ಬೆಂಗಳೂರು:ವೇತನ ಹೆಚ್ಚಳ, ಸೇವಾ ಭದ್ರತೆ, ನಿವೃತ್ತಿ ಸೌಲಭ್ಯ ಸೇರಿ ನಾನಾ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ನೇತೃತ್ವದಲ್ಲಿ ಬಿಸಿಯೂಟ ನೌಕರರು ನಡೆಸುತ್ತಿರುವ ಹೋರಾಟ ಇಂದಿಗೇ 11ನೇ ದಿನಕ್ಕೆ ಕಾಲಿಟ್ಟಿದೆ.
ಸ್ವಾತಂತ್ರ್ಯ ಉದ್ಯಾನ ಬಳಿ ನಡೆಯುತ್ತಿರುವ ಹೋರಾಟದಲ್ಲಿ ನಿತ್ಯ ಬೆಳಗ್ಗೆಯಿಂದ ಸಂಜೆಯವರೆಗೆ 2-3 ಜಿಲ್ಲೆಗಳ ನೌಕರರು ಸರದಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಇಂದು (ನ.9) ಉತ್ತರ ಕನ್ನಡ, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ನೌಕರರು ಧರಣಿಯಲ್ಲಿ ಭಾಗವಹಿಸಿದ್ದರು.
ಕಳೆದ 10 ದಿನಗಳಿಂದ ಹೋರಾಟ ನಡೆಸಲಾಗುತ್ತಿದ್ದು, ಈವರೆಗೂ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಇತ್ತ ತಿರುಗಿ ನೋಡಿಲ್ಲ. ಬೇಡಿಕೆಗಳ ಈಡೇರಿಕೆಗೆ 16ರವರೆಗೆ ಸರ್ಕಾರಕ್ಕೆ ಗಡುವು ನೀಡಿದ್ದು, ಅಷ್ಟರಲ್ಲಿ ಕ್ರಮ ಕೈಗೊಳ್ಳದಿದ್ದರೆ ರಾಜ್ಯಾದ್ಯಂತ ಬಿಸಿಯೂಟ ತಯಾರಿಕೆ ಸಂಪೂರ್ಣ ಸ್ಥಗಿತಗೊಳಿಸಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಮಾಲಿನಿ ಮೇಸ್ತ ಎಚ್ಚರಿಕೆ ನೀಡಿದ್ದಾರೆ.
16 ಬೇಡಿಕೆ ಈಡೇರಿಸಲು ಆಗ್ರಹ: ಬಿಸಿಯೂಟ ಯೋಜನೆಯನ್ನು ಖಾಸಗಿ ಸಂಸ್ಥೆಗಳಿಗೆ ವಹಿಸದೆ ಶಿಕ್ಷಣ ಇಲಾಖೆಯೇ ನಡೆಸಬೇಕು, ಎಸ್‌ಡಿಎಂಸಿಗೆ ವರ್ಗಾವಣೆ ಮಾಡಿರುವ ಸಾದಿಲ್ವಾರು ಜಂಟಿ ಖಾತೆ ಜವಾಬ್ದಾರಿಯನ್ನು ಹಿಂಪಡೆಯಬೇಕು, 60 ವರ್ಷಕ್ಕೆ ವಯೋ ನಿವೃತ್ತಿಯಾದವರಿಗೆ 1 ಲಕ್ಷ ಇಡುಗಂಟು ನೀಡುವ ಯೋಜನೆ ಜಾರಿಗೊಳಿಸಬೇಕು, ಕೆಲಸದ ಸ್ಥಳದಲ್ಲಿ ಮೃತಪಟ್ಟ ನೌಕರರಿಗೆ 25 ಲಕ್ಷ ರೂ. ಪರಿಹಾರ ಸೇರಿ 16 ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟು ಬಿಸಿಯೂಟ ನೌಕರರು ಹೋರಾಟ ನಡೆಸುತ್ತಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + ten =
Remember me
