಿ.
ಭಾಲ್ಕಿ ಪಟ್ಟಣದ ಖಾಸಗಿ ಕಾಲೇಜಿನಲ್ಲಿ ಪ್ರಾಧ್ಯಾಪಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಪೂಜಾ ಏಕಾಏಕೀ ಆತ್ಮಹತ್ಯೆಗೆ ಶರಣಾಗಿದ್ದಾರೆ. ಭಾನುವಾರ ನಸುಕಿನ ಜಾವ ಮನೆಯಿಂದ ಹೋದ ಪೂಜಾ ಬಾವಿಗೆ ಹಾರಿ‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪೂಜಾ ಕುಟುಂಬಸ್ತರ ಆಕ್ರಂದನ ಮುಗಿಲು ಮುಟ್ಟಿತ್ತು. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಅಂತಾರಾಷ್ಟ್ರೀಯ ಮಹಿಳಾ ದಿನದಂದೇ ವರದಕ್ಷಿಣೆ ಕಿರುಕುಳಕ್ಕೆ ಗರ್ಭಿಣಿ ಬಲಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × two =
Remember me
