ಕಲಬುರಗಿ:ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮದ ಬಳಿ ಮಂಗಳವಾರ ರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ದುರ್ಮರಣಕ್ಕೀಡಾಗಿದ್ದಾರೆ. ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ಮೃತದೇಹಗಳ ದೃಶ್ಯ ಬೆಚ್ಚಿಬೀಳಿಸುವಂತಿತ್ತು.
ಎರಡು ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಲಾಡ್ಲಾಪುರ ಗ್ರಾಮದ ಮರೆಪ್ಪ(50), ಬಸಪ್ಪ(32), ಅಲ್ಲೂರು ಗ್ರಾಮದ ದೇವೇಂದ್ರ(50) ಮತ್ತು ಮಲ್ಲಪ್ಪ ರಾಯಪ್ಪ (35) ಮೃತ ಪಟ್ಟಿದ್ದಾರೆ. ಹನಮಂತ ಮತ್ತು ಕಾಶಿನಾಥ ಎಂಬುವರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಪಘಾತಕ್ಕೀಡಾದ ಬೈಕ್​ಗಳಲ್ಲಿ ತಲಾ ಮೂವರು ಸವಾರಿ ಮಾಡುತ್ತಿದ್ದರು. ಎರಡೂ ಬೈಕ್​ಗಳು ಮುಖಾಮುಖಿ ಡಿಕ್ಕಿಯಾದ ರಭಸಕ್ಕೆ ನಜ್ಜುಗುಜ್ಜಾಗಿವೆ.
ಬೈಕ್​ನಲ್ಲಿ ಕುಳಿತ್ತಿದ್ದವರ ಪೈಕಿ ಮೂವರು ಸ್ಥಳದಲ್ಲೇ ದುರಂತ ಅಂತ್ಯಕಂಡಿದ್ದಾರೆ. ರಕ್ತಸಿಕ್ತ ಮೃತದೇಹಗಳ ದೃಶ್ಯ ಬೆಚ್ಚಿಬೀಳಿಸುವಂತಿತ್ತು. ಮತ್ತೊಬ್ಬ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ. ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಟವಾಡುತ್ತಲೇ ಲಿಫ್ಟ್​ ಗುಂಡಿಗೆ ಬಿದ್ದು ಪ್ರಾಣಬಿಟ್ಟ 2 ವರ್ಷದ ಮಗು!

ತನ್ನದೇ ಸೆಕ್ಸ್​ ವಿಡಿಯೋ ಮಾರುತ್ತಿದ್ದ ಬಸ್​ ಕಂಡಕ್ಟರ್​! ಪರಸ್ತ್ರೀಯರೊಂದಿಗೂ ಲೈಂಗಿಕ ಸಂಪರ್ಕ, 65 ವಿಡಿಯೋ ವಶ

ಅಕ್ಕನ ಮನೆಗೆ ಬಾರದ ಬಾವ, ಸಿಟ್ಟಿಗೆದ್ದ ಬಾಮೈದ ಮಹಿಳೆಯನ್ನು ಕೊಂದುಬಿಟ್ಟ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + 10 =
Remember me
