ಶಿವಮೊಗ್ಗ:ರಾಜ್ಯದ ಮುಂದಿನ ವಿಧಾನಸಭಾ ಅಧಿವೇಶನದಲ್ಲಿ ಲವ್ ಜಿಹಾದ್ ವಿರುದ್ಧದ ಮಸೂದೆ ಮಂಡನೆ ಮಾಡಲು ರಾಜ್ಯ ಸರ್ಕಾರ ಸಿದ್ಧತೆ ನಡೆಸುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಈ ವಿಷಯ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ನಡೆದಿದ್ದ ವಿಶೇಷ ಸಭೆಯಲ್ಲಿ ಗೋಹತ್ಯೆ ನಿಷೇಧ ಹಾಗೂ ಲವ್ ಜಿಹಾದ್ ಬಗ್ಗೆ ಚರ್ಚಿಸಲಾಗಿತ್ತು. ಅದರಂತೆ ಕಳೆದ ಅಧಿವೇಶನದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿ ಮಾಡಲಾಗಿದೆ. ಮುಂದೆ ಲವ್ ಜಿಹಾದ್ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸುದ್ದಿಗಾರರಿಗೆ ಕಟೀಲ್ ತಿಳಿಸಿದರು.
ಗ್ರಾಮ ಪಂಚಾಯಿತಿ ಚುನಾವಣೆ ಸೋಲು ಕಾಂಗ್ರೆಸ್ ನಾಯಕರನ್ನು ಹತಾಶೆಗೆ ದೂಡಿದೆ. ಬಿಜೆಪಿ ಬೆಂಬಲಿಗರು ಅಭೂತಪೂರ್ವ ಗೆಲುವು ಸಾಧಿಸಿರುವುದನ್ನು ಕಂಡು ಕಾಂಗ್ರೆಸ್ ಮುಖಂಡರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಇನ್ನೂ 10 ವರ್ಷ ಅಧಿಕಾರಕ್ಕೆ ಬರುವುದಿಲ್ಲ ಎಂಬ ಭಯ ಅವರಿಗೆ ಆರಂಭವಾಗಿದೆ. ಹಾಗಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ದೂರಿದರು.
ಇದನ್ನೂ ಓದಿ:ಹೈದರಾಬಾದ್​ ಆಸ್ಪತ್ರೆಯಿಂದ ಬಿಡುಗಡೆಯಾದ ಬೆನ್ನಲ್ಲೇ ಅಮೆರಿಕಾಗೆ ಹಾರಿದ ರಜನಿಕಾಂತ್​!
ರಾಜ್ಯದಲ್ಲಿ 42 ಸಾವಿರ ಬಿಜೆಪಿ ಕಾರ್ಯಕರ್ತರು ಗ್ರಾಪಂ ಚುನಾವಣೆಯಲ್ಲಿ ಗೆದ್ದಿದ್ದಾರೆ. ಶಿವಮೊಗ್ಗ ಸಂಘಟನಾತ್ಮಕ ಪ್ರಮುಖ ಕೇಂದ್ರ. ಹಾಗಾಗಿ ಇಲ್ಲಿ 2 ದಿನ ಸಭೆ ನಡೆಯುತ್ತಿದೆ. ಸಂಘಟನಾತ್ಮಕವಾಗಿ 3 ತಿಂಗಳಿಗೆ ಕಾರ್ಯಕಾರಿಣಿ ಮತ್ತು ವಿಶೇಷ ಸಭೆ ನಡೆಯಲಿದೆ. ಅದರಂತೆ ಶಿವಮೊಗ್ಗದಲ್ಲಿ ವಿಶೇಷ ಕಾರ್ಯಕಾರಿಣಿ ಸಭೆ ನಡೆಯುತ್ತಿದೆ ಎಂದರು.
‘ನಂಗೆ ಬಿಜೆಪಿ ಬಗ್ಗೆ ನಂಬಿಕೆ ಇಲ್ಲ, ಕರೊನಾ ಲಸಿಕೆ ತೆಗೆದುಕೊಳ್ಳುವುದಿಲ್ಲ!’ ಕರೊನಾ ಲಸಿಕೆಯ ಬಗ್ಗೆ ಅಪನಂಬಿಕೆ ವ್ಯಕ್ತಪಡಿಸಿದ ನಾಯಕ

ನಿಮ್ಮ ಬಳಿ 1 ರೂಪಾಯಿ ನೋಟಿದೆಯಾ? ಹಾಗಿದ್ರೆ ಲಕ್ಷ ಲಕ್ಷ ಸಿಗಬಹುದು ಇಲ್ನೋಡಿ..!

ದೇವರನ್ನೇ ಅಪಹಾಸ್ಯ ಮಾಡಲು ಹೋಗಿ ಅರೆಸ್ಟ್ ಆದ ಕಾಮಿಡಿಯನ್​; ಷಾಗೂ ಟೀಕೆ… ಐವರ ಬಂಧನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 3 =
Remember me
