ಬೆಂಗಳೂರು:ಎಂಎಸ್‌ಪಿ ಖಾತರಿ ಕಾನೂನಿಗೆ ಫೆಬ್ರವರಿ 13 ರಿಂದ 4 ಸ್ಥಳಗಳಲ್ಲಿ ಪ್ರತಿಭಟನೆ ನಡೆಯುತ್ತಿದ್ದು, 125 ದಿನಗಳಿಗೂ ಹೆಚ್ಚು ಕಾಲ ಸಾವಿರಾರು ರೈತರು ರಸ್ತೆಗಿಳಿದಿದ್ದಾರೆ. ಕೇಂದ್ರ ಸರ್ಕಾರ ಈಡೇರಿಸುವವರೆಗೆ ಈ ಪ್ರತಿಭಟನೆ ಮುಂದುವಯುತ್ತಿದ್ದು,ಇದರ ಪರಿಣಾಮ ಗ್ರಾಮೀಣ ಪ್ರದೇಶದಲ್ಲಿ 2019 ರ ಚುನಾವಣೆಗೆ ಹೋಲಿಸಿದರೆ ಈ ಚುನಾವಣೆಯಲ್ಲಿ ಬಿಜೆಪಿ  71 ಲೋಕಸಭಾ ಸ್ಥಾನಗಳನ್ನು ಕಳೆದುಕೊಂಡಿದೆ ಎಂದು ಸಂಯುಕ್ತ ಕಿಸಾನ್ ಬೇಡ ಮೋರ್ಚಾ (ರಾಜಕೀಯತರ) ಸಂಘಟನೆ ತಿಳಿಸಿದೆ.
ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ತಮ್ಮ ರೈತ ವಿರೋಧಿ ನೀತಿಯನ್ನು ಬದಲಾಯಿಸದಿದ್ದರೆ ಬಿಜೆಪಿ ರೈತರ ಬಾರಿ ಆಕ್ರೋಶ ಎದುರಿಸಲಿದೆ. ಹರಿಯಾಣ ಮತ್ತು ಮಹಾರಾಷ್ಟ್ರ ಸೇರಿದಂತೆ ಮುಂಬರುವ ಎಲ್ಲ ವಿಧಾನಸಭಾ ಚುನಾವಣಾ ರಾಜ್ಯಗಳಲ್ಲಿ ರೈತರು ಸಾಮರ್ಥ್ಯ ಏನೆಂಬುದು ತಿಳಿಯಲಿದೆ . ಅಲ್ಲದೆ, ಜುಲೈ 8 ರಂದು ಎಸ್‌ಕೆಎಂ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ವತಿಯಿಂದ ಬಿಜೆಪಿಯ 240 ಸಂಸದರನ್ನು ಹೊರತುಪಡಿಸಿ ಎಲ್ಲ ಸಂಸತ್ ಸದಸ್ಯರಿಗೆ ತಮ್ಮ 12 ಬೇಡಿಕೆಗಳ ಕುರಿತು ಜ್ಞಾಪಕ ಪತ್ರವನ್ನು ನೀಡಲಿದೆ ಎಂದು ಸಂಘಟನೆಯ ರಾಷ್ಟ್ರೀಯ ರೈತ ಮುಖಂಡ ಜಗಜಿತ್ ಸಿಂಗ್ ದಲೈವಾಲ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ರೈತರ ಪ್ರತಿಭಟನೆ ಬಲಪಡಿಸಲು ದಕ್ಷಿಣ ಭಾರತದ ರೈತರು ಜೂ 24 ರಂದು ಶಿವಮೊಗ್ಗದಲ್ಲಿ ಬೃಹತ್ ರೈತ ಸಮಾವೇಶವನ್ನು ಆಯೋಜಿಸಿದೆ. ಜುಲೈನಲ್ಲಿ ದೆಹಲಿಯಲ್ಲು ಬೃಹತ್ ಸಮಾವೇಶ ನಡೆಸಲಿದ್ದೇವೆ. ಜತೆಗೆ ಸೆೆಪ್ಟೆಂಬರ್‌ನಲ್ಲಿ ಹರಿಯಾಣದಲ್ಲಿ ರೈತ ರ‌್ಯಾಲಿ ಹಮ್ಮಿಕೊಂಡಿದ್ದು, ಎಲ್ಲ ರಾಜ್ಯಗಳಿಂದ 1 ಲಕ್ಷಕ್ಕೂ ಹೆಚ್ಚು ರೈತರ ಭಾಗವಹಿಸಲಿದ್ದಾರೆ ಎಂದರು.
ರಾಜ್ಯ ರೈತ ಸಂಘಟನೆಗಳು ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಮಾತನಾಡಿ.ಕನಿಷ್ಠ ಬೆಂಬಲ ಬೆಲೆ ಹೆಚ್ಚಳ ಮಾಡಿದ ತಕ್ಷಣ ರೈತರಿಗೆ ಲಾಭವಿಲ್ಲ ರೈತರ ಕಣ್ಣಿಗೆ ಮಣ್ಣಿರಚಬಾರದು .ರೈತರು ಕೇಳುತ್ತಿರುವುದು ಕನಿಷ್ಠ ಬೆಂಬಲ ಬೆಲೆ ಕಾತರಿ ಕಾನೂನು ಅದಕ್ಕಾಗಿಯೇ ನಮ್ಮ ಹೋರಾಟ. ಒಡಿಸ್ಸಾ ಮತ್ತು ಛತ್ತೀಸ್ಗಡ ರಾಜ್ಯಗಳು ಭತ್ತಕ್ಕೆ 3100 ಪ್ರೋತ್ಸಾಹ ಬೆಂಬಲ ಬೆಲೆ ಘೋಷಣೆ ಮಾಡಿದ್ದಾರೆ. ಆದರೆ ಕೇಂದ್ರ ಸರ್ಕಾರ 2300. ಬೆಂಬಲ ಬೆಲೆ ನಿಗದಿ ಮಾಡಿರುವುದು ಸರಿಯಲ್ಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಬರಗಾಲದಿಂದ ರೈತರು ತತ್ತರಿಸಿದ್ದರು ಸೂಕ್ತ ಪರಿಹಾರ ಸಿಕ್ಕಿಲ್ಲ ಆದರೆ ತೆಲಂಗಾಣ ಸರ್ಕಾರ ರೈತರ 2 ಲಕ್ಷ ಸಾಲ ಮನ್ನಾ ಮಾಡಿದೆ.ಪ್ರತಿ ಎಕರೆಗೆ ವರ್ಷಕ್ಕೆ 15ಸಾವಿರ ಪ್ರೋತ್ಸಾಹಧನನೀಡುತ್ತಿದ್ದಾರೆ. ಆದರೆ,ನಮ್ಮ ರಾಜ್ಯದಲ್ಲಿ ತೀವ್ರ ಬರಗಾಲವಾಗಿದ್ದರು ರೈತರಿಗೆ ನೀಡುತ್ತಿದ್ದ ಕಿಸಾನ್ ಸಮ್ಮಾನ್ ಹಣ 4 ಸಾವಿರ ನಿಲ್ಲಿಸಿದ್ದಾರೆ. ಇದು ರಾಜ್ಯ ಸರ್ಕಾರ ರೈತರಿಗೆ ಬಗೆದ ದ್ರೋಹವಾಗಿದೆ. ಎಂದು ಬೇಸರ ವ್ಯಕ್ತಪಡಿಸಿದರು.ರೈತರ ಹೆಸರಿನಲ್ಲಿ ಹಾಲು ದರ ಹೆಚ್ಚಳ ಮಾಡುತ್ತಿದ್ದಾರೆ ಆದರೆ ಹಾಲು ಉತ್ಪಾದಕರಿಗೆ ರಾಜ್ಯ ಸರ್ಕಾರ ನೀಡುತ್ತಿದ್ದ ರೂ. 5 ಪ್ರೋತ್ಸಾಹ ಧನ ಸುಮಾರು 700 ಕೋಟಿ 8 ತಿಂಗಳಿಂದ ಬಿಡುಗಡೆ ಮಾಡಿಲ್ಲ ಕೂಡಲೇ ಸರ್ಕಾರ ಕ್ರಮ ಕೈಗೊಳ್ಳಲಿ ಎಂದು ಆಗ್ರಹಿಸಿದರು. ರೈತ ಮುಖಂಡರಾದಹರಿಯಾಣದ ಲಕ್ವಿಂದರ್ ಸಿಂಗ್,ನವದೆಹಲಿಯ ಜಾಫರ್ ಖಾನ್, ಸುಖಜಿತ್ ಸಿಂಗ್, ಗೋವಿಂದ ರೆಡ್ಡಿಹತ್ತಳ್ಳಿ ದೇವರಾಜ್ ಗಜೇಂದ್ರ ಸಿಂಗ್ ಮತ್ತಿತರರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + 19 =
Remember me
