ಬೀದರ್:ಮದುವೆಗಯಾಗಲು ನಿರಾಕರಿಸಿದ್ದಕ್ಕೆ ಪಾಗಲ್​ ಪ್ರೇಮಿಯೊಬ್ಬ ಯುವತಿಯನ್ನು ಕೊಲೆ ಮಾಡಿರುವ ಆತಂಕಕಾರಿ ಘಟನೆ ಬೀದರ್ ತಾಲೂಕಿನ ಸೋಲಪೂರ್ ಕೆರೆಯ ಬಳಿ ನಡೆದಿದೆ.
ಶಿವಲೀಲಾ (18) ಕೊಲೆಯಾದ ಯುವತಿ. ಆರೋಪಿ ಶ್ರೀನಿವಾಸ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಶಿವಲೀಲಾ ಪ್ಯಾರಾ ಮೆಡಿಕಲ್ ಓದುತ್ತಿದ್ದಳು. ಮದುವೆಯಾಗಲು ಇಷ್ಟವಿಲ್ಲ ಎಂದು ಹೇಳಿದ್ದಕ್ಕೆ ಸೋಲಪೂರ್ ಕೆರೆಯ ಬಳಿ ಕರೆದುಕೊಂಡು ಹೋಗಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಆರೋಪಿ ಶ್ರೀನಿವಾಸ ಚಾಂಬೋಳ ಗ್ರಾಮದ ನಿವಾಸಿ. ಶಿವಲೀಲಾ ಮಲ್ಲಿಕ್ ಮಿರ್ಜಾಪೂರ್ ಗ್ರಾಮದ ಹುಡುಗಿ. ಬೀದರ್ ನಗರದ ಮಂಗಲ್ ಪೇಟೆಯಲ್ಲಿ ತಾಯಿ ಜೊತೆ ವಾಸವಾಗಿದ್ದಳು. ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಶ್ರೀನಿವಾಸನನ್ನು ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಘಟನೆ ಸಂಬಂಧ ಬೀದರ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)‘
ಅನ್​ಬಾಟಲ್ಡ್! ಪ್ಲಾಸ್ಟಿಕ್ ತ್ಯಾಜ್ಯ ಮರುಬಳಕೆಯ ಸಮವಸ್ತ್ರ: ತೈಲ ಕಂಪನಿಯಿಂದ ಪರಿಸರಪೂರಕ ಕ್ರಮ

ಮಗುವಿಗೆ ಜನ್ಮ ನೀಡಿದ ತೃತೀಯಲಿಂಗಿ ದಂಪತಿಗೆ ಎದುರಾಯ್ತು ಮೊದಲ ಅಡ್ಡಿ! ಕಾನೂನು ಹೋರಾಟಕ್ಕೂ ಸೈ ಎಂದ ಜಿಯಾ

ಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿದ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ 19,300ಕ್ಕೇರಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 − 4 =
Remember me
