ಕಲಬುರಗಿ:ನಿಂತಿದ್ದ ಲಾರಿಗೆ ಬೈಕ್​ ಡಿಕ್ಕಿ ಹೊಡೆದ ಪರಿಣಾಮ ಬೈಕ್​ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಕಲಬುರಗಿಯ ನಾವದಗಿ ಬಳಿ ಸಂಭವಿಸಿದೆ. ಇವರೆಲ್ಲರೂ ದೇವರ ಹರಕೆ ತೀರಿಸಲೆಂದು ಹೋಗಿದ್ದರು. ಮನೆಗೆ ಹಿಂತಿರುಗುವಾಗ ಮಾರ್ಗದಲ್ಲೇ ಬಾರದ ಲೋಕಕ್ಕೆ ಹೋಗಿದ್ದಾರೆ.
ದೀಪಕ್(45), ಯುವರಾಜ್(17) ಮತ್ತು ರಾಹುಲ್(17) ಮೃತ ದುರ್ದೈವಿಗಳು. ಇವರೆಲ್ಲರೂ ಕಲಬುರಗಿಯ ಕಮಲಾಪುರದ ಗೋಗಿ ತಾಂಡಾ ನಿವಾಸಿಗಳು. ದೇವರ ಹರಕೆ ತೀರಿಸಲೆಂದು ಕುಟುಂಬಸ್ಥರ ಜತೆ ಸಾವಳಗಿ ತಾಂಡಾಕ್ಕೆ ಹೋಗಿದ್ದರು. ಪೂಜೆ ಮುಗಿದ ಬಳಿಕ ಮಂಗಳವಾರ ರಾತ್ರಿ ವಾಪಸ್​ ಆಗುವಾಗ ಈ ದುರಂತ ಸಂಭವಿಸಿದೆ. ಕುಟುಂಬಸ್ಥರು ಕ್ರೂಸರ್ ವಾಹನದಲ್ಲಿ ತೆರಳುತ್ತಿದ್ದರು. ದೀಪಕ್​, ಯುವರಾಜ್​, ರಾಹುಲ್​ ಮೂವರೂ ಬೈಕ್​ನಲ್ಲಿ ಹೋಗುತ್ತಿದ್ದರು. ರಸ್ತೆಬದಿ ನಿಂತಿದ್ದ ಲಾರಿಗೆ ಬೈಕ್​ ಡಿಕ್ಕಿಯಾಗಿದ್ದು ಎಲ್ಲರೂ ದುರಂತ ಅಂತ್ಯ ಕಂಡಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ: ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗ ರಚನೆ

‘
ಅತ್ಯಂತ ದಯನೀಯ ಸ್ಥಿತಿಯಲ್ಲಿದ್ದ ವೃದ್ಧನ ಮನೆ ಬಾಗಿಲಿಗೇ ತೆರಳಿ ದೂರು ಸ್ವೀಕರಿಸಿದ ನ್ಯಾಯಾಧೀಶರು! ತುಮಕೂರಲ್ಲಿ ಅಪರೂಪದ ಪ್ರಕರಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 − 1 =
Remember me
