ಬೆಂಗಳೂರು:ರಾಜಧಾನಿಯಲ್ಲಿ ಮತ್ತೊಂದು ಭೀಕರ ಕೇಸ್ ಆಗಿದ್ದು, ಶಾಸಕರೊಬ್ಬರ ಸ್ಟಿಕ್ಕರ್ ಇರುವ ಕಾರೊಂದು ದ್ವಿಚಕ್ರವಾಹನ ಸವಾರನ ತಲೆ ಮೇಲೇ ಹಾದು ಹೋಗಿದೆ. ನೃಪತುಂಗ ರಸ್ತೆಯ ಮ್ಯಾಜಿಸ್ಟ್ರೇಟ್​ ಕೋರ್ಟ್ ಬಳಿಯೇ ಈ ಘಟನೆ ಸಂಭವಿಸಿದೆ.
ಅತಿವೇಗವಾಗಿ ಬಂದ ಇನ್ನೋವಾ ಕಾರು (ಕೆಎ 50 ಎಂಎ 6600) ದ್ವಿಚಕ್ರ ವಾಹನ ಸವಾರನಿಗೆ ಡಿಕ್ಕಿ ಹೊಡೆದಿತ್ತು. ಮಾತ್ರವಲ್ಲದೆ ಬಿದ್ದ ಆತನ ತಲೆ ಮೇಲೆ ವಾಹನ ಹಾದುಹೋಗಿದೆ. ಗಂಭೀರವಾಗಿ ಗಾಯಗೊಂಡ ಸವಾರನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆತ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾನೆ.
ಎಚ್​ಎಸ್​ಆರ್​ ಬಡಾವಣೆ ನಿವಾಸಿ ಮಾಜಿದ್ ಖಾನ್​ (39) ಸಾವಿಗೀಡಾದ ವ್ಯಕ್ತಿ. ಈತ ಆಟೋಮೊಬೈಲ್ಸ್​ ಅಂಗಡಿ ಇಟ್ಟುಕೊಂಡಿದ್ದಾನೆ. ಇನ್ನೊಬ್ಬ ವ್ಯಕ್ತಿ ರಿಯಾಜ್ ಎಂಬಾತನ ಕಾಲು ಮುರಿತಕ್ಕೆ ಒಳಗಾಗಿದ್ದು, ತಲೆಗೂ ಗಾಯವಾಗಿದೆ. ಈತನನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜತೆಗೆ ಇನ್ನೂ ಮೂವರಿಗೆ ಗಾಯಗಳಾಗಿವೆ.
ಗಂಟೆಗೆ ಸುಮಾರು 80ರಿಂದ 100 ಕಿ.ಮೀ. ಸ್ಪೀಡ್​ನಲ್ಲಿದ್ದ ಕಾರು ಚಾಲಕ ಅಪಘಾತದ ಬಳಿಕ ವಾಹನ ಸೈಡ್​ಗೆ ಹಾಕಿದ್ದ. ಕಾರು ರಾಮು ಸುರೇಶ್ ಎಂಬವರ ಹೆಸರಿನಲ್ಲಿ ಇರುವುದು ತಿಳಿದು ಬಂದಿದೆ. ಮಾತ್ರವಲ್ಲ ಕಾರಿನ ಮೇಲೆ ಸಾಗರ ಶಾಸಕ ಹರತಾಳು ಹಾಲಪ್ಪ ಅವರ ಸ್ಟಿಕ್ಕರ್ ಇದೆ. ಚಾಲಕನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಚಾಲಕ ಕುಡಿದು ವಾಹನ ಚಲಾಯಿಸುತ್ತಿದ್ದ ಎನ್ನಲಾಗಿದ್ದು, ತನಿಖೆ ನಡೆಯುತ್ತಿದೆ. ಸ್ಥಳಕ್ಕೆ ಹಲಸೂರು ಗೇಟ್ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪೊಲೀಸರೆದುರೇ ಮಾರಕಾಸ್ತ್ರ ಝಳಪಿಸಿ ದಾದಾಗಿರಿ; ಒಳ್ಳೇ ಮಾತಲ್ಲಿ ಹೇಳಿದ್ರೂ ಕೇಳದವನಿಗೆ ಶೂಟ್ ಮಾಡಿ ಬೆಂಡೆತ್ತಿದ ಪೊಲೀಸರು!

ವರ್ಕೌಟ್​ ಆದ 50% ಆಫರ್​: ಮೂರನೇ ದಿನವೂ ಕೋಟಿಗಟ್ಟಲೆ ಟ್ರಾಫಿಕ್​ ಫೈನ್​ ಸಂಗ್ರಹ; ಒಟ್ಟು ಮೊತ್ತವೆಷ್ಟು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + 5 =
Remember me
