ಬೆಂಗಳೂರು:ಬಿಗ್​ಬಾಸ್​ ರನ್​ರ್​ಅಪ್​​ ಡ್ರೋನ್​​ ಪ್ರತಾಪ್​ ವಿರುದ್ಧ  ಈಗಾಲೇ ಹತ್ತು ಹಲವು ಆರೋಪಗಳು ಕೇಳಿ ಬರುತ್ತಿವೆ. ಈಗ ರಾಜಕೀಯದಲ್ಲೂ ಪ್ರತಾಪ್​ ಹೆಸರು ಕೇಳಿ ಬಂದಿದೆ.
ಡ್ರೋನ್ ‍ಪ್ರತಾಪ್  ಯಾವುದೇ ರಾಜಕೀಯ ಪಕ್ಷದಲ್ಲಿ ಗುರುತಿಸಿಕೊಳ್ಳದೇ ಇದ್ದರೂ, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಹೇಳಿ ಜಿಲ್ಲಾ ಪಂಚಾಯಿತಿ ಟಿಕೆಟ್ ಕೊಡಿಸೋದಾಗಿ ಡ್ರೋನ್ ಪ್ರತಾಪ್ ಹಣ ಪಡೆದು ವಂಚಿಸಿದ್ದಾರೆ ಎಂದು ಚಂದನ್ ಕುಮಾರ್ ಗೌಡ ಎನ್ನುವವರು ದೂರು ನೀಡಿದ್ದಾರೆ.
ಮಾಜಿ ಸಿಎಂ ಕುಮಾರಸ್ವಾಮಿ ಪರಿಚಯವಿದೆ, ನಾನು ಆಗಾಗ ಕುಮಾರಸ್ವಾಮಿಯವರ ಫಾರ್ಮ್ ಹೌಸ್‌ಗೆ ಹೋಗಿ ಭೇಟಿಯಾಗುತ್ತೇನೆ ಎಂದು ನಂಬಿಸಿ ಮೋಸ ಮಾಡಿದ್ದಾರೆ.  ಜಿಲ್ಲಾ ಪಂಚಾಯಿತಿ ಟಿಕೆಟ್ ಕೊಡಿಸುವುದಾಗಿ 2 ಲಕ್ಷ ಹಣ ಪಡೆದು ಪ್ರತಾಪ್ ವಂಚಿಸಿದ್ದಾರೆ ಎಂದು ದೂರುದಾರ ಆರೋಪಿಸಿದ್ದಾರೆ. ಚಂದನ್ ಕುಮಾರ್ ಗೌಡ ಎಂಬುವವರು ನಗರ ಪೊಲೀಸ್ ಆಯುಕ್ತ ದಯಾನಂದ್ ಅವರಿಗೆ ದೂರು ನೀಡಿದ್ದಾರೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ತಳಗವಾದಿ ಜಿಲ್ಲಾ ಪಂಚಾಯಿತಿ ಟಿಕೆಟ್ ಕೊಡಿಸುವುದಾಗಿ ಪ್ರತಾಪ್ ವಂಚಿಸಿರುವ ಆರೋಪ‌ ಕೇಳಿಬಂದಿದೆ. ಬಿಗ್ ಬಾಸ್‌ನಿಂದ ಹೊರಬಂದ ನಂತರ ಕರೆ ಸ್ವೀಕರಿಸದೇ ಹಣ ಹಿಂದಿರುಗಿಸದೆ ವಂಚಿಸಲಾಗಿದೆ ಎಂದು ಪ್ರತಾಪ್ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರುದಾರ ಚಂದನ್ ಕುಮಾರ್ ಗೌಡ ಮನವಿ ಮಾಡಿದ್ದಾರೆ.
ನನ್ನನ್ನು ಕಾಂಗ್ರೆಸ್‌ಗೆ ಬನ್ನಿ, ಯೂತ್ ಕಾಂಗ್ರೆಸ್ ಪ್ರೆಸಿಡೆಂಟ್ ಮಾಡುತ್ತೇವೆ ಎಂದಿದ್ದರು. ಆಗ ನಾನು ಕುಮಾರಸ್ವಾಮಿಯವರ ಜೊತೆ ಓಡಾಡುತ್ತಿದ್ದೆ. ಈಗಲೂ ಕುಮಾರಸ್ವಾಮಿಯವರನ್ನು ಭೇಟಿ ಮಾಡಲು ಹೋಗುತ್ತೇನೆ. ಆದರೆ, ಕುಮಾರಸ್ವಾಮಿಯವರ ಜೊತೆಗಿನ ಫೋಟೋ ಹಾಕಲ್ಲ. ನನ್ನ ಜೊತೆ ಕುಮಾರಸ್ವಾಮಿಯವರ ತೋಟದ ಮನೆಗೆ ಬಾ ಪರಿಚಯ ಮಾಡಿಸುತ್ತೇನೆ. ಕುಮಾರಸ್ವಾಮಿ ಕೆಟ್ಟ ಪದ ಬೈಯಬಹುದು, ಆದರೆ ಒಳ್ಳೆಯ ಮನುಷ್ಯ. ಡಿ.ಕೆ. ಶಿವಕುಮಾರ್ ತರ ಪೇಪರ್ ಎಸೆಯೋದು ಮಾಡಲ್ಲ. ಕುಮಾರಸ್ವಾಮಿ ಯಾರೇ ಹೋದರೂ ದುಡ್ಡು ಕೊಡುತ್ತಾರೆ ಎಂದು ಪ್ರತಾಪ್‌ ಮಾತನಾಡಿದ್ದಾರೆ ಎನ್ನಲಾದ ಆಡಿಯೊ ವೈರಲ್‌ ಆಗಿದೆ.
ಅಣ್ಣ-ತಂಗಿ ವರಸೆ ಪ್ರೀತಿಗೆ ಒಪ್ಪದ ಪೋಷಕರು; ಮನನೊಂದು ಪ್ರೇಮಿಗಳಿಬ್ಬರು ಸಾವು

ಬಟ್ಟೆ ತೊಡಲು ಕೂಡ ಸಾಧ್ಯವಾಗಲ್ಲ, ಅಷ್ಟು ನೋವು..ಖ್ಯಾತ ನಟಿಗೆ ವಿಚಿತ್ರ ಕಾಯಿಲೆ

ಬಿಸಿ ಬಿಸಿಯಾದ ಬೆಳ್ಳುಳ್ಳಿ ಕಬಾಬ್; ಈ ರೆಸಿಪಿ ಟ್ರೈ ಮಾಡೋದು ಮಿಸ್‌ ಮಾಡ್ಬೇಡಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + 13 =
Remember me
