ಬೀದರ್:ಬಸವಕಲ್ಯಾಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಲ್ಲಿಕಾರ್ಜುನ ಖೂಬಾ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಲಾಗಿದೆ.
ಪಕ್ಷ ವಿರೋಧಿ ಚಟುವಟಿಕೆ ಆಧಾರದ ಮೇಲೆ ಮಲ್ಲಿಕಾರ್ಜುನ ಖೂಬಾ ಅವರನ್ನು ಬಿಜೆಪಿಯಿಂದ ಆರು ವರ್ಷದವರೆಗೆ ಉಚ್ಚಾಟಿಸಲಾಗಿದೆ ಎಂದು ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ ತಿಳಿಸಿದ್ದಾರೆ.
ಇದನ್ನೂ ಓದಿ:ಬನ್ನೇರುಘಟ್ಟದ ಆಸ್ಪತ್ರೆಯಲ್ಲಿ ಹುಲಿ ಮತ್ತು ಸಿಂಹದ ಮರಿಗಳ ಚಿನ್ನಾಟದ ದೃಶ್ಯ ವೈರಲ್​
ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗರ್ ವಿರುದ್ಧ ಬಂಡುಕೋರ ಅಭ್ಯರ್ಥಿಯಾಗಿ ಚುನಾವಣೆಗೆ ನಿಂತು ಪಕ್ಷದ ಶಿಸ್ತನ್ನು ಉಲ್ಲಂಘಿಸಿದ್ದಿರಿ. ಎಲ್ಲಾ ರೀತಿಯ ಎಚ್ಚರಿಕೆ ನೀಡಿದರೂ ನೀವು ಚುನಾವಣಾ ಕಣದಿಂದ ಹಿಂದೆ ಸರಿದಿಲ್ಲ. ಈ ಕಾರಣಕ್ಕೆ ನಿಮ್ಮನ್ನು ಪಕ್ಷದಿಂದ ಆರು ವರ್ಷ ಉಚ್ಚಾಟಿಸಲಾಗುತ್ತದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಬೀದರ್ ಜಿಲ್ಲಾ ಬಿಜೆಪಿ ಪ್ರಮುಖ ಮುಖಂಡರಾಗಿದ್ದ ಮಲ್ಲಿಕಾರ್ಜುನ ಖೂಬಾ ಅವರು ಕ್ಷೇತ್ರದಲ್ಲಿ ಕಾಂಗ್ರಸ್, ಬಿಜೆಪಿ ಅಭ್ಯರ್ಥಿಗೆ ಪ್ರಬಲ ಪೈಪೋಟಿ ಒಡ್ಡಿದ್ದಾರೆ.
ವಿವಾಹಿತೆಯನ್ನು ಅಪಹರಿಸಿ 20 ದಿನ ಟ್ರಕ್​ನಲ್ಲಿಟ್ಟು ರೇಪ್​: ಕಾಮಾಂಧ ಯುವಕರ ಅಟ್ಟಹಾಸ ಬಿಚ್ಚಿಟ್ಟ ಸಂತ್ರಸ್ತೆ!
ಆರ್​​ಜೆಡಿ ನಾಯಕ ಲಾಲು ಪ್ರಸಾದ್ ಯಾದವ್​​ಗೆ ಜಾಮೀನು


ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:16 − eleven =
Remember me
