ಬೆಂಗಳೂರು:ಆದಾಯ ಮೀರಿ ಆಸ್ತಿ ಗಳಿಕೆ ವಿಚಾರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್​ ವಿರುದ್ಧ ಅರ್ಜಿ ಸಲ್ಲಿಸಿದ್ದ ಸಿಬಿಐ ಇಂದು ಕೋರ್ಟ್​ನಲ್ಲಿ ವಿಚಾರಣೆಗೆ ಹಾಜರಾಯಿತು. ಈ ವೇಳೆ ಅರ್ಜಿ ವಜಾಗೊಳಿಸಿದ ನ್ಯಾಯಾಲಯ, ರಾಜ್ಯ-ಸಿಬಿಐ ನಡುವಿನ ವಿವಾದ ಸುಪ್ರೀಂಕೋರ್ಟ್​ ತೀರ್ಮಾನಿಸಬೇಕು ಎಂದು ತಿಳಿಸುವ ಮೂಲಕ ಡಿಕೆಶಿಗೆ ತಾತ್ಕಾಲಿಕ ರಿಲೀಫ್ ನೀಡಿದೆ.
ಇದನ್ನೂ ಓದಿ:ಪ್ರಮುಖರನ್ನು ಬಂಧಿಸಿದ ಬಳ್ಳಾರಿ ಜೈಲು
ಈ ಕೇಸ್​ನಲ್ಲಿ ಹೈಕೋರ್ಟ್​ ತೀರ್ಪು ನೀಡುವುದು ಸೂಕ್ತವಲ್ಲ. ರಾಜ್ಯ ಮತ್ತು ಸಿಬಿಐ ನಡುವಿನ ವಿವಾದ ಸುಪ್ರೀಂಕೋರ್ಟ್​ ಬಳಿಯೇ ತೀರ್ಮಾನವಾಗಬೇಕು ಎಂದು ಉಚ್ಚನ್ಯಾಯಾಲಯ ಉಲ್ಲೇಖಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಗ್ಗೆ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಮಾತನಾಡಿದ್ದ ಡಿಕೆಶಿ, ನನಗೆ ದೇವರ ಬಗ್ಗೆ, ನ್ಯಾಯಾಲಯದ ಬಗ್ಗೆ ಅಪಾರ ನಂಬಿಕೆ ಇದೆ. ಅವರು ಏನು ಕೊಟ್ಟರೂ ಅದನ್ನು ನಾನು ಪ್ರಸಾದ ಎಂದು ಸ್ವೀಕಾರ ಮಾಡ್ತೀನಿ ಎಂದಿದ್ದರು.
ಒಂದೆಡೆ ಡಿಕೆಶಿಗೆ ಕೋರ್ಟ್​ ತಾತ್ಕಾಲಿಕ ರಿಲೀಫ್ ನೀಡಿದರೆ, ಮತ್ತೊಂದೆಡೆ ರಾಜ್ಯ ರಾಜಕೀಯದಲ್ಲಿ ದೊಡ್ಡ ವಿವಾದವನ್ನೇ ಹಟ್ಟುಹಾಕಿದ್ದ ಮುಡಾ ನಿವೇಶನ ಹಂಚಿಕೆ ಗೋಲ್ಮಾಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ನೀಡಿದ್ದ ಅನುಮತಿಯನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್​ ಮೆಟ್ಟಿಲೇರಿದ್ದರು. ಈ ವಿಚಾರಣೆಯನ್ನು ಇಂದೇ ನಡೆಸಿದ ನ್ಯಾಯಾಲಯ ಇದೀಗ ವಿಚಾರಣೆಯನ್ನು ಆಗಸ್ಟ್​ 31ಕ್ಕೆ ಮುಂದೂಡಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + eleven =
Remember me
