ಕಲಬುರಗಿ:ರಾಜ್ಯದ ಕೆಲವೆಡೆ ಭಾರಿ ಮಳೆಗೆ ಅವಾಂತರಗಳು ಉಂಟಾಗಿದ್ದು, ಬೈಕ್​ ಸವಾರನೊಬ್ಬ ತುಂಬಿ ಹರಿಯುತ್ತಿರುವ ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ. ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಶ್ರೀಚಂದ ಗ್ರಾಮದಲ್ಲಿ ಈ ಅನಾಹುತ ಸಂಭವಿಸಿದೆ.
ಗ್ರಾಮದ ಬೀರಶೆಟ್ಟಿ ಭೋದನವಾಡಿ ಹಳ್ಳದಲ್ಲಿ ಯುವಕ ಕೊಚ್ಚಿಹೋಗಿದ್ದಾನೆ. ಭಾನುವಾರ ಜಮೀನಿನಲ್ಲಿ ಕೆಲಸ ಮುಗಿಸಿ ಬೈಕ್​ನಲ್ಲಿ ಮನೆಗೆ ವಾಪಸ್ ಶ್ರೀಚಂದದ ಹಳ್ಳ ತುಂಬಿ ಹರಿಯುತ್ತಿದ್ದರೂ ಬೈಕ್‌ ಚಲಾಯಿಸುತ್ತಲೇ ಅದನ್ನು ದಾಟಲು ಯತ್ನಿಸಿದ್ದೇ ಅವಘಡಕ್ಕೆ ಕಾರಣ.
ಹಳ್ಳದ ಮಧ್ಯೆ ಬೈಕ್ ಸ್ಕಿಡ್ ಆಗಿ ಬಿದ್ದ ಬೀರಶೆಟ್ಟಿ, ಬಳಿಕ ಎದ್ದು ಬೈಕ್ ಸ್ಟಾರ್ಟ್ ಮಾಡಲು ಮುಂದಾಗಿದ್ದ. ಬೈಕ್​ ನೀರಿನಲ್ಲಿ ಬಿದ್ದಿದ್ದರಿಂದ ತಕ್ಷಣ ಸ್ಟಾರ್ಟ್ ಆಗಿರಲಿಲ್ಲ. ನೀರಿನ ಸೆಳೆತಕ್ಕೆ ಸಿಕ್ಕಿದ ಆತನನ್ನು ರಕ್ಷಿಸಲು ‌ಸ್ಥಳೀಯರು ಹಗ್ಗ ಎಸೆದಿದ್ದರು. ಆದರೆ ಹಗ್ಗವನ್ನು ಸೊಂಟಕ್ಕೆ ಕಟ್ಟಿಕೊಳ್ಳುವಷ್ಟರಲ್ಲಿ ನೀರಿನ ರಭಸಕ್ಕೆ ಆತ ಕೊಚ್ಚಿ ಹೋಗಿದ್ದಾನೆ. ಅಗ್ನಿ ಶಾಮಕ ಸಿಬ್ಬಂದಿ ಮತ್ತು ಪೊಲೀಸರು ಶೋಧ ಕಾರ್ಯ ನಡೆಸಿದ್ದು, ನರೋಣಾ ಪೊಲೀಸ್ ‌ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + 7 =
Remember me
