ಬೆಂಗಳೂರು:ನಗರದ ಮೂಡಲಪಾಳ್ಯದಲ್ಲಿ ನಡೆದ ಭೀಕರ ರಸ್ತೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಲಾಗಿದ್ದು, ಮದ್ಯಪಾನ ಮತ್ತಿನಲ್ಲಿ ಯುವಕರು ಕಾರಿನಲ್ಲಿ ಡ್ರ್ಯಾಗ್ ರೇಸ್ ಮಾಡಿದ್ದೇ ಭಯಾನಕ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ.
ಬಂಧಿತನನ್ನು ತುಷಾರ್​ ಎಂದು ಗುರುತಿಸಲಾಗಿದೆ. ಕಳೆದ ಭಾನುವಾರ ರಾತ್ರಿ ಅಪಘಾತ ನಡೆದಿತ್ತು. ಅದರ ಭೀಕರ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಬೆಚ್ಚಿಬೀಳಿಸುವಂತಿದೆ.

ಹಠಕ್ಕೆ ಬಿದ್ದವರಂತೆ ನಾ ಮುಂದೆ ತಾ ಮುಂದೆ ಎಂಬಂತೆ ಅತೀ ವೇಗವಾಗಿ ಕಾರು ಚಲಾಯಿಸಿಕೊಂಡು‌ ಬಂದು ಎದುರಿನ ರಾಯಲ್ ಎನ್ಫೀಲ್ಡ್ ಬೈಕ್​ಗೆ ಡಿಕ್ಕಿ ಹೊಡೆದಿದ್ದರು. ಡಿಕ್ಕಿಯ ರಭಸಕ್ಕೆ ಬೈಕ್​ ಎರಡು ಪೀಸ್ ಆಗಿ, ಬೈಕ್ ಸವಾರ ಅಕ್ಷಯ್ (28)​ ಮೇಲಕ್ಕೆ ಹಾರಿಬಿದ್ದಿದ್ದ.

ಅಕ್ಷಯ್ ತೀವ್ರ ಗಾಯಗೊಂಡಿದ್ದು, ಸೊಂಟದಿಂದ ಮೇಲೆ ಸ್ವಾಧೀನ ಕಳೆದುಕೊಂಡು ಖಾಸಗಿ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಈ ಸಂಬಂಧ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.(ದಿಗ್ವಿಜಯ ನ್ಯೂಸ್​)
ಬೆಂಗಳೂರು: ನಗರದ ಮೂಡಲಪಾಳ್ಯದಲ್ಲಿ ಕಳೆದ ಭಾನುವಾರ ರಾತ್ರಿ ನಡೆದ ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಬೆಚ್ಚಿಬೀಳಿಸುವಂತಿದೆ.#BikeAccident#CarAccident#Bengaluru#RoadAccidentpic.twitter.com/AObiYSl3KW
— Vijayavani (@VVani4U)December 4, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 2 =
Remember me
