ಬೆಂಗಳೂರು:ರಾಜ್ಯದ ಶಾಲಾ ಮಕ್ಕಳ ಬಿಸಿಯೂಟ ಯೋಜನೆ ಬಂದ್ ಆಗಿರುವ ಕುರಿತು ವಿಜಯವಾಣಿ ಪ್ರಕಟಿಸಿದ್ದ ವಿಶೇಷ ವರದಿಗೆ ಎಚ್ಚೆತ್ತಿರುವ ಸಾರ್ವಜನಿಕ ಶಿಕ್ಷಣ ಇಲಾಖೆ, ಅಕ್ಷರ ದಾಸೋಹ ಕಾರ್ಯಕ್ರಮದಡಿ ಶೀಘ್ರದಲ್ಲೇ ಮಕ್ಕಳಿಗೆ ಆಹಾರ ಧಾನ್ಯ ವಿತರಿಸಲು ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದೆ.
‘ಮಕ್ಕಳಿಗಿಲ್ಲ ಬಿಸಿಯೂಟ’ಶೀರ್ಷಿಕೆಯಡಿ ಸೋಮವಾರವಿಜಯವಾಣಿಮುಖಪುಟದಲ್ಲಿ ಪ್ರಕಟಿಸಿದ್ದ ವಿಶೇಷ ವರದಿಗೆ ಪ್ರತಿಕ್ರಿಯಿಸಿರುವ ಇಲಾಖೆ ಅಧಿಕಾರಿಗಳು, ಪ್ರಸ್ತುತ ವಿದ್ಯಾರ್ಥಿಗಳಿಗೆ 132 ದಿನಕ್ಕೆ ವಿತರಿಸಲು ಅಗತ್ಯವಿರುವಷ್ಟು ಆಹಾರ ಧಾನ್ಯ ಖರೀದಿಸಿ ಸರಬರಾಜು ಮಾಡುವ ಪ್ರಕ್ರಿಯೆಯನ್ನು ತುರ್ತಾಗಿ ಆರಂಭಿಸಲಾಗಿದೆ. ನಿಗದಿತ ಕಾಲಮಿತಿಯೊಳಗೆ ಆಹಾರ ಧಾನ್ಯಗಳ ಸರಬರಾಜು ಮಾಡುವಂತೆ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮಕ್ಕೂ (ಕೆಎಫ್​ಸಿಎಸ್​ಸಿ) ಕೋರಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
2020-21ನೇ ಸಾಲಿನಲ್ಲಿ ಕರೊನಾ ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 1ರಿಂದ 10ನೇ ತರಗತಿ ಮಕ್ಕಳಿಗೆ ಬಿಸಿಯೂಟ ಬದಲಾಗಿ ಆಹಾರ ಧಾನ್ಯ ವಿತರಿಸಲಾಗುತ್ತಿದೆ. ಕಳೆದ ಜೂನ್​ನಿಂದ ಆಗಸ್ಟ್​ವರೆಗಿನ 108 ದಿನಗಳಿಗೆ ಈಗಾಗಲೇ ಎಲ್ಲ ಜಿಲ್ಲಾ ಪಂಚಾಯಿತಿ ನಿಧಿ-1ಕ್ಕೆ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಮಧ್ಯಾಹ್ನ ಉಪಾಹಾರ ಯೋಜನೆ ಜಂಟಿ ನಿರ್ದೇಶಕ ಟಿ.ನಾರಾಯಣಗೌಡ ತಿಳಿಸಿದ್ದಾರೆ. 108 ದಿನಗಳಿಗೆ ಅಗತ್ಯವಿರುವ ಆಹಾರ ಧಾನ್ಯಗಳನ್ನು ಕೆಎಫ್​ಸಿಎಸ್​ಸಿ ಗೋದಾಮುಗಳಲ್ಲಿ ಏಕ ಕಾಲದಲ್ಲಿ ಸಂಗ್ರಹಿಸಲು ಕಷ್ಟವಾಗಿದ್ದರಿಂದ 2 ಹಂತದಲ್ಲಿ ವಿತರಿಸಲು ತೀರ್ವನಿಸಲಾಗಿತ್ತು. ಜೂನ್, ಜುಲೈ ಅವಧಿಯ 53 ದಿನಗಳಿಗೆ ಆಹಾರಧಾನ್ಯ ವಿತರಿಸಲಾಗಿದೆ. ಉಳಿದ 55 ದಿನಗಳ ವಿತರಣೆ ಪ್ರಗತಿಯಲ್ಲಿದೆ. 2020ರ ನವೆಂಬರ್​ನಿಂದ 2021ರ ಏಪ್ರಿಲ್​ವರೆಗಿನ 132 ಶಾಲಾ ದಿನಗಳ ವಿತರಣೆಗೆ ಈಗಾಗಲೇ ಅನುದಾನ ಬಿಡುಗಡೆ ಆಗಿದೆ. 3 ಹಂತಗಳಲ್ಲಿ ವಿತರಿಸಲು ಜಿಲ್ಲೆಗಳಿಂದ ಆಹಾರ ಧಾನ್ಯಗಳ ಬೇಡಿಕೆ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ನಾರಾಯಣಗೌಡ ತಿಳಿಸಿದರು.
ಬೇಡ ಬೇಡ ಅಂದ್ರೂ ಸಾವಿನ ಮನೆಯ ಕದ ತಟ್ಟಿದ 15ರ ಬಾಲಕ! ಕಳೆದ ವಾರವೇ ಪೊಲೀಸರು ಎಚ್ಚರಿಸಿದ್ದರು

ತಹಸೀಲ್ದಾರ್​ ಕಚೇರಿ ಬಳಿ ಹಾವಿನ ಜತೆ ಆಟವಾಡುತ್ತಿದ್ದ ವೃದ್ಧ ಕ್ಷಣಾರ್ಧದಲ್ಲೇ ಪ್ರಾಣಬಿಟ್ಟ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 8 =
Remember me
