ಬೆಂಗಳೂರು:ರಾಜ್ಯದ ಸರ್ಕಾರಿ ಶಾಲೆ-ಕಾಲೇಜುಗಳನ್ನು ಸಬಲೀಕರಣ ಗೊಳಿಸುವ ಉದ್ದೇಶದಿಂದ ಮೂಲಸೌಕರ್ಯ, ಶಿಕ್ಷಕರ ನೇಮಕ ಮತ್ತು ವಿದ್ಯಾರ್ಥಿಗಳಲ್ಲಿ ಕಲಿಕಾ ಸಾಮರ್ಥ್ಯ ಸುಧಾರಿಸುವ ಯೋಜನೆಗಳಿಗೆ ಬಜೆಟ್​ನಲ್ಲಿ ಆದ್ಯತೆ ನೀಡಲಾಗಿದೆ.
2024-25ನೇ ಸಾಲಿನಲ್ಲಿ ಶಾಲಾ- ಕಾಲೇಜುಗಳಲ್ಲಿ 850 ಕೋಟಿ ರೂ ವೆಚ್ಚದಲ್ಲಿ ಕೊಠಡಿ ನಿರ್ವಣ, ದುರಸ್ತಿ, ಶೌಚಗೃಹ ನಿರ್ಮಾಣ ಕಾಮಗಾರಿ ಕೈಗೊಳ್ಳುವುದಾಗಿ ಘೋಷಿಸಲಾಗಿದೆ. ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿರುವ ಸರ್ಕಾರಿ ಪ್ರೌಢಶಾಲೆಗಳಲ್ಲಿ ವಿಜ್ಞಾನ ಪ್ರಯೋಗಾಲಯ, ಕಂಪ್ಯೂಟರ್ ಲ್ಯಾಬ್, ಇಂಟರ್​ನೆಟ್ ಸೌಲಭ್ಯಗಳನ್ನು 2 ವರ್ಷದಲ್ಲಿ ಕಲ್ಪಿಸಲು 50 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. 2 ಸಾವಿರ ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ದ್ವಿಭಾಷಾ ಮಾಧ್ಯಮ (ಕನ್ನಡ ಮತ್ತು ಇಂಗ್ಲಿಷ್) ಶಾಲೆಗಳಾಗಿ ಪರಿವರ್ತಿಸಲಾಗುವುದಾಗಿ ಘೋಷಿಸಿದೆ.
ಶಾಲೆಗಳಿಗೆ ಉಚಿತ ವಿದ್ಯುತ್, ನೀರು: ರಾಜ್ಯದ 46,829 ಸರ್ಕಾರಿ ಶಾಲೆಗಳು ಮತ್ತು 1,234 ಪಿಯು ಕಾಲೇಜುಗಳಲ್ಲಿ ಉಚಿತ ವಿದ್ಯುತ್ ಮತ್ತು ಕುಡಿಯುವ ನೀರಿನ ಸೌಲಭ್ಯ ಒದಗಿಸಲು 25 ಕೋಟಿ ರೂ. ಮೀಸಲಿಡಲಾಗಿದೆ. ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಲ್ಲಿ ಶಿಕ್ಷಕರು ಮತ್ತು ಉಪನ್ಯಾಸಕರ ನೇಮಕ ಪ್ರಕ್ರಿಯೆ ಕೈಗೊಳ್ಳುವುದಾಗಿ ತಿಳಿಸಿದೆ.
ಕಲಿಕಾ ಸಾಮರ್ಥ್ಯಕ್ಕೆ ಮರು ಸಿಂಚನ: 3ರಿಂದ 5ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಜೆ-ಪಾಲ್ ಸಂಸ್ಥೆಯ ಸಹಯೋಗದಲ್ಲಿ ಗಣಿತ-ಗಣಕ ಕಾರ್ಯಕ್ರಮ, ಕಲಿಕೆಯಲ್ಲಿ ಹಿಂದುಳಿದ 6 ಮತ್ತು 7ನೇ ತರಗತಿ ವಿದ್ಯಾರ್ಥಿಗಳಿಗೆ 10 ಕೋಟಿ ರೂ. ಅನುದಾನದಲ್ಲಿ ‘ಮರು ಸಿಂಚನ’ ಕಾರ್ಯಕ್ರಮ. ಎಲ್ಲ ಶಿಕ್ಷಣ ಸಂಸ್ಥೆಗಳನ್ನು ಸಾಮಾಜಿಕ ಸಾಮರಸ್ಯ, ವೈಜ್ಞಾನಿಕ ಮನೋಭಾವ ಮತ್ತು ಸಹಬಾಳ್ವೆಯ ವಿದ್ಯಾಕೇಂದ್ರಗಳನ್ನಾಗಿ ರೂಪಿಸಲು ‘ನಾವು ಮನುಜರು’ ಎಂಬ ಹೆಸರಿನಲ್ಲಿ ಶಾಲಾ-ಕಾಲೇಜುಗಳಲ್ಲಿ ವಾರಕ್ಕೆ 2 ಗಂಟೆಗಳ ವಿಚಾರ ವಿಮರ್ಶೆ ಮತ್ತು ಸಂವಾದ ಚಟುವಟಿಕೆಗಳನ್ನು ಒಳಗೊಂಡ ತರಗತಿಗಳನ್ನು ನಡೆಸಲಾಗುತ್ತದೆ.
ಆರೋಗ್ಯ ಭಂಡಾರ ಸ್ಥಾಪನೆ:ಸಾರ್ವಜನಿಕರ ಆರೋಗ್ಯ ಮಾಹಿತಿ ಎಲ್ಲ ಆಸ್ಪತ್ರೆಗಳು, ವೈದ್ಯರಿಗೆ ಲಭ್ಯವಾಗುವಂತೆ ಮತ್ತು ಹೆಚ್ಚಿನ ಚಿಕಿತ್ಸೆಗಾಗಿ ಉನ್ನತ ಆಸ್ಪತ್ರೆಗಳಿಗೆ ಶಿಫಾರಸು ಮತ್ತು ಚಿಕಿತ್ಸಾ ಸಮಯವನ್ನು ಸ್ವಯಂಚಾಲಿತವಾಗಿ ನಿಗದಿಪಡಿಸುವ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ‘ಆರೋಗ್ಯ ಭಂಡಾರ’ (ಹೆಲ್ತ್ ರೆಪೊಸಿಟರಿ) ತೆರೆಯಲಾಗುವುದು ಎಂದು ಬಜೆಟ್​ನಲ್ಲಿ ಘೋಷಿಸಲಾಗಿದೆ. ಸಾರ್ವಜನಿಕರ ಆರೋಗ್ಯ ಮಾಹಿತಿಯನ್ನು ಡಿಜಿಟಲೀಕರಣಗೊಳಿಸುವ ಸಂಬಂಧ ‘ಡಿಜಿಟಲ್ ಹೆಲ್ತ್ ಸೊಸೈಟಿ’ ಆರಂಭಿಸಲು ಈಗಾಗಲೇ ಕ್ರಮ ವಹಿಸಲಾಗಿದೆ. ಅದರಡಿಯಲ್ಲಿ ಈಗ ಆರೋಗ್ಯ ಭಂಡಾರ ಸ್ಥಾಪಿಸುತ್ತಿದೆ.
ಮಹಿಳೆಯರ ಉನ್ನತ ಶಿಕ್ಷಣಕ್ಕೆ ಒತ್ತು:ಮಹಿಳೆಯರ ಉನ್ನತ ಶಿಕ್ಷಣಕ್ಕೆ ಬಜೆಟ್​ನಲ್ಲಿ ಒತ್ತು ನೀಡಲಾಗಿದೆ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿ (ಎನ್​ಇಪಿ)ಗೆ ಪರ್ಯಾಯವಾಗಿ ರಚನೆಯಾಗುತ್ತಿರುವ ರಾಜ್ಯ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಸಿವುದು ಉನ್ನತ ಶಿಕ್ಷಣ ಇಲಾಖೆಯಲ್ಲಿನ ಪ್ರಮುಖ ಯೋಜನೆಗಳಾಗಿವೆ.
ಮೂಲಸೌಕರ್ಯ:2024-25ನೇ ಸಾಲಿನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅಗತ್ಯ ಮೂಲಸೌಲಭ್ಯ ಕಾಮಗಾರಿಗಳಿಗೆ 250 ಕೋಟಿ ರೂ. ಮತ್ತು ಸರ್ಕಾರಿ ಪಾಲಿಟೆಕ್ನಿಕ್ ಮತ್ತು ಇಂಜಿನಿಯರಿಂಗ್ ಕಾಲೇಜುಗಳ ಕಾಮಗಾರಿಗಳಿಗೆ 120 ಕೋಟಿ ರೂ. ಅನುದಾನ ಒದಗಿಸಲಾಗಿದೆ.
ಯುವಿಸಿಇ ಅಭಿವೃದ್ಧಿಗೆ 500 ಕೋಟಿ ರೂ.:ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯವನ್ನು (ಯುವಿಸಿಇ) 500 ಕೋಟಿ ರೂ. ವೆಚ್ಚದಲ್ಲಿ ಐಐಟಿ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುವುದು. ಇದಕ್ಕಾಗಿ ಸರ್ಕಾರದಿಂದ 100 ಕೋಟಿ ರೂ. ಅನುದಾನ. ಜತೆಗೆ ಸಿಎಸ್​ಆರ್ ನಿಧಿ ಮತ್ತು ವಿಶ್ವವಿದ್ಯಾಲಯದ ಹಳೆಯ ವಿದ್ಯಾರ್ಥಿಗಳು ನೀಡುವ ದೇಣಿಗೆ ಮೂಲಕ ವಿಶ್ವವಿದ್ಯಾಲಯದ ಅಭಿವೃದ್ಧಿಗಾಗಿ ಸಂಪನ್ಮೂಲಗಳನ್ನು ಸಂಗ್ರಹಿಸಲಾಗುತ್ತದೆ.
ಬೇರು-ಚಿಗುರು:ಹಳೆಯ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಅಭಿವೃದ್ಧಿಗೊಳಿಸಲು ‘ಬೇರು-ಚಿಗುರು’ ಎಂಬ ನೂತನ ಕಾರ್ಯಕ್ರಮ. ವಿಷಯ ತಜ್ಞರು, ನಾಗರಿಕ ಸೇವಾ ಅಧಿಕಾರಿಗಳು ಮತ್ತು ಉದ್ಯಮಗಳಿಂದ ಸರ್ಕಾರಿ ಪಾಲಿಟೆಕ್ನಿಕ್ ಹಾಗೂ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ ‘ಪ್ರೇರಣಾ’ ಕಾರ್ಯಕ್ರಮದಡಿ ಮಾರ್ಗದರ್ಶನ.
ಕಲಬುರಗಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮಕ್ಕಳ ಆರೋಗ್ಯ ಘಟಕ ಸ್ಥಾಪನೆ ಬೆಂಗಳೂರಿನ ನೆಫ್ರೋ-ಯುರಾಲಜಿ ಸಂಸ್ಥೆಯ ಶಸ್ತ್ರ ಚಿಕಿತ್ಸಾ ವಿಭಾಗದಲ್ಲಿ 20 ಕೋಟಿ ರೂ.ಗಳ ವೆಚ್ಚದಲ್ಲಿ ರೋಬೋಟಿಕ್ ಯಂತ್ರದ ಮೂಲಕ ಶಸ್ತ್ರಚಿಕಿತ್ಸೆ ನೀಡಲು ಕ್ರಮ. ್ಞದಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಹೃದಯ ಚಿಕಿತ್ಸಾ ಘಟಕ ಆರಂಭಿಸುವುದು. ್ಞೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಪಿಪಿಪಿ ಮಾದರಿಯಲ್ಲಿ ‘ಹೃದಯ ಚಿಕಿತ್ಸಾ ಘಟಕ’. ್ಞತ್ರದುರ್ಗದಲ್ಲಿ 500 ಕೋಟಿ ರೂ. ವೆಚ್ಚದಲ್ಲಿ ನಿರ್ವಿುಸಿರುವ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಾಲೇಜಿನ ಕಟ್ಟಡ, ವಿದ್ಯಾರ್ಥಿನಿಲಯ, ಸಿಬ್ಬಂದಿ ವಸತಿಗೃಹ ಪೂೂರ್ಣಗೊಳಿಸಲು ಕ್ರಮ ್ಞಾಲ್ವಡಿ ಕೃಷ್ಣರಾಜ ಒಡೆಯರ್ ಸ್ಥಾಪಿಸಿದ ಮೈಸೂರು ವೈದ್ಯಕೀಯ ಮಹಾವಿದ್ಯಾಲಯದ ಶತಮಾನೋತ್ಸವ ನೆನಪಿಗಾಗಿ ಕೆ.ಆರ್. ಆಸ್ಪತ್ರೆ ಆವರಣದಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಹೊರರೋಗಿ ವಿಭಾಗ ಕಟ್ಟಡ ನಿರ್ವಣ.
ಹಿಂದುಳಿದ ವರ್ಗಗಳಿಗೆ ಅನುದಾನದ ಬಲ:ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಅಲ್ಪಸಂಖ್ಯಾತರ ಅಭಿವೃದ್ಧಿಗೆ ಹಲವು ಉಪಕ್ರಮಗಳನ್ನು ಘೋಷಿಸಿರುವ ಸರ್ಕಾರ, ಭರಪೂರ ಅನುದಾನವನ್ನೂ ಒದಗಿಸಿದೆ. ರಾಜ್ಯದಲ್ಲಿನ ವಕ್ಪ್ ಆಸ್ತಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗಾಗಿ 100 ಕೋಟಿ ರೂ. ಹಾಗೂ ಮಂಗಳೂರಿನಲ್ಲಿ ಹಜ್ ಭವನ ನಿರ್ವಿುಸಲು 10 ಕೋಟಿ ರೂ. ಘೋಷಿಸಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ವಸತಿ ಶಾಲೆಗಳು ಮತ್ತು ವಿದ್ಯಾರ್ಥಿ ನಿಲಯಗಳ ನಿರ್ವಣಕ್ಕಾಗಿ ಒಟ್ಟು 2,710 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಇಲಾಖೆಗಳಿಗೆ ಸೇರಿದ ಒಟ್ಟು 29 ವಸತಿ ಶಾಲಾ ಸಂಕೀರ್ಣಗಳ ನಿರ್ಮಾಣ ಕಾಮಗಾರಿಗಳನ್ನು 638 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲು ಮತ್ತು ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ 31 ಹೊಸ ಮೆಟ್ರಿಕ್ ನಂತರದ ವಸತಿನಿಲಯಗಳನ್ನು ನಿರ್ವಿುಸಲು ಸರ್ಕಾರ ನಿರ್ಧರಿಸಿದೆ.
ಚಿಕಿತ್ಸೆಗೆ ನೆರವು:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದ ಜನರಿಗೆ ವಿರಳ ಮತ್ತು ದುಬಾರಿ ವೆಚ್ಚದ ಚಿಕಿತ್ಸಾ ಸೇವೆಗಳನ್ನು ಒದಗಿಸಲು 35 ಕೋಟಿ ರೂ.ಗಳ ಕಾರ್ಪಸ್ ನಿಧಿ.
ಅಧ್ಯಯನ ಪೀಠ:ಪದ್ಮಶ್ರೀ ಡಾ. ಸಿದ್ದಲಿಂಗಯ್ಯ ಅವರ ಸ್ಮರಣಾರ್ಥ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಪೀಠ ಸ್ಥಾಪಿಸಲಾಗುವುದು
ಡ್ರೋನ್ ತರಬೇತಿ:ಡ್ರೋನ್ ಆಧಾರಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿಗಾಗಿ ಪರಿಶಿಷ್ಟ ಪಂಗಡದ 5,000 ಯುವಕ/ ಯುವತಿಯರಿಗೆ ಡ್ರೋನ್ ತರಬೇತಿ.
ಅಲೆಮಾರಿ ಸಮುದಾಯಗಳಿಗೆ ನೆರವು:ಪರಿಶಿಷ್ಟ ಪಂಗಡದ ಕೊರಗ, ಜೇನುಕುರುಬ, ಯರವ, ಕಾಡುಕುರುಬ, ಸೋಲಿಗ, ಗೊಂಡ, ಸಿದ್ದಿ, ಮಲೈಕುಡಿ, ಕುಡಿಯ, ಹಸಲರು, ಗೌಡಲು, ಬೆಟ್ಟಕುರುಬ, ಹಕ್ಕಿ-ಪಿಕ್ಕಿ, ಇರುಳಿಗ, ರಾಜಗೊಂಡ ಹರಿಣಿಶಿಕಾರಿ ಮುಂತಾದ 23 ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ ಏಕಲವ್ಯ ಮಾದರಿಯ ಪ್ರತಿ ವಸತಿ ಶಾಲೆಯಲ್ಲಿ 20 ಸೀಟುಗಳನ್ನು ಮೀಸಲಿರಿಸಿ, ಪ್ರವೇಶ ಪರೀಕ್ಷೆಯಿಂದ ವಿನಾಯಿತಿ ನೀಡಿ ನೇರ ಪ್ರವೇಶ ಕಲ್ಪಿಸಲಾಗುವುದು. ಪಡಿತರ ಚೀಟಿ ಮುಂತಾದ ಸರ್ಕಾರಿ ದಾಖಲೆಗಳನ್ನು ಒದಗಿಸಲು ವಿಶೇಷ ಕೋಶವನ್ನು 3 ಕೋಟಿ ರೂ.ಗಳ ಅನುದಾನದಲ್ಲಿ ತಾತ್ಕಾಲಿಕವಾಗಿ ಒಂದು ವರ್ಷದ ಅವಧಿಗೆ ಸ್ಥಾಪಿಸಲಾಗುವುದು.
ಆಯೋಗ ರಚನೆ:ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಆರ್ಥಿಕ ಹಾಗೂ ಸಾಮಾಜಿಕ ಸ್ಥಿತಿಗತಿಗಳ ಬಗ್ಗೆ ಅಧ್ಯಯನ ಮಾಡಲು ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಆಯೋಗ ರಚನೆ.
ಉಚಿತ ತರಬೇತಿ:ಇಂಜಿನಿಯರಿಂಗ್ ಹಾಗೂ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲು ಪ್ರಸಕ್ತ ಸಾಲಿನಲ್ಲಿ 500 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಎರಡು ವರ್ಷಗಳ ಜೆಇಇ/ನಿಟ್ ತರಬೇತಿಯನ್ನು ಉಚಿತವಾಗಿ ನೀಡಲಾಗುವುದು.
1) ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಸಹಯೋಗದಲ್ಲಿ ಸರ್ಕಾರಿ ಪ್ರೌಢಶಾಲೆ ಮತ್ತು ಪಿಯು ಕಾಲೇಜುಗಳನ್ನು ಆರಂಭಿಸಲಾಗುವುದು.
2) ರಾಜ್ಯದಲ್ಲಿರುವ 74 ಆದರ್ಶ ವಿದ್ಯಾಲಯಗಳನ್ನು ವಾಣಿಜ್ಯ ಮತ್ತು ವಿಜ್ಞಾನ ವಿಷಯಗಳಲ್ಲಿ ಪಿಯು ಕಾಲೇಜುಗಳನ್ನಾಗಿ ಉನ್ನತೀಕರಿಸುವುದು.
3) ಪಿಯು ಕಾಲೇಜುಗಳಲ್ಲಿ ವಿಜ್ಞಾನ ವ್ಯಾಸಂಗ ಮಾಡುತ್ತಿರುವ ಅಂದಾಜು 20 ಸಾವಿರ ವಿದ್ಯಾರ್ಥಿಗಳಿಗೆ 10 ಕೋಟಿ ರೂ. ವೆಚ್ಚದಲ್ಲಿ ನೀಟ್/ಜೆಇಇ/ಸಿಇಟಿ ತರಬೇತಿ.
ಕ್ರಿಕೆಟಿಗ ಸರ್ಫರಾಜ್ ಖಾನ್ ತಂದೆಗೆ ಥಾರ್ ಬಹುಮಾನ: ಆನಂದ್ ಮಹೀಂದ್ರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 2 =
Remember me
