ಚಿಕ್ಕಮಗಳೂರು:ಲಾಕ್​ಡೌನ್​ ಸಂದರ್ಭ ಬೈಕ್​ನಲ್ಲಿ ಹೊರಗೆ ಬಂದಿದ್ದ ವ್ಯಕ್ತಿಯೊಬ್ಬರು ಕಂದಕಕ್ಕೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ದುರಂತವೆಂದರೆ ಅಪಘಾತವಾಗಿ ವ್ಯಕ್ತಿ ಮೃತಪಟ್ಟು ಸುಮಾರು 20 ಗಂಟೆಗಳ ಬಳಿಕ ವಿಷಯ ಬೆಳಕಿಗೆ ಬಂದಿದೆ. ಚಿಕ್ಕಮಗಳೂರು ಜಿಲ್ಲೆ ಸಂಪ್ಲಿ ಗ್ರಾಮದ ರಂಜಿತ್ (33) ಮೃತಪಟ್ಟ ಬೈಕ್​ ಸವಾರ.
ಚಿಕ್ಕಮಗಳೂರು ಜಿಲ್ಲೆ ಬಾಳೂರು ಪೊಲೀಸ್​ ಠಾಣೆ ವ್ಯಾಪ್ತಿಯ ಸುಂಕಸಾಲೆ ಗ್ರಾಮದ ಸಮೀಪ ಈ ಅಪಘಾತ ಸಂಭವಿಸಿದೆ. ರಂಜಿತ್ ಬೈಕ್ ಸಮೇತ 6 ಅಡಿ ಕಂದಕಕ್ಕೆ ಬಿದ್ದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸುಮಾರು 20 ಗಂಟೆಗಳ ಹಿಂದೆ ಅಂದರೆ ಭಾನುವಾರ ರಾತ್ರಿ ಈ ಅಪಘಾತ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಲಾಕ್​ಡೌನ್​ ಕಾರಣಕ್ಕೆ ವಾಹನ ಸಂಚಾರ ಇರದ್ದರಿಂದ ಈ ಅಪಘಾತದ ಬಗ್ಗೆ ತಕ್ಷಣ ಯಾರಿಗೂ ಗೊತ್ತಾಗಿರಲಿಲ್ಲ. ಇಂದು ಸಂಜೆ ಸ್ಥಳೀಯರಿಂದ ಈ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದ್ದು, ಅವರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಪತಿಯನ್ನು ಹೋಮಕುಂಡದಲ್ಲಿ ಹಾಕಿ ಕೊಲೆ ಮಾಡಿದ್ದ ಪತ್ನಿ; ಬೆಚ್ಚಿಬೀಳಿಸಿದ್ದ ಹತ್ಯೆ ಪ್ರಕರಣದ ತೀರ್ಪು ಮುಂದೂಡಿಕೆ

ಕರೊನಾವನ್ನೇ ಮಣಿಸಿದವರ ಮನದಾಳ; ಸಾವು-ನೋವುಗಳ ನಡುವೆ ಆಶಾಕಿರಣ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + sixteen =
Remember me
