ಉಡುಪಿ:ಜಿಲ್ಲಾ ಯುವ ಕಾಂಗ್ರೆಸ್ ಆಯೋಜಿಸಿದ್ದ ಬೈಕ್ ಜಾಥಾದಲ್ಲಿ ಪಕ್ಷದ ರಾಷ್ಟ್ರೀಯ ವಕ್ತಾರೆ ಸುರಯ್ಯ ಅಂಜುಮ್ ಭಾಗವಹಿಸಿದ್ದರು. ಈ ವೇಳೆ ನಾಯಕಿ ಎಡವಟ್ಟೊಂದನ್ನು ಮಾಡಿಕೊಂಡಿದ್ದಾರೆ. ಇದೀಗ ಸುರಯ್ಯ ಅಂಜುಮ್ ಮಾಡಿಕೊಂಡ ಅವಾಂತರಕ್ಕೆ ಸಾಮಾಜಿಕ ಜಾಲತಾಣದ ಮೂಲಕ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಬೈಕ್​ ಜಾಥಾದ ಹಿನ್ನಲೆಯಲ್ಲಿ ಪಕ್ಷದ ರಾಷ್ಟ್ರೀಯ ವಕ್ತಾರೆ ಸುರಯ್ಯ ಅಂಜುಮ್ ಬುಲೆಟ್ ಬೈಕ್ ಚಲಾಯಿಸಿದ್ದಾರೆ. ಆಕ್ರೋಶಕ್ಕೆ ಕಾರಣವಾಗಿರುವುದು ಇದೀಗ ಬೈಕ್​ನಲ್ಲಿ ಹಾಕಿದ ರಾಷ್ಟ್ರಧ್ವಜ. ಭಾರತದ ರಾಷ್ಟ್ರಧ್ವಜವನ್ನು ಉಲ್ಟಾ ಹಾರಿಸಿಕೊಂಡಿದ್ದಾರೆ. ಹಸಿರು, ಬಿಳಿ, ಕೇಸರಿ ಬರುವಂತೆ ಹಾಕಿಕೊಂಡು ಬೈಕ್ ಚಲಾಯಿಸಿದ್ದಾರೆ.
ಕಾಂಗ್ರೆಸ್​ ನಾಯಕಿಯ ಎಡವಟ್ಟಿಗೆ ಆಕ್ರೋಶದ ಮಾತುಗಳು ಕೇಳಿ ಬರುತ್ತಿವೆ. ರಾಷ್ಟ್ರೀಯ ಪಕ್ಷದ ನಾಯಕಿಯೊಬ್ಬರಿಗೆ ರಾಷ್ಟ್ರಧ್ವಜವನ್ನು ಹೇಗೆ ಬಳಸಿಕೊಳ್ಳಬೇಕು ಎಂಬುವುದು ಗೊತ್ತಿಲ್ಲ ಎಂದು ಜನರು ಮಾತಾಡಿಕೊಳ್ಳುತ್ತಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × four =
Remember me
