ಶಿವಮೊಗ್ಗ:ಬಾವಿಗೆ ಬಿದ್ದ ಕಾಡೆಮ್ಮೆ ಮರಿಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಪೊಲೀಸ್​ ಸಿಬ್ಬಂದಿ, ಅಗ್ನಿಶಾಮಕ ದಳದ ಸಹಾಯದಿಂದ ಸುರಕ್ಷಿತವಾಗಿ ರಕ್ಷಣೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಚಿಪ್ಪಲಿ-ಲಿಂಗದಳ್ಳಿ ಗ್ರಾಮದಲ್ಲಿ ವರದಿಯಾಗಿದೆ.
ಇದನ್ನೂ ಓದಿ:ಎನ್‌ಇಪಿ ಪಠ್ಯಕ್ರಮ ಬದಲಾವಣೆ ಸದ್ಯಕ್ಕಿಲ್ಲ, ಮಂಗಳೂರು ವಿವಿ ಶೈಕ್ಷಣಿಕ ಮಂಡಳಿ ಸಭೆಯಲ್ಲಿ ಪ್ರಭಾರ ಕುಲಪತಿ ಪ್ರೊ.ಜಯರಾಜ್ ಅಮೀನ್ ಹೇಳಿಕೆ
ಗುರುವಾರ (ಆಗಸ್ಟ್​ 10) ಬೆಳಗ್ಗೆ ಅರಣ್ಯ ಪ್ರದೇಶದಲ್ಲಿ ಸಂಚರಿಸುವಾಗ ಕಾಡೆಮ್ಮೆ ಮರಿ ತೆರೆದ ಬಾವಿಯೊಳಗೆ ಬಿದ್ದಿದೆ. ಈ ಸಂಗತಿ ತಿಳಿದ ಗ್ರಾಮಸ್ಥರು, ಕೂಡಲೇ ಅರಣ್ಯ ಇಲಾಖೆಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಶೀಘ್ರವೇ ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು, ಕ್ಷಿಪ್ರ ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿ, ಅಗ್ನಿಶಾಮಕ ಸಿಬ್ಬಂದಿ ಮತ್ತು ಪಶು ವೈದ್ಯರ ತಂಡದ ಸಹಾಯದಿಂದ ಕ್ರೇನ್ ಬಳಸಿ ಮರಿಯನ್ನು ರಕ್ಷಿಸಿದ್ದಾರೆ.
20 ಅಡಿ ಆಳದ ಬಾವಿಗೆ ಬಿದ್ದ ಕಾಡೆಮ್ಮೆ ಮರಿಯನ್ನು ಜೆಸಿಬಿ ಕ್ರೇನ್ ಸಹಾಯದಿಂದ ಯಶಸ್ವಿಯಾಗಿ ಮೇಲೆತ್ತಲಾಗಿದೆ. ರಕ್ಷಣಾ ಕಾರ್ಯಾಚರಣೆಯ ನಂತರ, ಮರಿ ಸುಧಾರಿಸಿಕೊಂಡು ಬಳಿಕ ಮಂದಗತಿಯಲ್ಲಿ ಕಾಡಿನತ್ತ ಮರಳಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ,(ಏಜೆನ್ಸೀಸ್).
ಒಟಿಟಿಯಲ್ಲಿ ಸದ್ದಿಲ್ಲದೇ ರಿಲೀಸ್​ ಆಯ್ತು ಬಾಲಿವುಡ್​ನ ರೋಮ್ಯಾಂಟಿಕ್​ ಸಿನಿಮಾ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:thirteen + 8 =
Remember me
