ಬೆಂಗಳೂರು: ಕೋವಿಡ್ ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ಎನ್.ಚಲುವರಾಯಸ್ವಾಮಿ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಮತ್ತು ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆ ರದ್ದುಪಡಿಸಿ ಹೈಕೋರ್ಟ್ ಸೋಮವಾರ ಆದೇಶಿಸಿದೆ.
ಮೇಕೆದಾಟು ಯೋಜನೆ ಜಾರಿಗಾಗಿ ಆಗ್ರಹಿಸಿ ಪಾದಯಾತ್ರೆ ನಡೆಸಿದ್ದ ಸಂದರ್ಭ ಕೋವಿಡ್ ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ವಿರುದ್ಧ ಕನಕಪುರ ತಾಲೂಕಿನ ಐಜೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್ ಮತ್ತು ಪ್ರಕರಣಕ್ಕೆ ಸಂಬಂಧಿಸಿದ ನಗರದ ೪೨ನೇ ಎಸಿಎಂಎಂ ನ್ಯಾಯಾಲಯದ ವಿಚಾರಣೆ ರದ್ದುಪಡಿಸಿ ಹೈಕೋರ್ಟ್ ಆದೇಶಿಸಿದೆ.
ಪ್ರಕರಣ ಸಂಬಂಧ ತಮ್ಮ ವಿರುದ್ಧದ ಎಫ್‌ಐಆರ್ ಮತ್ತು ಸಿಎಂಎಂ ನ್ಯಾಯಾಲಯ ವಿಚಾರಣೆ ರದ್ದುಪಡಿಸುವಂತೆ ಕೋರಿ ಸಚಿವ ಚಲುವರಾಯ ಸ್ವಾಮಿ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಆದೇಶ ಮಾಡಿದೆ.ಇದೇ ಆರೋಪದ ಮೇಲೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಐಜೂರು ಠಾಣಾ ಪೊಲೀಸರು ದಾಖಲಿಸಿದ್ದ ಎಫ್‌ಐಆರ್ ಅನ್ನು ಹೈಕೋರ್ಟ್ ಈ ಹಿಂದೆ ರದ್ದುಪಡಿಸಿತ್ತು. ಆ ಆದೇಶವನ್ನು ಪರಿಗಣಿಸಿದ ಇದೀಗ ಚಲುವರಾಯಸ್ವಾಮಿ ಮೇಲಿನ ಪ್ರಕರಣವನ್ನೂ ರದ್ದುಪಡಿಸಿ ಕೋರ್ಟ್ ಆದೇಶಿಸಿದೆ.
ಏನಿದು ಪ್ರಕರಣ?ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷ ೨೦೨೨ರ ಜ.೯ರಿಂದ ೧೦ ದಿನ ಪಾದಯಾತ್ರೆ ಹಮ್ಮಿಕೊಂಡಿತ್ತು. ಪಾದಯಾತ್ರೆಯಲ್ಲಿ ಕೋವಿಡ್ ನಿಯಮ ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ಚಲುವರಾಯಸ್ವಾಮಿ ವಿರುದ್ಧ ಐಜೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಪ್ರಕರಣ ಸಂಬಂಧ ೪೨ನೇ ಎಸಿಎಂಎಂ ನ್ಯಾಯಾಲಯವು ೨೦೨೩ರ ಮಾ.೭ರಂದು ಸಚಿವರ ವಿರುದ್ಧ ಸಮನ್ಸ್ ಜಾರಿ ಮಾಡಲಾಗಿತ್ತು. ಇದರಿಂದ ಹೈಕೋರ್ಟ್ ಮೆಟ್ಟಿಲೇರಿದ್ದ ಅವರು, ಕರ್ನಾಟಕ ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಯಲು ಸರ್ಕಾರ ಗೆಜೆಟ್ ನೋಟಿಫಿಕೇಷನ್ ಹೊರಡಿಸುವ ಮೂಲಕ ಕ್ರಮ ಕೈಗೊಳ್ಳಬೇಕು. ಆದರೆ, ಕೋವಿಡ್ ನಿಯಮಗಳನ್ನು ಉಲ್ಲಂಘಿಸದಂತೆ ನಿರ್ದೇಶಿಸಿ ಪ್ರಕೃತಿ ವಿಕೋಪ ನಿರ್ವಹಣಾ ಕಾಯ್ದೆಯಡಿ ಸರ್ಕಾರ ನೋಟಿಫಿಕೇಷನ್ ಹೊರಡಿಸಿದೆ. ಆದರೆ, ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ ಅಡಿ ಹೊರಡಿಸಿಲ್ಲ. ಪ್ರಕರಣದಲ್ಲಿ ಅರ್ಜಿದಾರರ ವಿರುದ್ಧ ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಕ್ರಮ ಜರುಗಿಸಲು ಸರ್ಕಾರ ಮುಂದಾಗಿದ್ದು, ಅದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ. ಹಾಗಾಗಿ, ತಮ್ಮ ವಿರುದ್ಧದ ಎಫ್‌ಐಆರ್, ಎಸಿಎಂಎಂ ನ್ಯಾಯಾಲಯದ ಸಮನ್ಸ್ ಮತ್ತು ವಿಚಾರಣೆ ರದ್ದುಪಡಿಸಬೇಕು ಎಂದು ಕೋರಿದ್ದರು. ಆ ಮನವಿಯನ್ನು ಹೈಕೋರ್ಟ್ ಪುರಸ್ಕರಿಸಿದೆ.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:three × 1 =
Remember me
