ಶಿವಮೊಗ್ಗ:ದೇಶಾದ್ಯಂತ ಕುಸಿದು ಬಿದ್ದು ಸಾವಿಗೀಡಾಗುತ್ತಿರುವ ಪ್ರಕರಣಗಳು ಹೆಚ್ಚಾಗಿದ್ದು, ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕಾರ್ಯಕ್ರಮದಲ್ಲೇ ಬಿಜೆಪಿ ಕಾರ್ಯಕರ್ತನೊಬ್ಬ ಕುಸಿದು ಬಿದ್ದು ಸಾವಿಗೀಡಾಗಿದ್ದಾನೆ.
ಇದನ್ನೂ ಓದಿ:19ರ ಯುವಕ ಡ್ಯಾನ್ಸ್​ ಮಾಡುತ್ತಲೇ ಕುಸಿದು ಬಿದ್ದು ಸಾವು; ಸಂಭ್ರಮದ ಸಂದರ್ಭದಲ್ಲೇ ಶೋಕ
ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಪ್ರಧಾನಿ ಮೋದಿ ಆಗಮಿಸಿದ್ದು, ಈ ಸಮಾರಂಭಕ್ಕೆ ಬಂದಿದ್ದ ಬಿಜೆಪಿ ಕಾರ್ಯಕರ್ತ ಹಠಾತ್ ಸಾವಿಗೆ ಒಳಗಾಗಿದ್ದಾನೆ. ಸೊರಬ ತಾಲೂಕು ಚಿಮನೂರು ಗ್ರಾಮದ ಸಿ.ಬಿ. ಮಲ್ಲಿಕಾರ್ಜುನ್ ಕುಸಿದು ಬಿದ್ದು ಸಾವಿಗೀಡಾದ ವ್ಯಕ್ತಿ.
ಇದನ್ನೂ ಓದಿ:ಡ್ಯಾನ್ಸ್ ವೇಳೆಯೇ ವಿದ್ಯಾರ್ಥಿ ಕುಸಿದು ಬಿದ್ದು ಸಾವು; ಪ್ರತಿಭಟನೆಗೂ ಸಾವಿಗೂ ಸಂಬಂಧವಿಲ್ಲ: ಅಜೀಮ್​ ಪ್ರೇಮ್​ಜಿ ವಿವಿ ಸ್ಪಷ್ಟನೆ
ಕಾರ್ಯಕ್ರಮ ನಡೆಯುತ್ತಿದ್ದ ಸ್ಥಳದಲ್ಲೇ ಅಸ್ವಸ್ಥಗೊಂಡ ಮಲ್ಲಿಕಾರ್ಜುನ್ ನೀರನ್ನು ಕೇಳಿದ್ದಾರೆ. ಆದರೆ ಅವರಿಗೆ ಸಕಾಲದಲ್ಲಿ ಕುಡಿಯಲು‌ ನೀರು ಸಿಕ್ಕಿಲ್ಲ ಎನ್ನಲಾಗಿದೆ. ನಂತರ ಕೆಲವೇ ಕ್ಷಣಗಳಲ್ಲಿ ಕುಸಿದು ಬಿದ್ದು ಮಲ್ಲಿಕಾರ್ಜುನ್ ಸ್ಥಳದಲ್ಲೇ ಸಾವಿಗೀಡಾದರು. ಇವರು ಕಳೆದ 30 ವರ್ಷಗಳಿಂದ ಬಿಜೆಪಿಯೊಂದಿಗೆ ಗುರುತಿಸಿಕೊಂಡು ಕಾರ್ಯಕರ್ತರಾಗಿದ್ದರು ಎನ್ನಲಾಗಿದೆ.
ಇದೋ ಬಂದಿದೆ ಕಿಸ್ಸಿಂಗ್ ಡಿವೈಸ್; ಚುಂಬಿಸುವ ಇಬ್ಬರು ಎಷ್ಟೇ ದೂರದಲ್ಲಿದ್ದರೂ ಸಿಗುವುದು ನೈಜ ಮುತ್ತಿನ ಗಮ್ಮತ್ತು!

ಒಂದೇ ಮನೆಯ ನಾಲ್ವರನ್ನು ಕೊಂದಿದ್ದ ಅಪ್ಪ-ಮಗನ ಬಂಧನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + 14 =
Remember me
