ಕಾರವಾರ:ಕರೊನಾ ರೋಗಿ ಆಸ್ಪತ್ರೆಯಿಂದ ನಾಪತ್ತೆಯಾಗಿ ಆತಂಕ ಮೂಡಿಸಿದ ಘಟನೆ ಸೋಮವಾರ ‌ನಡೆದಿದೆ. ಬೈಕ್ ಕಳ್ಳತನ ಆರೋಪದ ಮೇಲೆ ಶಿರಸಿ ಪೊಲೀಸರಿಂದ ಬಂಧಿತನಾಗಿದ್ದ ಆರೋಪಿಗೆ ಕರೊನಾ ಸೋಂಕು ಭಾನುವಾರ ದೃಢಪಟ್ಟಿತ್ತು. ಇದರಿಂದ ಶಿರಸಿ ನಗರ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿತ್ತು. 6 ಜನ ಪೊಲೀಸರು, ನ್ಯಾಯಾಧೀಶರನ್ನು, ನ್ಯಾಯಾಲಯದ ನಾಲ್ವರು ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಲಾಗಿತ್ತು.
ಆತನನ್ನು ಕಾರವಾರ ಕ್ರಿಮ್ಸ್ ಕರೊನಾ ಆಸ್ಪತ್ರೆಗೆ ಸೇರಿಸಲಾಗಿತ್ತು. ಸೋಮವಾರ ಬೆಳಗಿನಜಾವ ಕಳ್ಳ ಇಬ್ಬರು ಸಹ ರೋಗಿಗಳ ಮೊಬೈಲ್ ಕದ್ದು, ಗ್ಲಾಸ್ ಒಡೆದು ನಾಪತ್ತೆಯಾಗಿದ್ದ. 11 ಗಂಟೆಯ ಬಳಿಕ ಆತನನ್ನು ಕದ್ರಾ ರಸ್ತೆಯಲ್ಲಿ ಸಾಕಳಿ ಬ್ರಿಜ್ ಸಮೀಪ ಬಂಧಿಸಲಾಗಿದೆ. ಆತ ಬಸ್ ನಲ್ಲಿ ಪ್ರಯಾಣ ಬೆಳೆಸಿದ್ದರಿಂದ ಸಹ ಪ್ರಯಾಣಿಕರಿಗೆ, ಪೊಲೀಸರಿಗೆ ಆತಂಕ ಹುಟ್ಟಿಸಿದೆ.
ಇದನ್ನೂ ಓದಿ:ಅಶೋಕ್ ಕರೊನಾ ಉಸ್ತುವಾರಿ ತಾತ್ಕಾಲಿಕ?
ಉಡುಪಿ ಪೊಲೀಸರಿಂದ ಬಂಧಿತನಾಗಿದ್ದವನನ್ನು ಧಾರವಾಡ ಪೊಲೀಸರು ತನಿಖೆಗೆ ಪಡೆದಿದ್ದರು. ನಂತರ ಶಿರಸಿಯಲ್ಲಿ ನಡೆದ ಬೈಕ್ ಕಳ್ಳತನ ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ ಜೂ. 24 ರಂದು ಶಿರಸಿ ಶಹರ ಠಾಣೆ ಪೊಲೀಸರು ಆತನನ್ನು ಬಾಡಿ ವಾರಂಟ್ ಮೇಲೆ ವಶಕ್ಕೆ ಪಡೆದಿದ್ದರು. ನ್ಯಾಯಾಧೀಶರ ಸೂಚನೆಯಂತೆ ಆತನನ್ನು ಕರೊನಾ ಪರೀಕ್ಷೆಗೆ ಒಳಪಡಿಸಿದಾಗ ಆತನಿಗೆ ರೋಗ ಇರುವುದು ಖಚಿತವಾಗಿತ್ತು.
ಎಎಸ್​ಐ ಬಲಿ ಪಡೆದ ಕೋವಿಡ್-19: ಪೊಲೀಸರಲ್ಲೂ ಮಡುಗಟ್ಟಿದೆ ಆತಂಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + nineteen =
Remember me
