ಬೀದರ್​:ಶಿಕ್ಷಕನೊಬ್ಬನೊಬ್ಬ ತನ್ನ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಯಾರಿಗೂ ಗೊತ್ತಾಗದಂತೆ ಮದುವೆ ಮಾಡಿಕೊಂಡಿರುವ ರಹಸ್ಯ ಇದೀಗ ಬಯಲಾಗಿದ್ದು, ಶಿಕ್ಷಕನ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಈ ಘಟನೆ ಭಾಲ್ಕಿ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.
ಶಿಕ್ಷಕನ ಹೆಸರು ಹೆಸರು ದಿಲೀಪ ಕುಮಾರ್​ ಅಜೂರೆ. ತಾನು ಪಾಠ ಮಾಡುತ್ತಿದ್ದ ಶಾಲೆಯಲ್ಲಿ ಓದುತ್ತಿದ್ದ 15 ವರ್ಷದ ವಿದ್ಯಾರ್ಥಿನಿಯನ್ನು ಮದುವೆಯಾಗಿದ್ದಾನೆ. ಈ ಶಿಕ್ಷಕ ವಿದ್ಯಾರ್ಥಿನಿಯ ಮನೆಯಲ್ಲೇ ಬಾಡಿಗೆ ಉಳಿದುಕೊಂಡಿದ್ದ. ಈತ ಮೂಲತಃ ಬೆಳಗಾವಿ ಜಿಲ್ಲೆಯವನು.
ಇದನ್ನೂ ಓದಿ:ಹಿಮಾಚಲ ಪ್ರದೇಶದಲ್ಲಿ 2 ದಿನ ಧಾರಾಕಾರ ಮಳೆ ಸಾಧ್ಯತೆ, ಮತ್ತಷ್ಟು ಹೆಚ್ಚಲಿದೆ ವರುಣನ ಆರ್ಭಟ, ಯಲ್ಲೋ ಅಲರ್ಟ್​​​!
ಆಘಾತಕಾರಿ ಸಂಗತಿ ಏನೆಂದರೆ, ಈ ಶಿಕ್ಷಕನಿಗೆ ಈಗಾಗಲೇ ಮದುವೆಯಾಗಿ ಒಂದು ಮಗು ಕೂಡ ಇದೆ. ಇದೀಗ ಶಾಲೆಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಮದುವೆಯಾಗಿದ್ದಾನೆ. ಬೇಸಿಗೆ ರಜೆ ಸಂದರ್ಭದಲ್ಲಿ ಅಂದರೆ ಕಳೆದ ಮಾರ್ಚ್​ ತಿಂಗಳಲ್ಲಿ ಯಾರಿಗೂ ಗೊತ್ತಾಗದಂತೆ ವಿದ್ಯಾರ್ಥಿನಿಗೆ ತಾಳಿ ಕಟ್ಟಿ, ಊರಲ್ಲೇ ಠಿಕಾಣಿ ಹೂಡಿದ್ದ.
ಜೂನ್ ತಿಂಗಳ ಪ್ರಾರಂಭದಲ್ಲಿ ಶಿಕ್ಷಕನ ಮದುವೆ ಪುರಾಣ ಹೊರಬಿದ್ದಿದೆ. ಆರೋಪಿ ಶಿಕ್ಷಕ, ವಿದ್ಯಾರ್ಥಿನಿಯ ಮನೆಯಲ್ಲಿ ಬಾಡಿಗೆಗೆ ಉಳಿದುಕೊಂಡಿದ್ದ. ಮನೆಯಲ್ಲಿ ಯಾರೂ ಇಲ್ಲದೇ ವೇಳೆ ಅವನ ಕೋಣೆಯಲ್ಲೇ ತಾಳಿ ಕಟ್ಟಿ ಮದುವೆಯಾಗಿರುವುದು ಬೆಳಕಿಗೆ ಬಂದಿದೆ. ಈ ಕುರಿತು ಮೇಹಕರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶಿಕ್ಷನನ್ನು ಅಮಾನತು ಮಾಡುವ ಬದಲು ಸೇವೆಯಿಂದಲೇ ವಜಾ ಮಾಡಬೇಕೆಂದು ಗ್ರಾಮಸ್ಥರ ಆಗ್ರಹಿಸಿದ್ದಾರೆ.(ದಿಗ್ವಿಜಯ ನ್ಯೂಸ್​)
ವರ್ಗಾವಣೆಯಾದ ನೆಚ್ಚಿನ ಶಿಕ್ಷಕಿಗೆ ಅದ್ಧೂರಿ ಬೀಳ್ಕೊಡುಗೆ: ಬೆಳ್ಳಿ ರಥದ ಮೆರವಣಿಗೆ, ಡೊಳ್ಳು ಕುಣಿತ, ಹೂಮಳೆಗೈದು ಗೌರವ

ಮುಂಬರುವ ಮಧ್ಯಪ್ರದೇಶ ಚುನಾವಣೆಗೂ ಕರ್ನಾಟಕದ ಸೂತ್ರ: ಈಗಾಗಲೇ ಗ್ಯಾರಂಟಿ ಘೋಷಣೆ ಮಾಡಿರುವ ಪ್ರಿಯಾಂಕಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five − 2 =
Remember me
