ಚಾಮರಾಜನಗರ:ಬೈಕ್​ನಲ್ಲಿ ಟ್ರಿಪಲ್​ ರೈಡ್​ ಹೋಗಿದ್ದವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಈ ಮೂವರೂ ಪ್ರಯಾಣಿಸುತ್ತಿದ್ದ ಬೈಕ್ ಹಳ್ಳಕ್ಕೆ ಮಗುಚಿ ಬಿದ್ದು ಅಪಘಾತ ಸಂಭವಿಸಿದೆ. ಚಾಮರಾಜನಗರದ ಅರಕಲವಾಡಿ ಸಮೀಪದ ಮೂಡಲ ಹೊಸಹಳ್ಳಿ ಗ್ರಾಮದಲ್ಲಿ ಭಾನುವಾರ ಸಂಜೆ ಈ ದುರ್ಘಟನೆ ನಡೆದಿದೆ.
ತಮಿಳುನಾಡು ಮೂಲದ ಕುಮಾರ (45), ಮೂಡಲ ಹೊಸಹಳ್ಳಿ ಗ್ರಾಮದ ಬಸವಯ್ಯ (65) ಮೃತಪಟ್ಟವರು. ಮೂಡಲ ಹೊಸಹಳ್ಳಿಯ ಮಹದೇವಯ್ಯ ಗಾಯಗೊಂಡು ನಗರದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ:ಬೈಕ್​ನಲ್ಲಿ ಹೋಗುವಾಗ ಪ್ರಿಯಕರನ ಬೆನ್ನಿಗೆ ಇರಿದ ಪ್ರೇಯಸಿ; ಬಿದ್ದರೂ ಬಿಡದೆ ಮತ್ತೆ ಮತ್ತೆ ಇರಿದು ಸಾಯಿಸಿದಳು!
ತಮಿಳುನಾಡಿನವರಾದ ಕುಮಾರ್ ಹೊಸಹಳ್ಳಿ ಗ್ರಾಮದ ಜಮೀನಿನಲ್ಲಿ ಕೆಲಸ ಮಾಡಿಕೊಂಡಿದ್ದರು. ಬಸವಯ್ಯ, ಮಹದೇವಯ್ಯ ಸ್ನೇಹಿತರಾಗಿದ್ದು, ಮೂವರೂ ಒಂದೇ ಬೈಕ್‌ನಲ್ಲಿ ವಡ್ಡರಹಳ್ಳಿಗೆ ಹೋಗುತ್ತಿದ್ದರು. ಆಗ ಮಾರ್ಗಮಧ್ಯೆ ಬೈಕ್ ನಿಯಂತ್ರಣ ತಪ್ಪಿ, ಹಳ್ಳಕ್ಕೆ ಬಿದ್ದಿದೆ. ಬೈಕ್ ಚಾಲನೆ ಮಾಡುತ್ತಿದ್ದ ಕುಮಾರ ಹಾಗೂ ಮಧ್ಯದಲ್ಲಿ ಕುಳಿತಿದ್ದ ಬಸವಯ್ಯ ತೀವ್ರ ಗಾಯಗಳಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಿಂಬದಿ ಕುಳಿತಿದ್ದ ಮಹದೇವಯ್ಯ ಅವರಿಗೆ ಗಾಯಗಳಾಗಿವೆ.
ಇದನ್ನೂ ಓದಿ:ಬೈಕ್​ಗೆ ಕಾರು ಡಿಕ್ಕಿ: ರಸ್ತೆ ಡಿವೈಡರ್​ನ ಕಬ್ಬಿಣದ ಸಲಾಕೆ ಮೇಲೆ ಬಿತ್ತು​ ಸವಾರನ ಶವ!
ರಾಜ್ಯದಲ್ಲಿ ಮತ್ತೊಂದು ಬ್ಲಾಸ್ಟ್​: ಸ್ಫೋಟಕ ಸಾಮಗ್ರಿ ಸಿಡಿದು ಇಬ್ಬರ ಸಾವು, ಇನ್ನೊಬ್ಬನ ಸ್ಥಿತಿ ಗಂಭೀರ…

ಸಾರಾಯಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಕೆಲವು ಮದ್ಯಪ್ರಿಯರಿಗೆ ಖುಷಿಯೋ ಖುಷಿ!

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:thirteen − 1 =
Remember me
