ಆನೇಕಲ್:ರಾಜಧಾನಿ ಬೆಂಗಳೂರಿನಲ್ಲಿ ಫ್ಲೈ-ಓವರ್​ನಿಂದ ವಾಹನಗಳು ಕೆಳಕ್ಕೆ ಬಿದ್ದಂಥ ಭೀಕರ ಅಪಘಾತಗಳು ನಡೆದಿದ್ದು, ಇಂದು ಅಂಥದ್ದೇ ಒಂದು ಅಪಘಾತ ಸಂಭವಿಸಿದ್ದು, ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದ ಪರಿಣಾಮವಾಗಿ, ಬೈಕ್ ಸವಾರ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ.
ಎಲೆಕ್ಟ್ರಾನಿಕ್ ಸಿಟಿಯ ಎಲೆವೇಟೆಡ್ ಫ್ಲೈ-ಓವರ್ ಮೇಲೆ ಈ ಅಪಘಾತ ಸಂಭವಿಸಿದೆ. ಬೆಂಗಳೂರಿನ ಸಾಫ್ಟ್​ವೇರ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಆಂಧ್ರಪ್ರದೇಶ ಮೂಲದ ಕೌರಿ ನಾಗಾರ್ಜುನ ಎಂಬಾತ ಸಾವಿಗೀಡಾದ ಬೈಕ್ ಸವಾರ.
ಇಂದು ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಸಿಲ್ಕ್ ಬೋರ್ಡ್ ಕಡೆಯಿಂದ ಎಲೆಕ್ಟ್ರಾನಿಕ್ ಸಿಟಿ ಮಾರ್ಗವಾಗಿ ಪಲ್ಸರ್​ ಬೈಕ್​ನಲ್ಲಿ ಬರುತ್ತಿದ್ದ ನಾಗಾರ್ಜುನ, ಎಲೆಕ್ಟ್ರಾನಿಕ್ ಸಿಟಿ ಬಳಿ ಬಲಭಾಗಕ್ಕೆ ತೆಗೆದುಕೊಳ್ಳುವ ಸಂದರ್ಭದಲ್ಲಿ ವೇಗದಲ್ಲಿದ್ದ ಬೈಕ್​ ಹತೋಟಿಗೆ ಸಿಗದೆ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ನಾಗಾರ್ಜುನ ಫ್ಲೈ-ಓವರ್​ನಿಂದ ಕೆಳಕ್ಕೆ ಬಿದ್ದಿದ್ದು, ತಲೆಗೆ ಗಂಭೀರ ಗಾಯವಾಗಿ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ.
‘ಕಾಂತಾರ’ ಮತ್ತೊಂದು ದಾಖಲೆ; ಹೊಂಬಾಳೆ ಫಿಲ್ಮ್ಸ್​ಗೆ ಇದು ಸಂಭ್ರಮದ ಸಂಗತಿ..

‘ಕಾಂತಾರ’ ಸಿನಿಮಾ ನೋಡಿ ಹೊರಬರುತ್ತಿದ್ದಾಗ ಹೃದಯಾಘಾತ; ಚಿತ್ರಮಂದಿರದಲ್ಲೇ ಸಾವು..

31 ಪ್ರಯಾಣಿಕರಿದ್ದ ಬಸ್ ಚಾಲಕನಿಗೆ ಹೃದಯಾಘಾತ; ನಿಯಂತ್ರಣ ತಪ್ಪಿ ಪಲ್ಟಿಯಾದ ಬಸ್..

ಇಪ್ಪತ್ತಕ್ಕೂ ಹೆಚ್ಚು ವರ್ಷಗಳಿಂದ ಪ್ರತಿ ಮಂಗಳವಾರ ಕಾಡುವ ಸಮಸ್ಯೆ: ಗ್ರಾಮಸ್ಥರ ಪರವಾಗಿ ಸಚಿವರಿಗೆ ಮನವಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × five =
Remember me
