ಗದಗ:ಬರ್ತ್​ ಡೇ ನೆಪದಲ್ಲಿ ಕೋವಿಡ್-19 ನಿಯಮ ಉಲ್ಲಂಘಿಸಿ ಭರ್ಜರಿಯಾಗಿ ಗುಂಡು-ತುಂಡಿನ ಪಾರ್ಟಿ ಮಾಡಿದ್ದ ಬಿಜೆಪಿ ಮುಖಂಡ ಎಸ್.ಎಚ್. ಶಿವನಗೌಡರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ.
ಆರೋಗ್ಯ ಸಚಿವ ಶ್ರೀರಾಮುಲು ಅವರ ಆಪ್ತವಯಲದಲ್ಲಿ ಗುರುತಿಸಿಕೊಂಡಿದ್ದ ಶಿವನಗೌಡ ನಗರದ ಶ್ರೀನಿವಾಸ ಭವನದಲ್ಲಿ ಇತ್ತೀಚೆಗೆ ಅದ್ದೂರಿಯಾಗಿ ಬರ್ತ್ ಡೇ ಆಚರಿಸಿಕೊಂಡಿದ್ದರು. ಈ ಪಾರ್ಟಿಯಲ್ಲಿ ಪಾಲ್ಗೊಂಡ ಜನರು ಮಾಸ್ಕ್​ ಧರಿಸದೆ, ಪರಸ್ಪರ ಅಂತರವನ್ನೂ ಪಾಲಿಸದೆ ”ಎಣ್ಣೆ” ನಶೆಯಲ್ಲಿ ಕುಣಿದು ಕುಪ್ಪಳಿಸಿದ್ದರು.ಇದನ್ನೂ ಓದಿರಿಇಡೀ ರಾಜ್ಯ ಲಾಕ್​ಡೌನ್​?
ಸಾಮಾಜಿಕ ಅಂತರ ಮರೆತು ಪಾರ್ಟಿಯಲ್ಲಿ ಇನ್ನೂರಕ್ಕೂ ಹೆಚ್ಚು ಜನ ಪಾಲ್ಗೊಂಡಿದ್ದರು ಎನ್ನಲಾಗಿದೆ. ಕರೊನಾ ಸಂಕಷ್ಟ ಸಂದರ್ಭದಲ್ಲಿ ಪಾರ್ಟಿ ಬೇಕಿತ್ತಾ? ಎಂದು ಸಾರ್ವಜನಿಕ ವಲಯದಲ್ಲಿ ಆಕ್ರೋಶ ಕೇಳಿಬಂದಿತ್ತು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಬಿಜೆಪಿ, ಶಿವನಗೌಡನನ್ನು ಪಕ್ಷದಿಂದ ಅಮಾನತು ಮಾಡಿ ಜಿಲ್ಲಾ ಅಧ್ಯಕ್ಷ ಮೋಹನ್ ಮಾಳಶೆಟ್ಟಿ ಆದೇಶ ಹೊರಡಿಸಿದ್ದಾರೆ.
ಕರೊನಾ ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ಜನ ಗುಂಪು ಸೇರದಂತೆ, ಯಾವುದೇ ಕಾರ್ಯಕ್ರಮ ಆಯೋಜಿಸದಂತೆ ಸರ್ಕಾರ ನಿಷೇಧಾಜ್ಞೆ ಜಾರಿ ಮಾಡಿದೆ. ಆದರೆ, ಈ ನಿಯಮವನ್ನು ಆರೋಗ್ಯ ಸಚಿವರ ಆಪ್ತನೇ ಉಲ್ಲಂಘಿಸಿದ್ದು, ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಗುರಿಯಾಗಿತ್ತು.
‘ಕಾರ್ಯಕ್ರಮ ಆಯೋಜಿಸಿದ್ದು ನಾನಲ್ಲ, ಸ್ನೇಹಿತರು ಏರ್ಪಡಿಸಿದ್ದರು. ಅಲ್ಲಿಗೆ ನಾನು ಹೋಗಿದ್ದೆ’ ಎಂದು ಶಿವನಗೌಡ ಸ್ಪಷ್ಟನೆ ನೀಡಿದ್ದರು.
https://www.facebook.com/VVani4U/videos/3010413149056158/?v=3010413149056158
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − six =
Remember me
