ವಿಜಯನಗರ:ಯುವಕ-ಯುವತಿ ಜೊತೆಯಾಗಿ ಸಾಗುತ್ತಿದ್ದ ಬೈಕೊಂದು ನಿಯಂತ್ರಣ ತಪ್ಪಿ ಕೆರೆಗೆ ಬಿದ್ದಿದ್ದು, ಈ ಪ್ರಕರಣದಲ್ಲಿ ಯುವಕ ಸಾವಿಗೀಡಾದರೆ, ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ವಿಜಯನಗರ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ.
ಹೊಸಪೇಟೆ ತಾಲೂಕಿನ ಕಮಲಾಪುರ ಕೆರೆ ಏರಿ ಬಳಿ ಈ ದುರ್ಘಟನೆ ಸಂಭವಿಸಿದೆ. ಮರಿಯಮ್ಮನ ಹಳ್ಳಿಯ ನಿವಾಸಿ ರವಿಕುಮಾರ್ (28) ಸಾವಿಗೀಡಾದ ಯುವಕ, ಬೈಕ್​​ನಲ್ಲಿ ಈತನ ಜೊತೆಗಿದ್ದ ಯುವತಿಯ ಗುರುತು ಇನ್ನಷ್ಟೇ ಪತ್ತೆ ಆಗಬೇಕಿದೆ.
ಇವರಿಬ್ಬರು ಹೊಸಪೇಟೆಯಿಂದ ಕಮಲಾಪುರದ ಕಡೆಗೆ ಸಾಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಬೈಕ್​ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದಿದ್ದನ್ನು ಕಂಡ ಸ್ಥಳೀಯರು ರಕ್ಷಣೆಗೆ ಧಾವಿಸಿದ್ದಾರೆ. ಬಳಿಕ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದು, ಅವರು ಯುವಕನ ಶವ ಹೊರ ತೆಗೆದಿದ್ದಾರೆ. ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಅಯ್ಯೋ ಪಾಪ..’ ಎಂದು ಹಣ ಹಾಕುವ ಮುನ್ನ ಹುಷಾರು: ಹೀಗೂ ವಂಚಿಸುತ್ತಾರೆ!

ವಿವಿ ಕ್ಯಾಂಪಸ್​ನಲ್ಲಿ ಮದ್ಯಪಾನ-ಧೂಮಪಾನ ನಮ್ಮ ಹಕ್ಕು ಎಂದ ವಿದ್ಯಾರ್ಥಿನಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + 13 =
Remember me
