ಶಿವಮೊಗ್ಗ:ಖಾಸಗಿ ಬಸ್​ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಯುವಕ ಸ್ಥಳದಲ್ಲೇ ಸಾವಿಗೀಡಾಗಿದ್ದು, ಯುವತಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ಶಿವಮೊಗ್ಗ ಹಾಗೂ ಉಡುಪಿ ಜಿಲ್ಲೆಯ ಗಡಿ ಭಾಗದಲ್ಲಿ ಈ ಅವಘಡ ಸಂಭವಿಸಿದೆ.
ಉಡುಪಿ ಜಿಲ್ಲೆಯ ಬಾರ್ಕೂರು ಮೂಲದ ಯುವಕ ಶಶಾಂಕ್ ಸ್ಥಳದಲ್ಲೇ ಸಾವಿಗೀಡಾಗಿದ್ದು, ಯುವತಿ ನಿರ್ಮಿತಾಗೆ ಗಂಭೀರ ಗಾಯವಾಗಿದೆ. ಇವರು ಶಿವಮೊಗ್ಗದಿಂದ ಉಡುಪಿ ಕಡೆಗೆ ಬೈಕ್​ನಲ್ಲಿ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ಇದನ್ನೂ ಓದಿ:ಇದು ದೇಶದಲ್ಲಷ್ಟೇ ಅಲ್ಲ, ದಕ್ಷಿಣ ಏಷ್ಯಾದಲ್ಲೇ ಪ್ರಥಮ: ಈ ಆಸ್ಪತ್ರೆಯ ವೈದ್ಯರು ದೇಹದೊಳಗೇ ಓಡಾಡಿ ಪರೀಕ್ಷಿಸುತ್ತಾರೆ!
ಖಾಸಗಿ ಬಸ್ ಮಂಗಳೂರಿನಿಂದ ಉಡುಪಿ ಮಾರ್ಗವಾಗಿ ಶಿವಮೊಗ್ಗಕ್ಕೆ ಬರುತ್ತಿತ್ತು. ಆಗುಂಬೆ ಘಾಟಿಯ 12ನೇ ತಿರುವಿನ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಯುವತಿಯನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಸಂಬಂಧ ಉಡುಪಿಯ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಸ್​ ಡೋರೇ ಕಿತ್ತು ಹೋಯ್ತು!; ಉಚಿತ ಪ್ರಯಾಣಕ್ಕಾಗಿ ಮಹಿಳೆಯರ ‘ಶಕ್ತಿ’ ಪ್ರಯೋಗ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + 11 =
Remember me
