ಬೀದರ್:ಹಾಡಹಗಲೇ ಬೀದರ್ ತಹಸೀಲ್ದಾರ್ ಕಚೇರಿಯ ಶಿರಸ್ತೇದಾರನಿಗೆ ಚಾಕು ಇರಿದ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಇದನ್ನೂ ಓದಿ:ನಟ ದರ್ಶನ್​ ಭೇಟಿ ಬಳಿಕ ನಟ ಧನ್ವೀರ್ ಅಚ್ಚರಿ ರಿಯಾಕ್ಷನ್​​.. ಅಂಥದ್ದೇನು ಹೇಳಿದ್ರು?
ಆಹಾರ ಶಾಖೆಯ ಶಿರಸ್ತೇದಾರ ಆಗಿರುವ ಅನಿಲ್‌ಕುಮಾರ್ ವ್ಯಾಸ್, ಚಾಕು ಇರಿತಕ್ಕೋಳಗಾದವರು. ಕರ್ತವ್ಯದಲ್ಲಿದ್ದ ವೇಳೆಯೇ ಅನೀಲ್ ಕುಮಾರಗೆ ಚಾಕು ಇರಿದು ವ್ಯಕ್ತಿ ಪರಾರಿಯಾಗಿದ್ದಾನೆ. ಕೂಡಲೇ ಗಾಯಾಳು ಅನೀಲ್ ಕುಮಾರ್‌ ಅವರನ್ನು ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ವ್ಯಕ್ತಿ ಅಧಿಕಾರಿಗೆ ಚಾಕುವಿನಿಂದ ಇರಿದು ಬೈಕ್‌ನಲ್ಲಿ ಪರಾರಿಯಾಗಿದ್ದಾನೆ. ಚಾಕುದಿಂದ ಅಧಿಕಾರಿ ತೋಳಿಗೆ ಗಾಯವಾಗಿದೆ. ಇರಿದ ಪರಿಣಾಮ ಅಧಿಕಾರಿ ರಕ್ತದ ಮಡುವಿನಲ್ಲಿ ತಪ್ಪಿಸಿಕೊಳ್ಳಲು ಓಡಾಡಿದ್ದು, ತಹಸೀಲ್ದಾರ್ ಕಚೇರಿಯಲ್ಲಿ ಸಿಕ್ಕ ಸಿಕ್ಕ ಕಡೆ ರಕ್ತ ಚಲ್ಲಾಡಿದೆ. ಘಟನೆಯಿಂದ ಭಯಗೊಂಡ ಅಧಿಕಾರಿಗಳು ಹಾಗೂ ಸಿಬ್ಬಂದಿ ದಿಕ್ಕಾಪಾಲಾಗಿ ಓಡಿ ಹೋಗಿದ್ದಾರೆ.

ಆರೋಪಿ ಎಂಟ್ರಿ ಹಾಗೂ ಚಾಕುವಿನಿಂದ ಇರಿದ ಬಳಿಕ ಪರಾರಿಯಾಗುವ ದೃಶ್ಯಾವಳಿಗಳು ಸಿಸಿ ಟಿವಿಯಲ್ಲಿ ಸೆರೆಯಾಗಿವೆ. ಅಧಿಕಾರಿಯನ್ನು ಚಿಕಿತ್ಸೆಗಾಗಿ ಬ್ರೀಮ್ಸ್ ಆಸ್ಪತ್ರೆಗೆ ರವಾನೆ‌‌ ಮಾಡಲಾಗಿದ್ದು ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿದು ಸ್ಥಳಕ್ಕೆ ಮಾರ್ಕೆಟ್ ಪೊಲೀಸರು ದೌಡಾಯಿಸಿ ಪರಿಶೀಲನೆ ಮಾಡುತ್ತಿದ್ದಾರೆ.
ಈ ಕುರಿತು ಬೀದರ್‌ನ ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಚಾಕು ಇರಿದ ಪರಾರಿಯಾದ ವ್ಯಕ್ತಿ ಅಮನ್ ಜುಬೇರ್ ಎಂದು ಗುರುತಿಸಲಾಗಿದ್ದು, ಪೊಲೀಸರು ಭೇಟಿ ನೀಡಿ ತನಿಖೆ ಶುರು ಮಾಡಿದ್ದಾರೆ.
ನೀನು ಕಪ್ಪಗಿದ್ದೀಯಾ ಅಂತ ಪದೇ-ಪದೇ ರೇಗಿಸುತ್ತಿದ್ದ ಹೆಂಡತಿ; ಪೊಲೀಸ್​ ಠಾಣೆ ಮೆಟ್ಟಿಲೇರಿದ ಪತಿ; ಆಮೇಲೇನಾಯ್ತು ಗೊತ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 2 =
Remember me
