ಬೆಂಗಳೂರು:ಮೀಸಲಾತಿಗೆ ಆಗ್ರಹಿಸಿ ಪಂಚಮಸಾಲಿ ಲಿಂಗಾಯತ ಸಮುದಾಯದವರು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಕಳೆದ ಕೆಲವು ದಿನಗಳಿಂದ ಧರಣಿ ನಡೆಸುತ್ತಿರುವ ನಡುವೆಯೇ ಈಗ ಒಕ್ಕಲಿಗ ಸಮುದಾಯ ಕೂಡ ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸಿ ಬೃಹತ್ ಸಮಾವೇಶಕ್ಕೆ ಮುಂದಾಗಿದೆ.
ರಾಜ್ಯದ ಒಕ್ಕಲಿಗ ಸ್ವಾಮಿಜೀಗಳ ನೇತೃತ್ವದ ನಡೆಯಲಿರುವ ಈ ಸಮಾವೇಶದಲ್ಲಿ ವಿವಿಧ ಪಕ್ಷಗಳ ರಾಜಕೀಯ ಮುಖಂಡರು ಕೂಡ ಭಾಗವಹಿಸಲಿದ್ದು, ಒಕ್ಕಲಿಗ ಸಮುದಾಯದ ಸುಮಾರು ಒಂದು ಲಕ್ಷ ಮಂದಿ ಪಾಲ್ಗೊಳ್ಳುವ ಅಂದಾಜಿದೆ. ಬೆಂಗಳೂರು ಉತ್ತರ ತಾಲೂಕು ನಗರೂರು ಗ್ರಾಮದ ಬಿಜಿಎಸ್​ ವರ್ಲ್ಡ್ ಶಾಲಾ ಆವರಣದಲ್ಲಿ ಈ ಸಮಾವೇಶ ನಡೆಯಲಿದೆ.
ಅಖಿಲ ಕರ್ನಾಟಕ ಒಕ್ಕಲಿಗರ ಒಕ್ಕೂಟ ಸಮಾವೇಶದ ಪೂರ್ವಸಿದ್ಧತೆ ಕುರಿತು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ತುಮಕೂರು ಮತ್ತು ರಾಮನಗರ ಜಿಲ್ಲೆಗಳ ಒಕ್ಕಲಿಗ ಸಮುದಾಯದ ಸಹಕಾರದಲ್ಲಿ ಈ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದೆ.
ಒಕ್ಕಲಿಗರ ಬೇರೆ ಬೇರೆ ಉಪಜಾತಿಗಳನ್ನು ಸೇರಿಸಿ ಶೇ. 4ರಷ್ಟು ಮೀಸಲಾತಿಯನ್ನು ಹೆಚ್ಚಿಸಲು ಆಗ್ರಹಿಸುವ ಸಲುವಾಗಿ ಈ ಸಮಾವೇಶ ಹಮ್ಮಿಕೊಳ್ಳಲಾಗುತ್ತಿದೆ ಎಂದು ಅಖಿಲ ಕರ್ನಾಟಕ ಒಕ್ಕಲಿಗರ ಒಕ್ಕೂಟ ತಿಳಿಸಿದೆ. ನೆಲಮಂಗಲದ ಖಾಸಗಿ ಹೋಟೆಲೊಂದರಲ್ಲಿ ಪೂರ್ವಸಿದ್ಧತಾ ಸಭೆ ನಡೆದಿದ್ದು, ಒಕ್ಕಲಿಗ ಸಮುದಾಯದ ಹಲವಾರು ಮುಖಂಡರು ಪಾಲ್ಗೊಂಡಿದ್ದರು.
ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ
ಶಿವರಾತ್ರಿ ಆಚರಣೆಯನ್ನೇ ಸ್ಥಳಾಂತರಿಸಿದ ಮೀಸಲಾತಿ ಹೋರಾಟ; ಇವರ ಜಾಗರಣೆ ಈ ಸಲ ಎಲ್ಲಿ ಗೊತ್ತೇ?

ಜಿಟಿಡಿ ಯಾವ ಪಕ್ಷದ ಶಾಸಕ? ಎಂದು ಕುಮಾರಸ್ವಾಮಿಗೆ ‘ಗೊತ್ತಿಲ್ಲ’ವಂತೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − one =
Remember me
