ಉಡುಪಿ:ವಿದ್ಯುತ್​ ಗುತ್ತಿಗೆದಾರರೊಬ್ಬರ ನಿರ್ಲಕ್ಷ್ಯದಿಂದಾಗಿ ದ್ವಿಚಕ್ರ ವಾಹನ ಸವಾರರೊಬ್ಬರು ಅನ್ಯಾಯವಾಗಿ ಪ್ರಾಣ ಕಳೆದುಕೊಂಡಂತಾಗಿದೆ. ರಸ್ತೆಯಲ್ಲಿ ನೇತಾಡುತ್ತಿದ್ದ ವಿದ್ಯುತ್ ತಂತಿ ಕೊರಳಿಗೆ ಉರುಳಿನಂತೆ ಸಿಕ್ಕಿಹಾಕಿಕೊಂಡಿದ್ದರಿಂದ ಆ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಉಡುಪಿ ಜಿಲ್ಲೆ ಬೈಂದೂರು ತಾಲೂಕು ಆಲಗದ್ದೆ ಯರುಕೋಣೆ ನಿವಾಸಿ ಶೇಖರ್ ಶೆಟ್ಟಿ (68) ಮೃತಪಟ್ಟವರು. ಬೈಂದೂರಿನ ಹೇರೂರು-ಅರೆಹೊಳೆ ರಸ್ತೆಯಲ್ಲಿ ಈ ಅವಘಡ ಸಂಭವಿಸಿದೆ. ಬೈಂದೂರು ಸುತ್ತಮುತ್ತ ಸುರಿದ ಭಾರಿ ಗಾಳಿಮಳೆಯಿಂದಾಗಿ ಬಿದ್ದಿದ್ದ ವಿದ್ಯುತ್ ತಂತಿಗಳ ದುರಸ್ತಿ ವೇಳೆ ಈ ಅನಾಹುತ ನಡೆದುಹೋಗಿದೆ.
ಇದನ್ನೂ ಓದಿ:‘ಶವಸಂಸ್ಕಾರಕ್ಕೆ ಸೌದೆಯನ್ನು ಉಚಿತವಾಗಿ ಕೊಡಲಾಗುವುದು’: ಹೀಗೊಂದು ಸಮಾಜ ಸೇವೆ, ನೊಂದವರಿಗೆ ಸಹಾಯ!
ವಿದ್ಯುತ್​ ತಂತಿಗಳನ್ನು ದುರಸ್ತಿ ಪಡಿಸುವ ಸಂದರ್ಭ ರಸ್ತೆಯಲ್ಲಿ ಯಾವುದೇ ಸೂಚನ ಫಲಕಗಳನ್ನು ಅಳವಡಿಸದೆ ಗುತ್ತಿಗೆದಾರ ಕಾಮಗಾರಿ ನಡೆಸಿದ್ದರಿಂದ ಈ ಅವಘಡ ಸಂಭವಿಸಿದೆ ಎಂಬ ಆರೋಪ ಕೇಳಿಬಂದಿದೆ. ದುರಸ್ತಿ ನಡೆಯುತ್ತಿದ್ದ ವೇಳೆ ವಿದ್ಯುತ್ ತಂತಿ ಆಳೆತ್ತರದಲ್ಲಿ ನೇತಾಡುತ್ತಿದ್ದು, ಆಗ ಅದೇ ದಾರಿಯಲ್ಲಿ ಬೈಕ್​ನಲ್ಲಿ ಬರುತ್ತಿದ್ದ ಶೇಖರ್ ಶೆಟ್ಟಿ ಅವರ ಕೊರಳಿಗೆ ಉರುಳಿನಂತೆ ಸಿಕ್ಕಿ ಹಾಕಿಕೊಂಡಿದೆ. ಪರಿಣಾಮ ಅವರು ಗೋಣು ಮುರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಲಿಸುತ್ತಿದ್ದ ಬೈಕ್ ಮೇಲೇ ಬಿದ್ದ ಮರ!; ನಡೆದುಕೊಂಡು ಹೋಗುತ್ತಿದ್ದವರೂ ಮರದಡಿಗೆ ಸಿಲುಕಿದರು..

ನೆಗೆಟಿವ್​ನಲ್ಲೂ ಪಾಸಿಟಿವ್!; ಕರೊನಾ ವೈರಸ್​ಗೆ ಹೆದರಿದರಾ ಕೊಲೆಗಡುಕರು, ಕಳ್ಳರು, ದರೋಡೆಕೋರರು?!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × five =
Remember me
